- Monday
- July 6th, 2026
ಬೆಳ್ಳಾರೆ ಗ್ರಾಮದ ತಡಗಜೆ ವಾರ್ಡಿನ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವು ತಡಗಜೆ ಅಂಗನವಾಡಿಯಲ್ಲಿ ವಾರ್ಡಿನ ಎಲ್ಲಾ ಪ್ರಮುಖರ ಸಮ್ಮುಖದಲ್ಲಿ ಮೊಟ್ಟ ಮೊದಲನೇ ಬಾರಿಗೆ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು. ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಜಯಶ್ರೀ ನೆರವೇರಿಸಿದರು. ಬಳಿಕ ತಡಗಜೆಯಿಂದ ಬೆಳ್ಳಾರೆ ತನಕ ಸ್ವಾತಂತ್ರ್ಯೋತ್ಸವ ನಡಿಗೆ ನಡೆಯಿತು.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ಧನ.ಎ ಇವರು ಧ್ವಜಾರೋಹಣಗೈದು ಶುಭಹಾರೈಸಿದರು. ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ ಅಚ್ರಪ್ಪಾಡಿ ಇವರು ಸ್ವಾತಂತ್ರ್ಯಪೂರ್ವ ಮತ್ತು ಸ್ವತಂತ್ರದ ನಂತರದಲ್ಲಿ ಆದ ಬದಲಾವಣೆಗಳನ್ನು ತಿಳಿಸುತ್ತಾ ನಾವು ಕಾಲಕ್ಕೆ ತಕ್ಕ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ ಎಂದು...
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಧ್ವಜಾರೋಹಣ ನೆರವೇರಿಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ತಾಲೂಕು ಕ್ಷಯ ಚಿಕಿತ್ಸಾ ಘಟಕದ ಹಿರಿಯ...
ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಆವರಣದ ತನಕ ಸ್ವಾತಂತ್ರ್ಯೋತ್ಸವ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಮತ್ತು ಸದಸ್ಯರು, ಕೋಟೆಮುಂಡುಗಾರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ಮತ್ತು ಸಹ...
ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇದರ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಹಾಗೂ ಸೇನೆಯಲ್ಲಿ ಸುಮಾರು 30 ವರ್ಷಗಳ ಕಾಲ ಸುಬೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲ ವಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ...
ಕಳಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್.ಕೆ.ಆರ್, ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ರೈ ಕಳಂಜ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಶ್ರೀಮತಿ ಕಮಲ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಸುಧಾ, ಮಾಜಿ ಅಧ್ಯಕ್ಷೆ ಶ್ರೀಮತಿ ಯಶೋಧಾ ಮಣಿಮಜಲು, ಮಾಜಿ ಉಪಾಧ್ಯಕ್ಷ...
ಬುಖಾರಿಯ ಜುಮಾ ಮಸೀದಿ ಕಳಂಜ ಇದರ ವತಿಯಂದ 75ನೇ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಮಸೀದಿಯ ಅಧ್ಯಕ್ಷರಾದ ಅಬ್ದುಲ್ ಜಮಾಲ್.ಎ.ಕೆ ಯವರು ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಮಸೀದಿ ಧರ್ಮಗುರುಗಳು ದುವಾ ನೆರವೇರಿಸಿದರು. ಮದರಸ ಶಾಲಾ ಮಕ್ಕಳು ರಾಷ್ಟ್ರಗೀತೆಯನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಅಬ್ದುಲ್ ಲತೀಫ್, ಇಬ್ರಾಹಿಂ ಹಾಜಿ, ಇಸ್ಮಾಯಿಲ್.ಪಿ.ಎಸ್, ಮಹಮ್ಮದ್.ಕೆ.ಎಂ, ಮೊಯ್ದೀನ್.ಎ.ಬಿ, ಅಬ್ದುಲ್ ಅಝೀಝ್.ಟಿ, ಅಬ್ದುಲ್ ಅಝೀಝ್.ಕೆ,...
ಅಮರಮುಡ್ನೂರು ಗ್ರಾಮ ಪಂಚಾಯತ್, ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ, ಕುಕ್ಕುಜಡ್ಕ ಪ್ರಾಥಮಿಕ ಶಾಲೆ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಮಹಿಳಾ ಮಂಡಲ ಕುಕ್ಕುಜಡ್ಕ ಇವುಗಳ ಜಂಟಿ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತ ಮಹೊತ್ಸವವನ್ನು ಚೊಕ್ಕಾಡಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕುಕ್ಕುಜಡ್ಕ ಅಶ್ವತ್ಥ ಕಟ್ಟೆಯ ಬಳಿಯಿಂದ ಚೊಕ್ಕಾಡಿ ವಿದ್ಯಾಸಂಸ್ಥೆಯವರೆಗೆ ಪಥ ಸಂಚಲನವನ್ನು ಮಾಡಲಾಯಿತು....
ಕಳಂಜ ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಆ.15 ರಂದು ಕೋಟೆಮುಂಡುಗಾರು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ಜರುಗಿತು. ಕಳಂಜ ಬಾಳಿಲ ಸಹಕಾರಿ ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ...
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಉಪನ್ಯಾಸವನ್ನು ನೀಡಲಿದ್ದಾರೆ.ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು ಕೊರೋನಾ ಹಿನ್ನೆಲೆಯಿಂದಾಗಿ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಯೂಟ್ಯೂಬ್ ನೇರಪ್ರಸಾರ ಹಾಗೂ ಗೂಗಲ್...
Loading posts...
All posts loaded
No more posts
