ನ.30 ರಂದು ಸುಳ್ಯ ಪ್ರೆಸ್ ಕ್ಲಬ್ ನೂತನ ಕಟ್ಟಡ ಉದ್ಘಾಟನೆ

ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್‌ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....

ಎಣ್ಮೂರು ಪ್ರೌಢಶಾಲೆಯ ನೂತನ ಕೊಠಡಿಗೆ ಮಾನ್ಯ ಸಚಿವರಿಂದ ಶಂಕುಸ್ಥಾಪನೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ ರವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು...
Ad Widget

ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ವಿಷನ್ ಫಾರ್ ಇಂಡಿಯಾ 2047 ವಿಶೇಷ ಕಾರ್ಯಕ್ರಮ

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಮಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಐಟಿಡಿಪಿ ದ.ಕ. ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಡಕಟ್ಟು ಗೌರವ ದಿನ, ಸ್ವಾತಂತ್ರ್ಯದ ಅಮೃತ ಮಹೋತ್ಸವ, ಪ್ರಧಾನ ಮಂತ್ರಿ ವಿಷನ್ ಫಾರ್ ಇಂಡಿಯಾ 2047 ಕುರಿತು ವಿಶೇಷ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನದ ಉದ್ಘಾಟನಾ ಸಮಾರಂಭ...

ಪೆರಾಜೆ : ಮಕ್ಕಳ ದಿನಾಚರಣೆ ಹಾಗೂ ಕ್ರೀಡಾಕೂಟ

ಪೆರಾಜೆಯ ಕುಂಡಾಡು ಸ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕ್ರೀಡಾಕೂಟ ಸಮಾರಂಭ ನ.14 ರಂದು ನಡೆಯಿತು. ಶಾಲಾಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ವಿದ್ಯಾರ್ಥಿಗಳು ಮತ್ತು ಪೋಷಕರು ಸೇರಿದಂತೆ ಸಾರ್ವಜನಿಕರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಸ್ಥಳ ದಾನಿಗಳಾದ ಶ್ರೀಮತಿ ಕುಸುಮಾವತಿ ಸುಬ್ಬಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಪೆರಾಜೆ ಗ್ರಾ.ಪಂ‌....

ಕಲ್ಲುಗುಂಡಿ : ಬಸ್ ಹಾಗೂ ಲಾರಿ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತ್ಯು

ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತಪಟ್ಟು, ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ...

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕಕ್ಕೆ ದ್ವಿತೀಯ ಬಹುಮಾನ

ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ .ಇವರಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ...

ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟ – ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಸಮಗ್ರ ಪ್ರಶಸ್ತಿ

ದಿನಾಂಕ 8 ಮತ್ತು 9 ನವೆಂಬರ್ 2022 ರಂದು ಕೆ.ಪಿ.ಎಸ್.ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಐವರ್ನಾಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇದರೊಂದಿಗೆ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ...

ಅಪಾಯದ ಭೀತಿಯಲ್ಲಿದೆ ಮಣಿಮಜಲು ಕಾಲುಸೇತುವೆ

ಪಂಜಿಗಾರು ಬಳಿಯಿರುವ ಮಣಿಮಜಲು ಕಾಲುಸೇತುವೆಯ ಎರಡೂ ಬದಿಗಳಲ್ಲಿ ಅಳವಡಿಸಿರುವ ಕಬ್ಬಿಣದ ರಕ್ಷಣಾ ಬೇಲಿ ಮುರಿದುಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಕಾಲುಸೇತುವೆ ಅತ್ಯಂತ ಕಿರಿದಾಗಿದ್ದು, ಸಾರ್ವಜನಿಕರು ಸಂಚರಿಸುವಾಗ ಅಪಾಯ ಎದುರಾಗುವ ಸಂಭವವಿದೆ. ಕಳಂಜ-ಮಣಿಮಜಲು ಭಾಗದ ಜನರಿಗೆ ಬೆಳ್ಳಾರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಇರುವ ಪ್ರಮುಖ ಕಾಲುಸೇತುವೆ ಇದಾಗಿದ್ದು ದಿನನಿತ್ಯ ಅನೇಕ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಈ ಕಾಲುಸೇತುವೆಯನ್ನು...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪೋಷಕರಾದ ಜಯರಾಮ ಚಾರ್ಮತ ಇವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಎಲ್ಲರಿಗೂ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಭಾಶಯಗಳನ್ನು ಸಲ್ಲಿಸಿ,...

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತ ತಿಮ್ಮಪ್ಪ ಗೌಡ ನಿವೃತ್ತಿ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತರಾಗಿರುವ ತಿಮ್ಮಪ್ಪ ಗೌಡ ಕುಕ್ಕುತ್ತಡಿಯವರು ಇಂದು ನಿವೃತ್ತಿ ಹೊಂದಲಿದ್ದಾರೆ. ಇವರು ಸಂಘದ ಪ್ರಧಾನ ಕಚೇರಿ ಕೋಟೆಮುಂಡುಗಾರು ಮತ್ತು ಬಾಳಿಲ ಶಾಖೆಯಲ್ಲಿ ಸುಮಾರು 40 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿರುತ್ತಾರೆ.
Loading posts...

All posts loaded

No more posts

error: Content is protected !!