ಕಂದಡ್ಕದಲ್ಲಿ ಸೇತುವೆಗೆ ಗುದ್ದಿ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಎ. ೭ ರಂದು ಸುಳ್ಯದಿಂದ ಮಡಪ್ಪಾಡಿ ಕಡೆಗೆ ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಂದಡ್ಕ ಸೇತುವೆಗೆ ಬೈಕ್ ಡಿಕ್ಕಿಯಾಗಿ ಕೈ ಮತ್ತು ತಲೆಗೆ ಗಂಭೀರ ಗಾಯಗೊಂಡು ಎ.೨೪ ರಂದು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವುದಾಗಿ ತಿಳಿದು ಬಂದಿದೆ .ಮೃತಪಟ್ಟ ಯುವಕನನ್ನು ಪೆರಾಜೆ ಗ್ರಾಮದ ನಿಡ್ಯಮಲೆ ಜಯರಾಮ ಎಂಬವರ ಪುತ್ರ ಸಿನಾತ್ (೨೫)...

ದೈವಾರಾಧನೆಯಲ್ಲಿ ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆ ಸಾಕಾರ : ಎಡನೀರು ಶ್ರೀ – ಕುಕ್ಕುಜಡ್ಕ ವಿಷ್ಣುಮೂರ್ತಿ, ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ

ಕುಕ್ಕುಜಡ್ಕ: ಎಲ್ಲರೂ ಒಟ್ಟಾಗಿ ಸೇರಿ ಮಾಡುವ ದೈವಾರಾಧನೆಯಲ್ಲಿ ‘ವಸುದೈವ ಕುಟುಂಬಕಂ’ ಎಂಬ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ. ಇದರಿಂದ ಹಿಂದೂ ಧರ್ಮದ ಉನ್ನತಿ ಸಾಧ್ಯ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದ್ದಾರ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ವಿಷ್ಣುನಗರ ಶ್ರೀವಿಷ್ಣುಮೂರ್ತಿ, ಶ್ರೀ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮದ ಅಂಗವಾಗಿ...
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಗಿರೀಶ್ ನಂದನ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ವರ್ಗಾವಣೆಗೆ ಆದೇಶವಾಗಿದೆ. ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.

ಕಸಾಪ ಮಂಗಳೂರು ತಾಲೂಕು ಘಟಕದಿಂದ ಟಿ ಜಿ.ಮೂಡೂರ್ ರವರಿಗೆ ಶ್ರದ್ಧಾಂಜಲಿ

ವಯೋಸಹಜ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ಟಿ ಜಿ ಮೂಡೂರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ನಂತೂರಿನ ಭಾರತಿ ಕಾಲೇಜಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಶ್ರೀ ವಸಂತ ಕುಮಾರ್ ಪೆರ್ಲರವರು ಮಾತನಾಡಿ ಟಿ...

ಬಸ್ ನಲ್ಲಿ ಬಿದ್ದು ಸಿಕ್ಕಿದ ಪರ್ಸ್ ಹಿಂತಿರುಗಿಸಿದ ಕಂಡಕ್ಟರ್

ಎ.22 ರಂದು ಸಂಜೆ ನಡುಗಲ್ಲುವಿನ ಮಹಿಳೆಯೊಬ್ಬರ ಪರ್ಸ್ ಬಸ್ಸೊಂದರಲ್ಲಿ ಕಾಣೆ ಆಗಿದ್ದು, ಆ ಪರ್ಸ್ ಬಸ್ ಕಂಡಕ್ಟರ್ ರಾಮಚಂದ್ರ ಅವರಿಗೆ ಸಿಕ್ಕಿದ್ದು, ಪರ್ಸ್ ನಲ್ಲಿ ಸುಮಾರು 14700 ರೂಪಾಯಿ ನಗದು ಇತ್ತು. ಎ.23 ರಂದು ಬೆಳಿಗ್ಗೆ ಕಂಡಕ್ಟರ್ ರಾಮಚಂದ್ರ ಅವರು ಪರ್ಸ್ ಅನ್ನು ವಾರಸುದಾರರಿಗೆ ಹಿಂತಿರುಗಿಸಿದರು. ವರದಿ :- ಉಲ್ಲಾಸ್ ಕಜ್ಜೋಡಿ

ಕುಲ್ಕುಂದ :- ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಎ.20 ರಂದು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಅವರ ನೇತೃತ್ವದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯಿತು.ಪೂರ್ವಾಹ್ನ ಗಣಪತಿ ಹವನ, ಶತರುದ್ರಾಭಿಷೇಕ, ಕಲಶಾಭೀಷೇಕ ನಡೆಯಿತು. ನಂತರ ಅಪರಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ದೀಪಾರಾಧನೆ, ತಾಯಂಬಿಕ, ರಂಗಪೂಜೆ, ಶ್ರೀ ಭೂತ ಬಲಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ...

ಡಿಕೆಶಿ ನಿಂದನೆ ಪ್ರಕರಣ : ಸುಳ್ಯ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆಯಾಜ್ಞೆ

ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ನಿಂದನೆ ಮಾಡಿದ ಪ್ರಕರಣದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರಿಗೆ ಸುಳ್ಯ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆ ತೀರ್ಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಸರಕಾರಿ ಅಧಿಕಾರಿಗಳು, ಸಾರ್ವಜನಿಕ ಸೇವೆಯಲ್ಲಿರುವವರನ್ನು ಪ್ರಶ್ನೆ ಮಾಡುವುದು ಅಪರಾಧವಲ್ಲ ಎಂಬ ಕಕ್ಷಿದಾರರ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ...

ಮೇ.3 ರಂದು ಕೇಶವ ಕೃಪಾ ವೇದ ಶಿಬಿರ ಸಮಾಪನ – ಸಾಧಕರಿಗೆ ಪ್ರಶಸ್ತಿ ಪ್ರದಾನ

ಸುಳ್ಯದ ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಶ್ರೀ ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನ ಮತ್ತು ಸಾಧಕರಿಗೆ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.3 ರಂದು ಕೇಶವ ಕೃಪಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್...

ಐವರ್ನಾಡು: ಉದಯಕುಮಾರ್ ಹಸಿರುತೋಟ ನಿಧನ

ಐವರ್ನಾಡು ಗ್ರಾಮದ ದಿ.ಕೃಷ್ಣ ಅಂಗಿತ್ತಾಯ ಅವರ ಪುತ್ರ ಉದಯಕುಮಾರ ಭಟ್ ಹಸಿರುತೋಟ (51 ವ) ರವರು ಎ.22ರಂದು ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಶ್ರೀಮತಿ ಶಾರದಾ, ಪತ್ನಿ ಶ್ರೀಮತಿ ಅಮೃತಲತಾ ಹಾಗೂ ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜೆಡಿಎಸ್ ಬಲವರ್ಧನೆಗೆ ಚಾಲನೆ – ಸುಬ್ರಹ್ಮಣ್ಯಕ್ಕೆ ಆಗಮಿಸಿದ ಜನತಾ ಜಲಧಾರೆ ರಥಕ್ಕೆ ಮುಖಂಡರಿಂದ ಸ್ವಾಗತ

ಜನತಾದಳ ಜಾತ್ಯತೀತ ಪಕ್ಷದ ಜನತಾ ಜಲಧಾರೆ ರಥವು ರಾಜ್ಯದಾದ್ಯಂತ ಸಂಚರಿಸುತ್ತಿದ್ದು. ಸುಬ್ರಹ್ಮಣ್ಯಕ್ಕೆ ಎಪ್ರಿಲ್ 21ರಂದು ಜನತಾ ಜಲಧಾರೆ ರಥವು ಆಗಮಿಸಿದ್ದು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ನೀರು ಸಂಗ್ರಹಿಸಿ ಪೂಜೆ ಸಲ್ಲಿಸಿ ಕಲಶಕ್ಕೆ ಹಾಕಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಜನತಾದಳದ ಅಧ್ಯಕ್ಷರಾದ ಜಾಕೆ ಮಾಧವ ಗೌಡ ದ.ಕ. ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅಕ್ಷತ್ ಸುವರ್ಣ ಜಿಲ್ಲಾ...
Loading posts...

All posts loaded

No more posts

error: Content is protected !!