- Thursday
- July 23rd, 2026
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ಪೇಟೆ ಸವಾರಿ ನಡೆಯಲಿದೆ. ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಶ್ರೀ ದೇವರ ಬಲಿ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.16ರಂದು ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಹಿಸಿದ್ದರು. ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನಗೈದು ಮಾತನಾಡುತ್ತಾ ಸನಾತನ ಸಂಸ್ಕೃತಿಯ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಇಂದು ಪೂರ್ವಾಹ್ನ ಗಂಟೆ 9-45 ರಿಂದ 10-10ರ ಕುಂಭ ಲಗ್ನದ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆಗೊಂಡಿತು. ಈ ಸಂದರ್ಭ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
Loading posts...
All posts loaded
No more posts
