ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜೀರ್ಣೋದ್ದಾರ ಸಮಿತಿ ಸಭೆ ಮಾ 2ರಂದು ದೇವಳದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು ಹಾಗೂ ನೂತನ ಜಾತ್ರೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆಯಾದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ...

ಗುತ್ತಿಗಾರು : ಮಾ.05 ಹಾಗೂ 06 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ

ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಮಾ.05 ಹಾಗೂ 06 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ನಡೆಯಲಿದೆ. ಮಾ.05 ರಂದು ಬೆಳಿಗ್ಗೆ 9:00 ಗಂಟೆಗೆ ಗಣಪತಿ ಹವನ, ಸಂಜೆ 4:00 ಗಂಟೆಗೆ ಶ್ರೀ ದೈವಕ್ಕೆ ಪೈಂಗುತ್ತಿ, ಸಂಜೆ 5:30 ರಿಂದ ಶ್ರೀ ಮುತ್ತಪ್ಪ ದೈವದ ನೇಮ, ಪ್ರಸಾದ ವಿತರಣೆ,...
Ad Widget

ಬೆಳ್ಳಾರೆ : ಗ್ರಾ.ಪಂ. ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಮಹಿಳಾ ಓದುಗರೊಂದಿಗೆ ಸಂವಾದ – ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅಪಾರ:ಸಾಹಿತಿ ಶ್ರೀಮತಿ ಅಶ್ವಿನಿ ಕೋಡಿಬೈಲು

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮ ಅಂಗವಾಗಿ ನಡೆದ ದಶ ಕಾರ್ಯಕ್ರಮಗಳು, ಮಹಿಳಾ ಓದುಗರೊಂದಿಗೆ ಒಂದು ದಿನ, ಮಹಿಳಾ ಸಾಹಿತಿಗಳೊಂದಿಗೆ ಸಂವಾದ ಮತ್ತು ಸುಳ್ಯ ತಾಲೂಕಿನ ಮಹಿಳಾ ಸಾಹಿತಿಗಳ ಪರಿಚಯ ಕಾರ್ಯಕ್ರಮ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಮಾ.3ರಂದು ನಡೆಯಿತು. ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು...

ಕಂದ್ರಪ್ಪಾಡಿ ರಾಜ್ಯದೈವ ಪುರುಷ ದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಳಿಕಾಪ್ರಸಾದ್ ಮುಂಡೋಡಿ

ಕಂದ್ರಪ್ಪಾಡಿ ರಾಜ್ಯದೈವ ಪುರುಷ ದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಳಿಕಾಪ್ರಸಾದ್ ಮುಂಡೋಡಿ ಆಯ್ಕೆಯಾಗಿದ್ದಾರೆ. ಸೋಮಶೇಖರ ಕೇವಳ, ಶ್ರೀಮತಿ ಗೀತಾ ತಿಮ್ಮಪ್ಪ ಕಡ್ಯ, ಜಯರಾಮ ಕಡ್ಲಾರ್, ಶ್ರೀಮತಿ ಜಾನಕಿ ಚಿದಾನಂದ ಪೇರಳಕಜೆ, ಯಂ. ಆರ್. ಪುರುಷೋತ್ತಮ ಮುಂಡೋಡಿ, ಅಜಯ್ ವಾಲ್ತಾಜೆ, ಕರುಣಾಕರ ದೇವರಗುಂಡ, ಶೂರಪ್ಪ ದೇವ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿದ್ದಾರೆ.

ಮಡಪ್ಪಾಡಿ – ಮರ್ಕಂಜ ಮಾರ್ಗವಾಗಿ ಸುಳ್ಯಕ್ಕೆ ನೂತನ ಸರಕಾರಿ ಬಸ್ಸು ಸೇವೆ ಪ್ರಾರಂಭ

ಮಡಪ್ಪಾಡಿಯಿಂದ ಬೆಳಿಗ್ಗೆ 7.00ಗಂಟೆಗೆ ಹೊರಟು ಮರ್ಕಂಜ – ದೊಡ್ಡತೋಟ ಮಾರ್ಗವಾಗಿ ಸುಳ್ಯಕ್ಕೆ ಬಸ್ಸು ಸೇವೆ (03) ಇಂದಿನಿಂದ ಪ್ರಾರಂಭವಾಗಿದೆ. ಇದೀಗ ಮಡಪ್ಪಾಡಿ ಗ್ರಾಮ ಪಂಚಾಯಿತಿ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯವರ ಮೂಲಕ ಮಾಡಿದ ಪ್ರಯತ್ನದ ಫಲವಾಗಿ ಇದೀಗ ಬಸ್ಸು ಸೇವೆಯನ್ನು, ಕರ್ನಾಟಕ ಸಾರಿಗೆ ಇಲಾಖೆ ಆರಂಭಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಉಷಾ...

ಸಿರಿಬಾಗಿಲು ಶಾಲಾ ಮುಖ್ಯ ಶಿಕ್ಷಕ ವಿಜಯಕುಮಾರ ನಡುತೋಟ ಅವರ ಸನ್ಮಾನ ಸಮಾರಂಭ ಹಾಗೂ ಸತ್ಕಾರ ಕೂಟ.

ಸುಬ್ರಹ್ಮಣ್ಯ ಮಾ.2: ಸುಬ್ರಹ್ಮಣ್ಯ ಸಮೀಪದ ಸಿರಿಬಾಗಿಲು ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಜಯಕುಮಾರ ನಡುತೋಟ ಅವರಿಗೆ ಇಂದು ಆದಿತ್ಯವಾರ ಸನ್ಮಾನ ಸಮಾರಂಭ ಹಾಗೂ ಸತ್ಕಾರ ಕೂಟ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಂಜುನಾಥ್ ವಹಿಸಿದ್ದರು. ಕಾರ್ಯಕ್ರಮವನ್ನು ಕೊಂಬಾರು ಗ್ರಾಮ...

ಐವರ್ನಾಡು : ಮಾಸಿಕ ಸ್ವಚ್ಛತಾ ಕಾರ್ಯಕ್ರಮ – ಗೆಳೆಯರ ಬಳಗ ಸಾಥ್

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಗೆಳೆಯರ ಬಳಗ ಐವರ್ನಾಡು ರವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡಿನ ವಠಾರದ ವರೆಗೆ ನಡೆಯಿತು . ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ...

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ...

ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾವಿಧಿ ಸ್ವೀಕಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಸ್ತುವಾರಿ ಪ್ರಾಂಶುಪಾಲ ಡಾ.ದಿನೇಶ್ ಕೆ ಅವರು ಜಗತ್ತಿನಲ್ಲಿರುವ ಮೌಡ್ಯತೆ ಹಾಗೂ ಅಂಧಕಾರವನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ವಾಣಿಜ್ಯಶಾಸ್ತ್ರ...

ಅರೆಭಾಷೆ ಅಕಾಡೆಮಿ ವತಿಯಿಂದ ಬೊಳಿಯ ಅಜಿಲ ರವರ ತಂಡಕ್ಕೆ ವಾದ್ಯ ಪರಿಕರಗಳ ವಿತರಣೆ

ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ, ಕರ್ನಾಟಕ ಸರ್ಕಾರ ಇದರ ವತಿಯಿಂದ 2022-23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮವು ಫೆ.28 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡುವ ವಾದ್ಯ ಪರಿಕರಗಳನ್ನು ದೈವ ನರ್ತಕರಾದ ಕೊಲ್ಲಮೊಗ್ರು ಗ್ರಾಮದ...
Loading posts...

All posts loaded

No more posts

error: Content is protected !!