ಜ.26-ಜ.29: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಗುರುವಾರದಿಂದ ಜ.29 ಆದಿತ್ಯವಾರದವರೆಗೆ ಜರುಗಲಿದೆ. ಜ.20ರಂದು ಬೆಳಗ್ಗೆ ಗಂಟೆ 11.30ಕ್ಕೆ ಉಗ್ರಾಣ ಮುಹೂರ್ತ ಹಾಗೂ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ.ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ; ಶ್ರೀ ದೇವರ ಬಲಿ ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು. ಜ.19 ರಂದು...
Ad Widget

ಶೇಣಿ ಹೊಸಮಜಲು ರಸ್ತೆ ಅಭಿವೃದ್ಧಿಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ – ಗ್ರಾಮಸ್ಥರ ಆಕ್ರೋಶ

ಅಮರಪಡ್ನೂರು ಗ್ರಾಮದ ಶೇಣಿ -ಹೊಸಮಜಲು ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿಗೆ ಹಲವಾರು ದಶಕಗಳಿಂದ ಜನ ಒತ್ತಾಯ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದು ಗ್ರಾಮಸ್ಥರು ಆಕ್ರೋಶಕ್ಕೆ ಕಾರಣವಾಗಿದೆ. ಈ ರಸ್ತೆಯು ಸುಮಾರು 20 ಕ್ಕಿಂತ ಹೆಚ್ಚು ಮನೆಗಳಿಗೆ ಹಾದು ಹೋಗುತ್ತದೆ, ಮಳೆಗಾಲದಲ್ಲಿ ಕೆಸರಿನಲ್ಲಿ ನಡೆದಾಡಲಾಗದ ಪರಿಸ್ಥಿತಿಯು ಉಂಟಾಗಿತ್ತು. ಶಾಲಾ ಮಕ್ಕಳು ಹಾಗೂ ವಾಹನ ಸವಾರರು ಹೋಗಲಾಗದೇ...

ಜ.23: ಕಳಂಜ ಗ್ರಾಮ ಸಭೆ

ಕಳಂಜ ಗ್ರಾಮ ಪಂಚಾಯತಿನ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜ.23 ಸೋಮವಾರದಂದು ಪೂರ್ವಾಹ್ನ ಗಂಟೆ 10.30ಕ್ಕೆ ಕಳಂಜ ಗ್ರಾಮ ಪಂಚಾಯತಿನ ಗೌರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ಕೆ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸುಳ್ಯ ಇದರ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಭಾಗವಹಿಸಲಿದ್ದಾರೆ....

ಜ.26-ಜ.29: ಅಯ್ಯನಕಟ್ಟೆ ಜಾತ್ರೋತ್ಸವ; ಉಪಸಮಿತಿಗಳ ಸಂಚಾಲಕರು, ಉಪ ಸಂಚಾಲಕರು ಹಾಗೂ ಭಕ್ತರ ಸಭೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಜಾತ್ರೋತ್ಸವ ಉಪಸಮಿತಿಗಳ ಸಂಚಾಲಕರು, ಉಪ ಸಂಚಾಲಕರು ಹಾಗೂ ಭಕ್ತರ ಸಭೆಯು ಇಂದು(ಜ.17) ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ನಡೆಸುವ ಸಲುವಾಗಿ ವಿವಿಧ ತಂಡಗಳನ್ನು ರಚಿಸಲಾಯಿತು. ಸಭೆಯಲ್ಲಿ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ, ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಇಂದು(ಜ.16 ರಂದು) ಬೆಳಿಗ್ಗೆ ಗಂಟೆ 9-10 ರಿಂದ 9-45 ರ ಕುಂಭ ಲಗ್ನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ ನೆರವೇರಿತು. ಈ ಸಂದರ್ಭದಲ್ಲಿ ಪವಿತ್ರವಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ...

ಅಡ್ಕಾರ್ ಸ್ಟೋರ್ ಮಾಲಕರಿಂದ ತಂದೆಯ ಪುಣ್ಯಸ್ಮರಣೆ ಪ್ರಯುಕ್ತ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯಧನ ವಿತರಣೆ

ನೆಲ್ಲೂರು ಕೆಮ್ರಾಜೆ ಗ್ರಾಮದ ಬೆಟ್ಟ ಎಂಬಲ್ಲಿ ಜಿನಸು ಅಂಗಡಿ ವ್ಯಾಪಾರ ನಡೆಸುತ್ತಿರುವ ಜಾಲ್ಸೂರು ಗ್ರಾಮದ ಸತೀಶ್ ಅಡ್ಕಾರ್ ರವರು ತನ್ನ ತಂದೆ ಅಡ್ಕಾರ್ ದಿ.ಕೃಷ್ಣಪ್ಪ ಗೌಡ ಅವರ ಪುಣ್ಯಸ್ಮರಣೆ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯಧನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ...

ಕಲ್ಲಪಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಜಗದೀಶ್ ಪಿ.ಬಿ ನಿಧನ

ಕಲ್ಲಪಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಜಗದೀಶ್ ಪಿ.ಬಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮೃತರು ತಾಯಿ,ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ನಾಟಿ ವೈದ್ಯರಾಗಿಯೂ...

ಅಯ್ಯನಕಟ್ಟೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಇಂದು (ಜ.14ರಂದು) ನಡೆಯಿತು. ಮೊದಲಾಗಿ ಮೂರುಕಲ್ಲಡ್ಕ ದೈವಸ್ಥಾನದಲ್ಲಿ ಸಂಕ್ರಮಣ ತಂಬಿಲ ಸೇವೆ ನಡೆಯಿತು. ತದನಂತರ ಆಮಂತ್ರಣ ಪತ್ರಿಕೆಯನ್ನು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು(ರಿ.) ಮೂರುಕಲ್ಲಡ್ಕ ಹಾಗೂ ಅಯ್ಯನಕಟ್ಟೆ ಜಾತ್ರೋತ್ಸವ...

ಮೂರುಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದಿಂದ ಶ್ರಮದಾನ

ಬಾಳಿಲ ಗ್ರಾಮದ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ 'ಅಯ್ಯನಕಟ್ಟೆ ಜಾತ್ರೆ'ಯು ಆರಂಭಗೊಳ್ಳಲಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದ ಸದಸ್ಯರಿಂದ ಜ.12ರಂದು ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
Loading posts...

All posts loaded

No more posts

error: Content is protected !!