Ad Widget

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಮಾವಿನಕಟ್ಟೆ : ಓಣಂ ಸಂಭ್ರಮಕ್ಕೆ ಚಾಲನೆ

ಮಾವಿನಕಟ್ಟೆ ಶ್ರೀ ವಿಷ್ಣು ಸೇವಾ ಸಮಿತಿ ನೇತೃತ್ವದಲ್ಲಿ ಓಣಂ ಆಚರಣೆ ಆಯೋಜಿಸಿದ್ದು ಇಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಷ್ಣುಮೂರ್ತಿ ದೈವದ ಪರಿಚಾರಕ ಭಾಸ್ಕರ ಬೆಳ್ಳಪಾಡ ತಳೂರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಸಮಿತಿಯ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ...
Ad Widget

ಇಸ್ರೋದ ಚಂದ್ರಯಾನ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಿಸಿದ ಆಡಳಿತ ಮಂಡಳಿ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ ೩ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ...

ಸುಬ್ರಹ್ಮಣ್ಯ :  ಶ್ರೀಕೃಷ್ಣಾಷ್ಠಮಿ ಉತ್ಸವ ಸಮಿತಿ ರಚನೆ :  ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ – ಕಾರ್ಯದರ್ಶಿಯಾಗಿ ವಿನ್ಯಾಸ್ ಹೊಸೊಳಿಕೆ

ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಮಹಾಸಭೆಯು ಸಮಿತಿಯ ಸ್ಥಾಪಕಾಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಲೆಕ್ಕಪತ್ರ ಮಂಡನೆ ಸೇರಿದಂತೆ ೨೦೨೩ರಲ್ಲಿ ನಡೆಯುವ ೧೯ನೇ ವರ್ಷದ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿನ್ಯಾಸ್ ಹೊಸೋಳಿಕೆ ನೇಮಕಗೊಂಡರು....

ಸುಬ್ರಹ್ಮಣ್ಯ : ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಬ್ರಹ್ಮಣ್ಯ: ಪ್ರತಿಷ್ಠಿತ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಇದರ 53ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಸಂಪ್ಯಾಡಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ  ವಿನ್ಯಾಸ್ ಹೊಸೋಳಿಕೆ, ನಿತೀನ್ ಭಟ್, ಸುಹಾಸ್ ಎಚ್.ಎಲ್, ಗುರುಪ್ರಸಾದ್ ಆದಿ  ನೇಮಕಗೊಂಡರು. ಎ.ವೆಂಕಟ್ರಾಜ್, ಕೆ.ಯಜ್ಞೇಶ್ ಆಚಾರ್ ಮತ್ತು  ರಾಜೇಶ್ ಎನ್.ಎಸ್ ಸಂಚಾಲಕರಾಗಿ ಆಯ್ಕೆಯಾದರು. 52ನೇ ವರ್ಷದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್ ಅಧ್ಯಕ್ಷತೆಯಲ್ಲಿ ನಡೆದ...

ಯುವ ಬ್ರಿಗೇಡ್ ಕಾರ್ಯಕರ್ತ ಹಾಗೂ ಜೈನ ಮುನಿಗಳ ಹತ್ಯೆ ಮಾಡಿದವರಿಗೆ ಕಠಿಣ ಕಾನೂನು ಕ್ರಮಕ್ಕೆ ರಾಜ್ಯಪಾಲರಿಗೆ ಸುಳ್ಯ ಯುವ ಬ್ರಿಗೇಡ್ ಮನವಿ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬೆಳ್ಳಾರೆ ರಸ್ತೆಯಲ್ಲೇ ಎನ್ ಕೌಂಟರ್ ಮಾಡಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ

ಬೆಳ್ಳಾರೆಯ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗದ ವತಿಯಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜು.2ರಂದು ನಡೆಯಿತು. ಅಯೋಧ್ಯೆ ಕರಸೇವೆಯಲ್ಲಿ ಬಲಿದಾನಗೈದ ಕೊಠಾರಿ ಸಹೋದರ ಶೇಷಪ್ಪ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಣ್ಣಾ ವಿನಯಚಂದ್ರ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯ ಕೇಂದ್ರ...

ಜೂ.05: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ರಥ ನಿರ್ಮಾಣಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ ನಿರ್ಮಾಣವಾಗಲಿದ್ದು ಈ ಹಿನ್ನೆಲೆಯಲ್ಲಿ ರಥ ನಿರ್ಮಾಣ ಕಾರ್ಯಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತವು ಜೂ.05 ಸೋಮವಾರದಂದು ಬೆಳಗ್ಗೆ ಗಂಟೆ 9.30ಕ್ಕೆ ನಡೆಯಲಿದೆ. ರಥ ನಿರ್ಮಾಣದ ಬಗ್ಗೆ ದೇವಸ್ಥಾನದಲ್ಲಿ ಊರ ಭಕ್ತಾದಿಗಳ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆದಿತ್ತು. ಮಾ.23 ರಂದು ಪನ್ನೆಯಲ್ಲಿ ರಥ ನಿರ್ಮಾಣಕ್ಕೆ ದಾನವಾಗಿ ನೀಡಿದ...

ಮಂಜುಶ್ರೀ ಕೆದಂಬಾಡಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಂಜುಶ್ರೀ ಕೆದಂಬಾಡಿ ೫೯೧ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈಕೆ ಉಬರಡ್ಕ ಮಿತ್ತೂರು ಗ್ರಾಮದ ಕೆದಂಬಾಡಿ ತೀರ್ಥರಾಮ ಹಾಗೂ ಸಂಧ್ಯಾ ದಂಪತಿಗಳ ಪುತ್ರಿ.

ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡಿಯಾಲ ಗ್ರಾಮದ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಮಾ.16ರಿಂದ ಮಾ.17 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಇಂದು (ಮಾ.05ರಂದು) ಜರುಗಿತು. ಈ ಸಂದರ್ಭ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ...
Loading posts...

All posts loaded

No more posts

error: Content is protected !!