ಎನ್ನೆಂಪಿಯುಸಿ ಕಾಲೇಜು ವಾರ್ಷಿಕೋತ್ಸವ

ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವವು ಡಿ.10ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಶಿಕ್ಷಣ ಸಾಂಸ್ಕೃತಿಕ ಕ್ರೀಡೆಯಂತಹ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನಕ್ಕೆ ಮೆರುಗು ಬರವಂತಹದ್ದು. ಈ ನಿಟ್ಟಿನಲ್ಲಿ ಇಂತಹ...

ಪೆರಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಬಿಜೆಪಿ ನಾಯಕ ಎ.ಸಿ. ಹೊನ್ನಪ್ಪ ನಿಧನ

ಪೆರಾಜೆ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರು, ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಬಿಜೆಪಿ ಹಿರಿಯ ಮುಖಂಡರಾಗಿದ್ದ ಅಮಚೂರು ಎ.ಸಿ. ಹೊನ್ನಪ್ಪ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದ ಬೈನ್ ಹ್ಯಾಮರೇಜ್ ಗೊಳಗಾಗಿದ್ದ ಇವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು, ಬಳಿಕ ಮಂಗಳೂರು ಆಸ್ಪತ್ರೆಗೆ...
Ad Widget

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಸ್ಮಾರ್ಟ್ ತರಗತಿ ಉದ್ಘಾಟನೆ

ಗುತ್ತಿಗಾರು:2015ರಲ್ಲಿ ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಇಲ್ಲಿ ಹುಟ್ಟಿಕೊಂಡ ಎನ್.ಎಸ್.ಎಸ್‌ ಸೇವಾ ಸಂಗಮ ಟ್ರಸ್ಟ್(ರಿ) ಸುಳ್ಯ ಎನ್.ಎಸ್.ಎಸ್ ಹಿರಿಯ ವಿದ್ಯಾರ್ಥಿಗಳ ಸಂಘ ಕರ್ನಾಟಕ ಇದರ ದಶಮಾನೋತ್ಸವದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿಗೆ ವಿದ್ಯಾರ್ಥಿಗಳ ಕಲಿಕೆಗೆ ಸಹಾಯವಾಗುವ ನಿಟ್ಟಿನಲ್ಲಿ ನೀಡಿದ ಸ್ಮಾರ್ಟ್ ಕ್ಲಾಸ್ ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಸ್ಮಾರ್ಟ್ ತರಗತಿಯ ಉದ್ಘಾಟನೆಯನ್ನು ಪುರುಷೋತ್ತಮ...

ಸುಳ್ಯ : ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ

ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಡಿ.09 ರಂದು ಸಹಕಾರಿಯ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್...

ಪೆರುವಾಜೆ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ : ಚಪ್ಪರ ಮುಹೂರ್ತ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ‌ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ‌ ಬ್ರಹ್ಮರಥೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಡಿ.10 ರಂದು ನಡೆಯಿತು. ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಕ್ಷೇತ್ರದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪೆರುವಾಜೆ ಗ್ರಾ.ಪಂ....

ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ. ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯ ಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ (92) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಮತ್ತು ನಾಳೆ ಸರಕಾರಿ ರಜೆಯನ್ನು ಸರಕಾರ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸಂಪ್ಯಾಡಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಬ್ರಹ್ಮಣ್ಯ ಡಿ.9: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಳ್ಪ ಸಮೀಪದ ಸಂಪ್ಯಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಉಚಿತವಾಗಿ ವಿತರಿಸಲಾಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಸದಸ್ಯ ಸಮೀರ್ ಬಳ್ಪ ಅವರು ಪ್ರಾಯೋಜಕತ್ವ ವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ...

ಶ್ರೀ ಶಾರದಾ ವಿದ್ಯಾಸಂಸ್ಥೆ ಸುಳ್ಯ ಇದರ ವಾರ್ಷಿಕೋತ್ಸವ , ಸನ್ಮಾನ

“ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದಲ್ಲೇ ನಿಷ್ಠೆಯಿಂದ ತೊಡಗಿಸಿಕೊಳ್ಳಿ. ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತೀರಿ” ಎಂದು ಮಡಿಕೇರಿ ಆಕಾಶವಾಣಿ ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಹೇಳಿದರು. ಡಿ.9ರಂದು ಸುಳ್ಯ ಶ್ರೀ ಶಾರದಾ ಪ್ರೌಢಶಾಲೆ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು ಮುಖ್ಯ ಭಾಷಣಗೈದರು. “ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು...

ಸುಳ್ಯದ ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ಜೂನಿಯ‌ರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ ರಿಕ್ಷಾ ಚಾಲಕ, ತೊಡಿಕಾನ ನಿವಾಸಿ ಅಡ್ಯಡ್ಕ ಕೋಣಗುಂಡಿ ದಿ.ಹೊನ್ನಪ್ಪ ಗೌಡರ ಪುತ್ರ ಜಗನ್ನಾಥ (50) ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರು ರಿಕ್ಷಾ ಪಾರ್ಕಿಂಗ್ ಗೆ ಬಂದಿರಲಿಲ್ಲ. ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದುಬಂದಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈ...

ಜಾಲ್ಸೂರು: ಮಾವಿನಕಟ್ಟೆ -ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಸಂಪರ್ಕ ರಸ್ತೆಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ

ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಿ.9ರಂದು ಬೆಳಿಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕರ ಅನುದಾನ ರೂ. ಹತ್ತು ಲಕ್ಷದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಮಾವಿನಕಟ್ಟೆಯಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ...
Loading posts...

All posts loaded

No more posts

error: Content is protected !!