- Wednesday
- September 16th, 2026
ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಗ್ರಾ.ಪಂ.ಸಹಯೋಗದಲ್ಲಿ ಅ.2 ರಂದು ಮುಕ್ಕೂರಿನಿಂದ ಪುದ್ದೊಟ್ಟು ಸೇತುವೆ ತನಕ ಸ್ವಚ್ಛತಾ ಅಭಿಯಾನ ನಡೆಯಿತು. ಮುಕ್ಕೂರು ಹಾಲಿನ ಡಿಪೋ ಬಳಿ ಸ್ವಚ್ಛತಾ ಅಭಿಯಾನಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದ ನ್ಯಾಯವಾದಿ ಗಣಪತಿ ಭಟ್ ನೀರ್ಕಜೆ ಮಾತನಾಡಿ, ಸ್ವಚ್ಛ ಪರಿಸರ ನಿರ್ಮಾಣ...
ಗಾಂಧಿ ಚಿಂತನಾ ವೇದಿಕೆ ಸುಳ್ಯ, ಹಾಗೂ ವಿವಿಧ ಸಂಘಸಂಸ್ಥೆಗಳ ಸಹ ಸಹಯೋಗದೊಂದಿಗೆ ಗಾಂಧಿ ಚಿಂತನೆ ಮತ್ತು ಗಾಂಧಿ ವನ ನಿರ್ಮಾಣ ಕಾರ್ಯಕ್ರಮ ಇಂದು ಕೊಡಿಯಾಲಬೈಲಿನಲ್ಲಿರುವ ಮುಕ್ತಿಧಾಮದಲ್ಲಿ ಹಾಗೂ ಪಶುಸಂಗೋಪನಾ ಇಲಾಖೆಯ ಗೋಮಾಳ ಪ್ರದೇಶದಲ್ಲಿ ನಡೆಯಿತು. ಮಹಾತ್ಮಾ ಗಾಂಧಿಯವರ ನಿಕಟವರ್ತಿ ಡಾ. ಜೆ.ಸಿ. ಕುಮಾರಪ್ಪನವರು ಬರೆದ ಶಾಶ್ವತ ಅರ್ಥಶಾಸ್ತ್ರದ ಕುರಿತು ಡಾ. ಪ್ರಭಾಕರ ಶಿಶಿಲ ರವರಿಂದ ಗಾಂಧಿ...
ಲಯನ್ಸ್ ಕ್ಲಬ್ ಸುಳ್ಯ ಇದರ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮ ಆ. 2 ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಪಂಜ ಮಹಾತ್ಮ ಗಾಂಧಿ ವಿದ್ಯಾಪೀಠದ ಮುಖ್ಯಸ್ಥ ಪುರುಷೋತ್ತಮ ಮುಡೂರು ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಈ ಸಂದರ್ಭದಲ್ಲಿ...
ಕಳೆದ ಕೆಲವು ದಿನಗಳ ಹಿಂದೆ ಜಟ್ಟಿಪಳ್ಳ ಪರಿಸರದಲ್ಲಿ ಡಾ. ಸುಬ್ರಹ್ಮಣ್ಯ ರವರು ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಬೇಲಿ ಹಾಕಲು ಹೊರಟಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಸುಳ್ಯ ತಹಸಿಲ್ದಾರ್ ರಿಗೆ ದೂರನ್ನು ನೀಡಿದರು. ಇದರ ಹಿನ್ನೆಲೆಯಲ್ಲಿ ಸುಳ್ಯ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬೇಲಿ ನಿರ್ಮಾಣಕ್ಕೆ...
ಹಿಂದೂ ಜಾಗರಣಾ ವೇದಿಕೆ ಶ್ರೀ ಮಹಾವಿಷ್ಣು ಘಟಕ ಕಣ್ಕಲ್, ಕೇನ್ಯ ಇದರ ವತಿಯಿಂದ ಶ್ರೀ ನರೇಂದ್ರ ಮೋದಿಯವರ ಸ್ವಚ್ಚ ಭಾರತ ಪರಿಕಲ್ಪನೆಯಂತೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ ಕೇನ್ಯದಲ್ಲಿ ಅ. 02 ರಂದು ನಡೆಯಿತು. ಕೇನ್ಯ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೆಳಿಗ್ಗೆ ಗಂಟೆ 9.00ರಿಂದ ಸಂಜೆ ಗಂಟೆ...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ಎರಡೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸ್ಕೌಟ್ ಗೈಡ್ ಶಿಕ್ಷಕರನ್ನು ಒಳಗೊಂಡಂತೆ ಮಹಾತ್ಮ ಗಾಂಧಿ ಜನ್ಮದಿನಾಚರಣೆಯನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಬಿಇಒ ಮಹದೇವ ಎಸ್ ಪಿ ಇವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಲಾಯಿತು....
ಪ್ರಧಾನಿ ಮೋದಿಯವರ ಆಲೋಚನೆಯಾದ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ ಪಂಜದ ಸುತ್ತ ಮುತ್ತಲಿನ ಜನರಿಗೆ ಸಹಕಾರಿಯಾಗಲೆನ್ನುವ ಉದ್ದೇಶದಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ದ ವಠಾರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಅ.12 ರಿಂದ 17 ರ ವರೆಗೆ ನಡೆಯಲಿದೆ. ಒಬ್ಬ ವ್ಯಕ್ತಿಗೆ ಒಂದು ವಿಷಯದ ಬಗ್ಗೆ ಮಾತ್ರ ತರಬೇತಿ ಪಡೆದುಕೊಳ್ಳಲು ಅವಕಾಶ. ತರಬೇತಿ...
ಕಳಂಜ ಗ್ರಾಮಸ್ಥರಿಗಾಗಿ ವಿಶೇಷ ಕೋವಿಡ್ ತಪಾಸಣೆಯನ್ನು ಕಳಂಜ ವಿಷ್ಣುನಗರದ ಅಕ್ಷರ ಕರಾವಳಿ ಕಟ್ಟಡದಲ್ಲಿ ಅ. 02 ರಂದು ನಡೆಸಲಾಯಿತು. ಸ್ವಯಂಪ್ರೇರಿತರಾಗಿ 43 ಜನ ತಪಾಸಣೆಗೆ ಒಳಗಾಗಿದ್ದು ಎಲ್ಲರ ವರದಿ ನೆಗೆಟಿವ್ ಬಂದಿರುವುದಾಗಿ ತಿಳಿದುಬಂದಿದೆ.
ಕಲ್ಲುಗುಂಡಿಯ ಗೂನಡ್ಕ ಬಳಿ ಬೈಕೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಕಾರ್ ಒಂದನ್ನು ಮರ್ಕಂಜದಲ್ಲಿ ಲಕ್ಷ್ಮೀಶ್ ಪಾಲ್ತಾಡು ತಡೆಹಿಡಿದು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಇದಕ್ಕೆ ಅರಂತೋಡಿನ ರಿಕ್ಷಾ ಚಾಲಕ ಮಾಲಕರಾದ ವಿಜಯಕುಮಾರ್ ನಾಯ್ಕ್ ಮತ್ತು ಮುರಳೀಧರ ಸೂoತೋಡು ಸಹಕರಿಸಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಕೊಡಗು, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಶ್ರೀ ಬಾಲಚಂದ್ರ...
Loading posts...
All posts loaded
No more posts
