- Tuesday
- June 23rd, 2026
ಸುಳ್ಯ ಆಟೋ ಚಾಲಕ ರಾಗಿದ್ದ ಮೇನಾಲದ ಪ್ರೆಮಾಚಂದ್ರ ರೈ ಎಂಬವರು ಅಲ್ಪ ಕಾಲದ ಅಸಂಖ್ಯ ದಿಂದ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದು ವರದಿಯಾಗಿದೆ . ಮೃತ ಚಂದ್ರಶೇಖರರು ಪತ್ನಿ ಓರ್ವ ಪುತ್ರಿ ಹಾಗೂ ಅಪಾರ ಬಂದು ಮಿತ್ರರರನ್ನು ಅಗಲಿದ್ದಾರೆ
ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಭಾರತದ ಮಾಜಿ ಪ್ರಧಾನಿಯವರಾದ ಅಟಲ್ ಬಿಹಾರಿ ವಾಜಪೇಯಿ ಇವರ ಹೆಸರನ್ನು ಇಡುವಂತೆ ಅಟಲ್ ಬಿಹಾರಿ ವಾಜಿಪೇಯಿರವರ ಅಭಿಮಾನಿಗಳ ಸಂಘ ಸುಳ್ಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದೆ.
ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು, ಸಂಘಟಕಿ ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು...
ಭಾಷೆ ಬೆಳವಣಿಗೆ ಮತ್ತು ವಿಸ್ತರಣೆಗೆ ಸಹಕರಿಸಿದ ವಿವಿಧ ಕ್ಷೇತ್ರದ 6 ಮಂದಿ ಸಾಧಕರಿಗೆ ಸನ್ಮಾನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸ್ಥಾಪನಾ ದಿನದ ಅಂಗವಾಗಿ ಕರ್ನಾಟಕ ಅರೆಭಾಷೆ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ನಗರ ಘಟಕ ಮತ್ತು ಮಹಿಳಾ ಸಮಿತಿಯ ಸಹಕಾರದಲ್ಲಿ ಸುಳ್ಯದ...
https://youtu.be/zgSiUd63naM?si=ySc2yrkGN77qljxL ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು,ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಡಿ. 21 ಮತ್ತು 22 ರಂದು ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳರವರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶಿಕ...
ಸುಳ್ಯ ತಾಲೂಕು ಮಟ್ಟದ ಪ.ಜಾತಿ ಹಾಗೂ ಪಂಗಡದವರ ಕುಂದುಕೊರತೆಗಳ ನಿವಾರಣಾ ಸಭೆಯು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಡಿ.21 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
https://youtu.be/6JnKAW8XMtA?si=yYXChxHwM0OhGACr ಸುಳ್ಯದಲ್ಲಿ ಕಳೆದ 40 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಈ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಡಿ.28 ರಂದು ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದ್ದಾರೆ. ಅವರು ಪ್ರೆಸ್ ಕ್ಲಬ್ ನಲ್ಲಿ...
ಬೆಳ್ಳಾರೆ ಪ್ರಾ.ಕೃ.ಪ.ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಿ. 25ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಸಾಲಗಾರರ ಕ್ಷೇತ್ರದಿಂದ ಸಾಮಾನ್ಯ ಸ್ಥಾನಕ್ಕೆ ಪದ್ಮನಾಭ ಶೆಟ್ಟಿ, ನಾರಾಯಣ ಕೊಂಡೆಪ್ಪಾಡಿ, ದಯಾಕರ ಆಳ್ವ, ಆರ್.ಕೆ. ಭಟ್ ಕುರುಂಬುಡೇಲು, ಸಾಯಿಪ್ರಸಾದ್ ರೈ, ಜನಾರ್ಧನ ಗೌಡ, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಭಾಸ್ಕರ ನೆಟ್ಟಾರು, ಹಿಂದುಳಿದ ವರ್ಗ ಎ...
ಭಯದಿಂದಲೇ ಬದುಕುತ್ತಿರುವ ಈ ಬದುಕಿನಲ್ಲಿ ನಾ ಭರವಸೆಯ ಹುಡುಕಿ ಹೊರಟಿರುವೆ, ಭಯವ ಬಿಟ್ಟರೆ ಮಾತ್ರ ಬದುಕಿನಲ್ಲಿ ಭರವಸೆಯು ಬರುವುದು ಎಂಬುವುದನ್ನು ನಾ ಅರಿತಿರುವೆ, ಆದರೂ ನಾ ಭರವಸೆಯ ಹುಡುಕಿ ಸಾಗುತ್ತಲೇ ಇರುವೆ, “ನನ್ನೊಳಗಿನ ಭಯಕ್ಕೆ ಬೆಂಕಿಯಿಕ್ಕುತಾ…”ಪ್ರತಿಕ್ಷಣವೂ ಬದಲಾಗುತ್ತಿರುವ ಈ ಸ್ವಾರ್ಥ ತುಂಬಿದ ಮನುಷ್ಯರ ನಡುವೆ ನಾ ಮನುಷ್ಯತ್ವವ ಹುಡುಕಿ ಹೊರಟಿರುವೆ, ಮನುಷ್ಯರು ಬದಲಾದಂತೆ ಮನುಷ್ಯತ್ವವೂ ಬದಲಾಗುತ್ತದೆಯೇ?...
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಪ್ರತಿಭಾ ಕಾರಂಜಿ ಸ್ಪರ್ಧೆಯು ಬೆಳ್ತಂಗಡಿ ಹೋಲಿ ರೆಡಿವೇರ್ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಸಂತ ಜೋಸೆಪ್ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಅಶ್ವಿಜ್ ಆತ್ರೇಯ ಸುಳ್ಯ ಇವರು ಪ್ರಥಮ ಸ್ಥಾನ ಪಡೆಯುವ ಮೂಲಕ ಸುಳ್ಯವನ್ನು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ರಾಜ್ಯಮಟ್ಟಕ್ಕೆ...
Loading posts...
All posts loaded
No more posts
