- Wednesday
- September 16th, 2026
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.1ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ ಕಂಜಿಪಿಲಿ ವಹಿಸಿದ್ದರು. ವೇದಿಕೆಯಲ್ಲಿ ಮಾನ್ಯ ಶಾಸಕ ಎಸ್ ಅಂಗಾರ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೋಗಿ...
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಆರ್.ಐ.ಡಿ.ಎಫ್ ನಬಾರ್ಡ್ 25 ಯೋಜನೆಯಡಿ ರೂ.119 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಲೇಜಿನ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭವು ಅ.01 ರಂದು ನಡೆಯಿತು.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ವಿಸ್ತೃತ ಕಟ್ಟಡದ ಉದ್ಘಾಟನೆಗೈದರು.ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು. ನಂತರ...
ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಜಿಲ್ಲೆಗಳನ್ನೊಳಗೊಂಡ ಸುಮಾರು 100 ಕ್ಕೂ ಮಿಕ್ಕಿ ರೋಟರಿ ಕ್ಲಬ್ ಗಳ ರೋಟರಿ ಜಿಲ್ಲೆ 3181 ಇದರ 2021- 2022 ಸಾಲಿನ ನಿಯೋಜಿತ ಅಧ್ಯಕ್ಷ ಕಾರ್ಯದರ್ಶಿಗಳ ತರಬೇತಿ ಕಾರ್ಯಾಗಾರದ (PETS & SETS) ಜಿಲ್ಲಾ ಸಂಚಾಲಕರಾಗಿ ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರೊ.ಡಾ.ಕೇಶವ PK ಯವರು ಸರ್ವಾನುಮತದಿಂದ ಆಯ್ಕೆಗೊಂಡಿರುತ್ತಾರೆ.ಸುಳ್ಯ ರೋಟರಿಯ...
ವಿಶ್ವ ಹಿಂದೂ ಪರಿಷದ್ ಭಜರಂಗದಳ, ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಉಪಸಮಿತಿ ದರ್ಖಾಸು ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಸೆ.30 ರಂದು ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪ್ರಖಂಡದ ವಿಶ್ವಹಿಂದೂ ಪರಿಷದ್ ಅಧ್ಯಕ್ಷರಾದ ಸೋಮಶೇಖರ ಪೈಕ, ಭಜರಂಗದಳ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ಭಜರಂಗದಳ ಸಂಯೋಜಕ್ ನಿಕೇಶ್ ಉಬರಡ್ಕ, ಸುಳ್ಯ ವಿಹಿಂಪ ಸಹ...
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿತ್ಯಾನಂದ ಎನ್. ರವರಿಗೆ ಬೀಳ್ಕೊಡುಗೆ ಸಮಾರಂಭವು ಸೆ.30 ರಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ ವಹಿಸಿದ್ದರು.ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ಭಾಸ್ಕರ ಯು.ವಿ, ನಿರ್ದೇಶಕರುಗಳಾದ ರತ್ನಾಕರ ಗೌಡ ಬಳ್ಳಡ್ಕ, ಹರೀಶ್...
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಮತ್ತು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಅ.2 ರಂದು ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಪೂರ್ವಾಹ್ನ 7.30ಕ್ಕೆ ಸರಿಯಾಗಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಯವರ ಜನ್ಮದಿನ ಗಾಂಧಿ ಜಯಂತಿ ಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಆದರ್ಶ ಕಾರ್ಯಕ್ರಮವಾದ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಲಿದೆ....
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಭೂ ಸುಧಾರಣಾ ಹಾಗೂ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿ ವಿರೋಧಿಸಿ ಅ.2 ರಂದು ಸುಳ್ಯದ ತಾಲೂಕು ಪಂಚಾಯತ್ ಎದುರು ಕಾಂಗ್ರೆಸ್ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈಸೆ.30 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ಕೆ.ಪಿ.ಸಿ.ಸಿ. ನಿರ್ದೇಶನದ ಮೇರೆ ರಾಜ್ಯಾದ್ಯಂತ ಈ ಕಾರ್ಯಕ್ರಮ...
ಸುಳ್ಯ ನಗರ ಪಂಚಾಯತ್ ಮೀಸಲಿಟ್ಟ ಗಾಂಧಿನಗರದ ವಾಣಿಜ್ಯ ಕಟ್ಟಡದಲ್ಲಿರುವ ಮಳಿಗೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲ್ಪಟ್ಟಿದ್ದು ಇದರ ಮಾಹಿತಿ ಸಂಗ್ರಹಕ್ಕಾಗಿ ಕಳೆದ ಎರಡು ದಿನಗಳ ಹಿಂದೆ ನಗರ ಪಂಚಾಯಿತಿಗೆ ಮನವಿಯನ್ನು ಮಾಡಿದ್ದೆ. ಈ ಘಟನೆಗೆ ಸಂಬಂಧಿಸಿದಂತೆ ನಗರ ಪಂಚಾಯತಿಯ ಮಾಜಿ ಅಧ್ಯಕ್ಷರು ದೂರವಾಣಿ ಮೂಲಕ ನನಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ...
ಕಳಂಜ ಸಮೀಪದ ಅಯ್ಯನಕಟ್ಟೆ ಸೇತುವೆ ಪಕ್ಕದ ತಿರುವಿನಲ್ಲಿ ಬೈಕ್ ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸೆ. 30 ರಂದು ವರದಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಜಖಾಂಗೊಂಡಿದ್ದು, ಸ್ಕೂಟಿ ಸವಾರ ಕಳಂಜ ಪಟ್ಟೆಯ ಕುಶಾಲಪ್ಪ ಗೌಡ ಹಾಗೂ ಬೈಕ್ ಸವಾರ ಕಳಂಜ ಮಣಿಮಜಲಿನ ಮಾರಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಸವಾರರಿಬ್ಬರಿಗೂ...
ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಅ.01 ರ ಗುರುವಾರದಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 1 ಗಂಟೆ ತನಕ ಬಾಳಿಲ ಗ್ರಾಮ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ. ವಿಶೇಷ ಸೂಚನೆ :● ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್...
Loading posts...
All posts loaded
No more posts
