- Thursday
- July 16th, 2026
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.31 ರಂದು ಚಿನ್ನದ ಉಂಗುರವೊಂದು ಬಿದ್ದು ಸಿಕ್ಕಿರುತ್ತದೆ. ಇದಕ್ಕೆ ಸಂಬಂಧಪಟ್ಟವರು ಪಂಜ ದೇವಾಲಯದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರ್ ಇವರಲ್ಲಿ ಗುರುತು ಹೇಳಿ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡುಬಡತನ ಹಾಗೂ ತಾಯಿಯ ಅನಾರೋಗ್ಯದ ನಡುವೆಯೂ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕಡಬ ತಾಲೂಕಿನ ಬಳ್ಪ ಗ್ರಾಮದ ವಿಷ್ಣುಮಂಗಿಲ ಹೊನ್ನಪ್ಪ ಗೌಡ ಮತ್ತು ವಾರಿಜಾ ದಂಪತಿಗಳ ಪುತ್ರಿ ಆಶಿತಾಳಿಗೆ, ಗ್ರಾಮದ ಸಹೃದಯಿ ದಾನಿಗಳಿಂದ ಸಂಗ್ರಹಿಸಲ್ಪಟ್ಟ ರೂ.18000 ಮೊತ್ತದ ಹಣವನ್ನು ಸಹಾಯದ ರೂಪದಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಬಳ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್...
ಸುಮಾರು 60 ವರ್ಷಗಳ ಹಿಂದೆ ನಿರ್ಮಾಣಗೊಂಡ ಕಂದ್ರಪ್ಪಾಡಿ ಅಂಚೆ ಕಛೇರಿ ಸಂಪೂರ್ಣ ಶಿಥಿಲಗೊಂಡಿದ್ದು ಕುಸಿದ ಬೀಳುವ ಹಂತ ತಲುಪಿತ್ತು. ಈ ಬಗ್ಗೆ ಗ್ರಾಮಸ್ಥರ ಮನವಿಯಂತೆ ಆ.29 ರಂದು ಅಮರ ಸುದ್ದಿ ವರದಿ ಪ್ರಕಟಿಸಿತ್ತು.ಆ.30 ರಂದು ಶಿಥಿಲ ಸ್ಥಿತಿಯಲ್ಲಿದ್ದ ಕಂದ್ರಪ್ಪಾಡಿಯ ಅಂಚೆ ಕಚೇರಿ ಇರುವ ಕಟ್ಟಡವನ್ನು ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಯ ವತಿಯಿಂದ ಟರ್ಪಾಲು ಹಾಸಿ ತಾತ್ಕಾಲಿಕ...
ಮಾಜಿ ರಾಷ್ಟ್ರಪತಿ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ಸಂತಾಪ ಸೂಚಿಸಿದ್ದಾರೆ.ಪ್ರಣಬ್ ಮುಖರ್ಜಿ ಅವರು ಭಾರತ ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಒಬ್ಬರು. ಅತ್ಯುತ್ತಮ ವ್ಯಕ್ತಿತ್ವ ಹೊಂದಿದ್ದ ಅವರು ಸುಮಾರು 5 ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿ...
ಸುಳ್ಯದ ಗಾಂಧಿನಗರದ ಶಶಿ ಕಾಂಪ್ಲೆಕ್ಸ್ ನಲ್ಲಿ ಪುರುಷರ ಡ್ರೆಸ್ ಮಳಿಗೆ "ಅಯೋಧ್ಯಾ" ಇಂದು ಶುಭಾರಂಭಗೊಂಡಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ.ಸೀತಾರಾಮ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಕೆ.ವಿ., ಗಣೇಶ್ ಪ್ರಿಂಟರ್ಸ್ ಮಾಲಕ ಪಿ.ಕೆ.ಉಮೇಶ್, ಗೌಡ ಯುವಸೇವಾ ಸಂಘದ ತರುಣ ಘಟಕದ ಅಧ್ಯಕ್ಷ...
ನಿಂತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಅದೀನದಲ್ಲಿ ಕಾರ್ಯಾಚರಿಸುತ್ತಿರುವ ಸಿರಾಜುಲ್ ಉಲುಂ ಮದರಸ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಆಗಷ್ಟ್ 31 ರಂದು ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷ ಎ ಎಂ ಮಹಮ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಖತೀಬ್ ಮಹಮ್ಮದಲಿ ಸಖಾಪಿ ದುವಾ ನೆರವೆರಿಸಿದರು. ನಂತರ ಹದೀಸ್ ಪಾರಾಯಾಣ ನಡೆಯಿತು. ಕಾರ್ಯಕ್ರಮದಲ್ಲಿ ಮುಹದ್ಸಿನ್ ಮುಸ್ತಪಾ ಝುಹುರಿ, ನಾಸಿರ್...
ಪಾಂಡೇಶ್ವರ ಶ್ರೀನಿವಾಸ ವಿವಿ ಕಾಲೇಜ್ ಆಫ್ ಕಂಪ್ಯೂಟರ್ ಆಂಡ್ ಇನ್ಫಾರ್ಮೇಶನ್ ಸೈನ್ಸ್ ಎಂಸಿಎ ಸ್ನಾತಕೋತ್ತರ ಪದವಿಯ ಫಲಿತಾಂಶ ಪ್ರಕಟಗೊಂಡಿದ್ದು ಹರ್ಷಿತಾ ಡಿಜೆ . ( 8.92 ಸಿಜಿಪಿಎ ) ತೃತೀಯ ರ್‍ಯಾಂಕ್ ಪಡೆದಿದ್ದಾರೆ . ಅವರು ಮಾಜಿ ಸೈನಿಕ ಪಂಜದ ಅಳ್ಪೆಬನ ಜಯಂತ ಡಿ.ಎಸ್. ಮತ್ತು ಜಯಂತಿ ಎಸ್ ದಂಪತಿಗಳ ಪುತ್ರಿ .
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಯಾವುದೇ ಜಮೀನುಗಳನ್ನು ಯಾವುದೇ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗಳಿಗೆ ಲೀಸ್‌ಗೆ ಕೊಡುವ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರವೀಂದ್ರ ಎಂ.ಹೆಚ್. ಅವರಿಗೆ ಮನವಿ ಸಲ್ಲಿಸಿದ್ದಾರೆ.ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾರ್ವಜನಿಕ ಸರಕಾರಿ ದೇವಸ್ಥಾನವಾಗಿದ್ದು, ಸದ್ರಿ ದೇವಸ್ಥಾನದ ಅಧೀನದ...
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸೆ.1 ರಂದು ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಶಿಬಿರ ಬೆಳಿಗ್ಗೆ ಗಂಟೆ 9.30 ರಿಂದ ಸಂಜೆ 5 ರ ವರೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ತಿಳಿಸಿದ್ದಾರೆ.
ಮನವೇ ಯೋಚಿಸದಿರು ಈಗ ನಿನ್ನ ಸಮಯ ಕೆಟ್ಟಿದೆ ಎಂದು…ಮನವೇ ಚಿಂತಿಸದಿರು ನಿನ್ನ ಮುಂದೆ ಹಲವಾರು ನೋವುಗಳಿದೆ ಎಂದು… ಮನವೇ ಹೆದರದಿರು ನಿನ್ನ ಮುಂದೆ ವಿಭಿನ್ನ ಸಮಸ್ಯೆಗಳಿದೆ ಎಂದು…ಮನವೇ ಕಿವಿಗೊಡದಿರು ಸಮಾಜದ ನಕಾರಾತ್ಮಕ ಮಾತುಗಳಿಗೆ ಎಂದೆಂದು… ಮನವೇ ಮರುಗದಿರು ಮೋಸದ ಮಾತುಗಳಿಗೆ ಎಂದೆಂದು…ಮನವೇ ಕುಗ್ಗದಿರು ನಿನ್ನಲ್ಲಿ ಶಕ್ತಿ ಸಾಮರ್ಥ್ಯ ಇಲ್ಲ ಎಂದು… ಮನವೇ ಆತ್ಮಸ್ಥೈರ್ಯ ಕಳೆದುಕೊಳ್ಳದಿರು ನಿನಗಾದ...
Loading posts...
All posts loaded
No more posts
