ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರತಿಭಾ ಪ್ರದರ್ಶನ

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಐ.ಕ್ಯೂ.ಎ.ಸಿ ಘಟಕದ ಸಹಯೋಗದಲ್ಲಿ ತರಗತಿವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ನಾಟಕ ಕಲಾವಿದ ಹಾಗೂ ನಿರ್ದೇಶಕರಾದ ರಾಮಚಂದ್ರ.ಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಾಂಸ್ಕೃತಿಕ ಸಮಿತಿಯ ಸದಸ್ಯರಾದ ಮನೋಹರ ಸ್ವಾಗತಿಸಿ. ಕುಮಾರಿ ವೈಷ್ಣವಿ ಹಾಗೂ ಶರಣ್ಯ ಪ್ರಾರ್ಥಿಸಿದರು....

ಜೆಡಿಎಸ್ ರಾಜ್ಯ ವಕ್ತಾರರಾಗಿ ಎಂ.ಬಿ. ಸದಾಶಿವ ನೇಮಕ

ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ. ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು. ಹಾಲಿ ಶಾಸಕರು,ಸಂಸದರು, ಮಾಜಿ ಶಾಸಕರುಗಳನ್ನೊಳಗೊಂಡ 62 ಜನರನ್ನು ರಾಜ್ಯ ವಕ್ತಾರರನ್ನಾಗಿ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ಆದೇಶ ಮಾಡಿದ್ದಾರೆ. ಪರಿಚಯ...
Ad Widget

ರೋಟರಿ ಕ್ಲಬ್ ಮತ್ತು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಟರಿ ಶಿಕ್ಷಕರಿಗೆ ಗೌರವಾರ್ಪಣೆ

ರೋಟರಿ ಕ್ಲಬ್ ಮತ್ತು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.06 ರಂದು ರೋಟರಿ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮತ್ತು ರೋಟರಿ ಪದವಿ ಪೂರ್ವ ಕಾಲೇಜು ಮಿತ್ತಡ್ಕ ಇದರ ಸಭಾಭವನದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ ಕಿರುಕಾಣಿಕೆ ನೀಡಿ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸ೦ಚಾಲಕರಾದ ರೊ.ಗಿರಿಜಾಶಂಕರ...

ಪೆರ್ನಾಜೆ: ಮನತಣಿಸಿದ “ಸ್ವರ ಸಿಂಚನ ” @22 ಸಂಗೀತೋತ್ಸವ, ಪ್ರಶಸ್ತಿ ,ಸನ್ಮಾನ

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಹಾಗೂ ಪಡಿಬಾಗಿಲು ವಿದ್ಯಾರ್ಥಿಗಳಿಂದ ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಸಿಂಹ ಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಸಂಗೀತೋತ್ಸವ ಮತ್ತು ಪುರಸ್ಕಾರ, ಸನ್ಮಾನ ಪ್ರಶಸ್ತಿ ಪ್ರಧಾನ ಸಮಾರಂಭವು ವಿಟ್ಲ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಶ್ರೀಯುತ ವಿದ್ವಾನ್ ಡಾಕ್ಟರ್ ವಿ.ಆರ್ ನಾರಾಯಣ್ ಪ್ರಕಾಶ್ ಕ್ಯಾಲಿಕೆಟ್ ರವರು ಸಮಾರಂಭವನ್ನು...

ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಶಾಲಾ ಸಂಸತ್ತು, ವಿದ್ಯಾರ್ಥಿಗಳ ಶಿಕ್ಷಕರ ಸಹಭಾಗಿತ್ವದೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸ್ವಾಗತ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪಾಡಿ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕರನ್ನು ಹೂಗುಚ್ಛ ಹಾಗೂ ಕಿರು ಕಾಣಿಕೆಯನ್ನು ನೀಡಿ ಸನ್ಮಾನಿಸಿದರು....

ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ-ಸರಕಾರಿ ಪ್ರೌಢ ಶಾಲೆ ಎಣ್ಮೂರಿಗೆ ಸಮಗ್ರ ಪ್ರಶಸ್ತಿ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಸೆ.03 ರಂದು ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಪ್ರತಿಭಾ ಕಾರಂಜಿಯನ್ನು ಮುರುಳ್ಯ ಗ್ರಾಮಪಂಚಾಯತ್ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ ಉದ್ಘಾಟಿಸಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು.ಕೆ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಪ್ರತಿಭಾ ಕಾರಂಜಿ ನೋಡೆಲ್ ಶ್ರೀ ವಸಂತ ಏನೆಕಲ್, BRP...

ಬಾಲಾವಲಿಕಾರ್ ರಾಜಾಪುರ ಸಾರಸ್ವತ ಯುವ ಸಮಾಜದ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶ ಚತುರ್ಥಿ ಆಚರಣೆ

ಬಾಲಾವಲಿಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ. 28 ರಂದು ಕೃಷ್ಣ ವೇಷ ಸ್ಪರ್ಧೆ, ವಿವಿಧ ಮನೋರಂಜನಾ ಮತ್ತು ಆಟೋಟ ಸ್ಪರ್ಧೆಗಳನ್ನು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಸುಳ್ಯ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ದೇವದಾಸ್ ಪ್ರಭು, ಕೇಸರಿ ಪತ್ತುಕುಂಜ, ರಾಧಾಕೃಷ್ಣ ಪೈ...

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.

ನಮ್ಮ ಸಂಸ್ಕ್ರತಿ ಆಚರಣೆಗಳನ್ನು ನಮ್ಮ ಮಕ್ಕಳಿಗೆ ತಿಳಿಸುವ ಕೆಲಸ ಆಗಬೇಕು : ಕೇಶವ

ನಮ್ಮ ಸಂಸ್ಕ್ರತಿ ಆಚರಣೆಗಳನ್ನು ನಮ್ಮ ಮಕ್ಕಳಿಗೆ ತಿಳಿಸುವ ಕೆಲಸ ಆಗಬೇಕು ಎಂದು ನಿವೃತ್ತ ಶಿಕ್ಷಣ ಸಂಯೋಜಕ ಕೇಶವ ಹೇಳಿದರು ಅವರು ಗಣೇಶ ಚತುರ್ಥಿ ಅಂಗವಾಗಿ ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ನಮ್ಮ ಸಂಸ್ಕ್ರತಿ ಆಚರಣೆಗಳನ್ನು ನಾವು ಮರೆಯುತ್ತಿದ್ದೇವೆ. ನಾವು ಆಧುನಿಕತೆಯ ದಾಸರಾಗದೆ ನಮ್ಮತನವನ್ನು ನಾವು ಉಳಿಸಿಕೊಳ್ಳವ ಅಗತ್ಯ...

ಮಂಡೆಕೋಲು: 15ನೇ ವರ್ಷದ ಗಣೇಶೋತ್ಸವ

ಮಂಡೆಕೋಲು ಭಜನಾ ಮಂದಿರದಲ್ಲಿ ಆ.31ರಂದು ಮಂಡೆಕೋಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಇವರ ಆಶ್ರಯದಲ್ಲಿ 15ನೇ ವರ್ಷದ ಗಣೇಶೋತ್ಸವ ಆಚರಣೆ ನಡೆಯಿತುಬೆಳಗ್ಗೆ ಗಣಪತಿ ಹೋಮ ಹಾಗೂ ಗಣಪತಿ ಮೂರ್ತಿ ಪ್ರತಿಷ್ಠೆ. ಬಳಿಕ ಭಜನಾ ಸೇವೆ ಹಾಗೂ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪಧೆಗಳು ನಡೆಸಲಾಯಿತು. ಹರಿಕಥಾ ಪ್ರಸಂಗ...
Loading posts...

All posts loaded

No more posts

error: Content is protected !!