- Sunday
- April 26th, 2026
ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಟಿ. ಪಿ. ಚಂದ್ರಶೇಖರ (ಪುಟ್ಟ) ಎಂಬವರು ಫೆ.21 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಚಂದ್ರಶೇಖರ ರವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಮನೆಯವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರು. ಅಲ್ಲಿಯೂ ಅವರಿಗೆ...
ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಯವರು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು.ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತ್ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಜಯರಾಮ ರಾವ್,...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿ ಬಳಿ ಕಾರೊಂದು ಢಿಕ್ಕಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು , ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದ ಕಿಲಾರ್ಕಜೆ ಎಂಬಲ್ಲಿ ವಾಸ ಮಾಡುತ್ತಿರುವ ರುಕ್ಮಯ್ಯ S/o ರಾಮಪ್ಪ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ...
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಅವರನ್ನು ಸುಳ್ಯ ಪ್ರೆಸ್ ಕ್ಲಬ್ಬಿಗೆ ಆಹ್ವಾನಿಸಿದ ಮೇರೆಗೆ ಅವರು ಪ್ರೆಸ್ ಕ್ಲಬ್ಬಿಗೆ ಭೇಟಿ ನೀಡಿದರು. ಅಲ್ಲಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತಲ್ಲದೆ ಪ್ರೆಸ್ ಕ್ಲಬ್ಬಿನ ವತಿಯಿಂದ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸುಸಜ್ಜಿತ ಗ್ರಂಥಾಲಯ ರಚನೆಯ ಯೋಜನೆಗೆ ನೆರವು ನೀಡುವಂತೆ...
ಸುಳ್ಯ: ವಲಯ ೧೫ ರ ತರಬೇತಿ ವಿಭಾಗದ ತರಬೇತಿ ಕಾರ್ಯಕ್ರಮ ಪರೀಕ್ಷೆ ಯೊಂದು ಹಬ್ಬ ಬನ್ನಿ ಸಂಭ್ರಮಿಸೋಣ ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ,ಚೈತ್ರ ಯುವತಿ ಮಂಡಲ ಅಜ್ಜಾವರ , ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಕಾರದೊಂದಿಗೆ ಸರಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿ ನಡೆಯಿತು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ...
ಐ ಜಿ ಡಿ ( ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್) ಸಂಸ್ಥೆಯ ಸಂಯೋಜನೆಯಲ್ಲಿ " ಐ ಟಿ ಸಿ ಆಶಿರ್ವಾದ್ ಸ್ಮಾರ್ಟ್ ಇಂಡಿಯಾ" ಸಹಭಾಗಿತ್ವದೊಂದಿಗೆ ಸರಕಾರಿ ಪ್ರೌಢ ಶಾಲೆಗೆ ದಿನಾಂಕ:20-02-2025 ನೇ ಗುರುವಾರರಂದು ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ...
ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆ, ಜೇಸಿಐ ಬೆಳ್ಳಾರೆ ಮತ್ತು ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಇವುಗಳ ಆಶ್ರಯದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಮೊಂಟೆಸ್ಸರಿ ಅಥವಾ ನರ್ಸರಿ ಶಿಕ್ಷಕಿಯರಿಗೆ ಎರಡು ದಿನಗಳ ರಂಗ ಚಟುವಟಿಕೆ ಕಾರ್ಯಾಗಾರ ಫೆ.22 ಮತ್ತು ಫೆ. 23 ರಂದು ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ...
ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಫೆ.24 ರಂದು ಅ.2.30ಕ್ಕೆ ಲಯನ್ಸ್ ಸೇವಾ ಸರನದಲ್ಲಿ ನಡೆಯಲಿದೆ ಎಂದು ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪದಗ್ರಹಣ ಸಮಾರಂಭದಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ ಕೆಪಿಸಿಸಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಅಂದರೆ ಇಂದಿನಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಕ್ಷೇತ್ರದ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕರಂಗಲ್ಲು ಹಾಗೂ ಐನೆಕಿದು ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಬಂದಂತಹ ಹಸಿರು ಕಾಣಿಕೆಯನ್ನು ಹರಿಹರ ಮುಖ್ಯ...
Loading posts...
All posts loaded
No more posts
