- Monday
- June 22nd, 2026
ಸುಳ್ಯ ಹಾಗೂ ಬೆಟ್ಟoಪಾಡಿ ನಡುವಿನ ರಸ್ತೆಯು ಹೊಂಡ ಕೊಂಡ ಗಳಿಂದ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಇದನ್ನು ಮನಗಂಡ ಸ್ಥಳೀಯ ಆಟೋ ಚಾಲಕರಾದ ಶೇರಾಜ್ ಕಲ್ಲುಗುಂಡಿ ಬೆಟ್ಟoಪಾಡಿ ಹಾಗೂ ಪಿಗ್ಮಿ ಕಲೆಕ್ಟರ್ ಮೂರ್ತಿ ಯವರು ಹೊಂಡಗಳನ್ನು ಮುಚ್ಚಿ ಸಂಚಾರಕ್ಕೆ ಸಹಕಾರ ನೀಡಿದರು
ಸುಬ್ರಹ್ಮಣ್ಯ ಜ.20: ಕರ್ನಾಟಕ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರಣ್ಣರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ...
ಸುಬ್ರಹ್ಮಣ್ಯ ಜ.19: “ನಮಗೆ ನಮ್ಮ ಜೀವನದಲ್ಲಿ ಎರಡು ಕಣ್ಣುಗಳು ಎಷ್ಟು ಮುಖ್ಯವೋ ಅಷ್ಟೇ ಅದನ್ನ ಕಾಪಾಡಿಕೊಂಡು ಬರುವುದು ಕೂಡ ಮುಖ್ಯ. ರೋಟರಿಯಂತಹ ಅಂತರಾಷ್ಟ್ರೀಯ ಸಂಸ್ಥೆ ಸಮಾಜದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಆರೋಗ್ಯದ ಕಡೆ ಹೆಚ್ಚು ಗಮನವಿಟ್ಟು ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ತಪಾಸಣಾ ಶಿಬಿರ ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು”...
ದ.ಕ.ಸಹಕಾರಿ ನೌಕರರ ಸಹಕಾರ ಸಂಘದ ನಿರ್ದೇಶಕರಾಗಿ ಪುನರಾಯ್ಕೆಯಾದ ವೆಂಕಟರಮಣ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರವರಿಗೆ ಸೊಸೈಟಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್, ಉಪಾಧ್ಯಕ್ಷರಾದ ಮೋಹನ ರಾಮ್ ಸುಳ್ಳಿ ಸನ್ಮಾನಿಸಿದರು. ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು
ಸುಬ್ರಹ್ಮಣ್ಯ ಜ.18: ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಪ್ರಸಕ್ತ ಸಾಲಿನಲ್ಲಿ ಸುಬ್ರಹ್ಮಣ್ಯದ ಆಸು-ಪಾಸುಗಳಾದ ಹರಿಹರ ಕೊಲ್ಲಮೊಗ್ರು, ಮರ್ದಾಳ ಮುಂತಾದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು ನಾಲ್ಕು ಲಕ್ಷ ರೂಪಾಯಿಗಳ ಸಮಾಜ ಸೇವಾ ಚಟುವಟಿಕೆಗಳನ್ನು ನಡೆಸಿರುತ್ತದೆ ಎಂದು ಕ್ಲಬ್ ಅಧ್ಯಕ್ಷ ರಾಜೇಶ್ ಎನ್.ಎಸ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಗೆ ಮಧ್ಯಾಹ್ನದ...
ಕಾರ್ಯಕ್ರಮ ಮತ್ತು ಭಾಗವಹಿಸುವ ಅಥಿತಿಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳ ಮಾಹಿತಿ. ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಎಲಿಮಲೆ ತಮಾನೋತ್ಸವ ಹಾಗೂ ನೂತನ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಜ.24 ಮತ್ತು 25 ರಂದು ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎ.ವಿ ತೀರ್ಥರಾಮ ತಿಳಿಸಿದರು . ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ ಪೇರಡ್ಕದಲ್ಲಿ ಜ.31 ರಿಂದ ಫೆ.2 ರ ವರೆಗೆ ಉರೂಸ್ ಸಮಾರಂಭ ಹಾಗೂ ಫೆ.2 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕ ಇದರ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಮೊಹಿಯುದ್ದೀನ್ ರಿಫಾಯಿ ದಫ್ ಅಸೋಸಿಯೇಷನ್ ಪೇರಡ್ಕ ಗೂನಡ್ಕ ಇದರ ಅಧ್ಯಕ್ಷರಾದ...
ನೆಲ್ಲೂರು ಕೆಮ್ರಾಜೆಯ ಹಲ್ಲಡ್ಕ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಕೊಲೆ ಮತ್ತು ಆತ್ಮಹತ್ಯೆ ಪ್ರಕಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪಶ್ಚಿಮ ವಲಯದ ಐಜಿ ಅಮಿತ್ ಸಿಂಗ್ ಭೇಟಿ ನೀಡಿ ಕೊಲೆ ಮತ್ತು ಆತ್ಮಹತ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೃತದೇಹಗಳನ್ನು ತೆಗೆದು ಎರಡು ಆಂಬ್ಯುಲೆನ್ಸ್‌ಗಳಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ...
ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ದರ್ಶನ ಬಲಿ- ಬಟ್ಟಲು ಕಾಣಿಕೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...
Loading posts...
All posts loaded
No more posts
