Ad Widget

ಸಚಿವ ಎಸ್. ಅಂಗಾರ ಉಡುಪಿ ಶ್ರೀಕೃಷ್ಣ ಮಠ ಭೇಟಿ

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರರು ಉಡುಪಿಯಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಬಳಿಕ ಶಾಸಕ ಕೆ. ರಘುಪತಿ ಭಟ್ ರವರ ಜತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣನ ದರ್ಶನ ಪಡೆದ ಸಚಿವರು ಬಳಿಕ ಪರ್ಯಾಯ ಅದಮಾರು ಮಠದ ಸ್ವಾಮಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ...

ಜ.27 : ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಸುಳ್ಯ ತಾಲೂಕು 25 ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 19 ರಂದು ನಡೆಯಲಿದ್ದು, ಈ ಬಗ್ಗೆ ಜ. 27 ರಂದು ಅಪರಾಹ್ನ 3 ಗಂಟೆಗೆ ನೆಹರು ಸ್ಮಾರಕ ಮಹಾವಿದ್ಯಾಲಯದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad Widget

ಸುಳ್ಯ 72 ನೇ ಗಣರಾಜ್ಯೋತ್ಸವ – ತಹಶೀಲ್ದಾರ್ ಅನಿತಾಲಕ್ಷ್ಮಿ ಧ್ವಜಾರೋಹಣ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸ‌ವ ಆಚರಣೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮಿ ಎಸ್.ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಬಳಿಕ ನಡೆದ ಸಮಾರಂಭದಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಎಪಿಎಂಸಿ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಸಂದರ್ಭದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ.ಪ್ರಮೋದ್ ಪಿ.ಎ., ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವೈಭವದ ಅಯ್ಯನಕಟ್ಟೆ ಜಾತ್ರೋತ್ಸವ ಆರಂಭ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ.26ರಿಂದ 29ರವರೆಗೆ ನಡೆಯಲಿದ್ದು, ಜ. 26 ರಂದು ಆರಂಭಗೊಂಡಿತು.ಜ. 26ರಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗತಂಬಿಲ ನೆರವೇರಿತು. ಮೂರುಕಲ್ಲಡ್ಕದಲ್ಲಿ ಸರ್ಪಸಂಸ್ಕಾರ ಹಾಗೂ ನಾಗತಂಬಿಲ ನೆರವೇರಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಜ. 27...

ಸುಳ್ಯ : ಸರಕಾರಿ ಪದವಿ ಕಾಲೇಜಿನಲ್ಲಿ ಗಣರಾಜ್ಯೋತ್ಸವ

ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಇಂದು 72 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ ಧ್ವಜಾರೋಹಣಗೈದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈಶ್ವರಮಂಗಲ : ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ

ಈಶ್ವರಮಂಗಲದ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಕೆ.ಅಬುಬಕರ್ ಹಾಜಿ ಯವರು ಧ್ವಜಾರೋಹಣವನ್ನು ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಡಾ.ಅಂಬೇಡ್ಕರ್ ರವರ ಸಂವಿಧಾನ ತತ್ವಗಳ ಮಹತ್ವವನ್ನು ವಿವರಿಸಿದರು. ಸಲಹಾ ಸಮಿತಿಯ ಸದಸ್ಯರಾದ ರಾಮ ಮೇನಾಲ ಮಾತನಾಡಿ ಡಾ.ಅಂಬೇಡ್ಕರ್ ರವರು ಜಾರಿಗೆ ತಂದ ಈ ನೈಜ ಸ್ವಾತಂತ್ರ್ಯವನ್ನು...

ಅಚ್ರಪ್ಪಾಡಿ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ

ಅಚ್ರಪ್ಪಾಡಿ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲೆಯ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಇವರು ಮೊದಲಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರಿಂದ ರಚಿತವಾದ ಸಂವಿಧಾನದಲ್ಲಿ ನಮ್ಮ ಬದುಕು ಅದರಿಂದ ಸಂವಿಧಾನ ಶಿಲ್ಪಿಯ ಸ್ಮರಣೆ ಮುಖ್ಯವಾಗಿದೆ ಎಂದು ಸಂವಿಧಾನದ ಕುರಿತಾಗಿ ಮಾತನಾಡಿ ಶುಭಕೋರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿದರು. ಶಾಲಾ ಅಭಿವೃದ್ಧಿ ಸಮಿತಿ...

ಪಂಜ ಗ್ರಾ.ಪಂ.ನಲ್ಲಿ 72 ನೇ ಗಣರಾಜ್ಯೋತ್ಸವ

ಪಂಜ ಗ್ರಾಮ ಪಂಚಾಯತ್ ನಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಪಂಚಾಯತು ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಗ್ರಾ.ಪಂ. ಸಿಬ್ಬಂದಿ ಶ್ರೀ ಬಾಬು ಇವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಉದ್ಯಮಿ ವೆಂಕಟ್ರಮಣ ಭಟ್ ಇವರು ಉಪಸ್ಥಿತರಿದ್ದರು.

ಗುತ್ತಿಗಾರು : ಪದವಿ ಪೂರ್ವ ಕಾಲೇಜಿನಲ್ಲಿ 72 ನೇ ಗಣರಾಜ್ಯೋತ್ಸವ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು 72 ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ ಎರ್ದಡ್ಕ ಧ್ವಜಾರೋಹಣ ನೇರವೇರಿಸಿದರು. ಎಸ್.ಡಿ.ಎಂ.ಸಿ ಸದಸ್ಯರಾದ ಲೋಕೇಶ್ವರ ಡಿ.ಆರ್ ಶುಭಹಾರೈಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು,ಶಾಲಾ ಮುಖ್ಯೋಪಾಧ್ಯಾಯರು, ಶಾಲೆ ಮತ್ತು ಕಾಲೇಜು ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ. ಸದಸ್ಯರು...
Loading posts...

All posts loaded

No more posts

error: Content is protected !!