Ad Widget

ಕಾರಿಗೆ ಗುದ್ದಿ ಎಸ್ಕೆಪ್ ಆದ ಟಿಪ್ಪರ್ ಹುಡುಕಾಡಿ ರಾತ್ರಿ ಪತ್ತೆಮಾಡಿದ ಆಂಬುಲೆನ್ಸ್ ಚಾಲಕ ಮಾಲಕರು.

ಮಹಿಳೆ ಚಲಾಯಿಸುತ್ತಿದ್ದ ಕಾರಿಗೆ ಗುದ್ದಿ ಹಿಟ್ ಅಂಡ್ ರನ್ ಮಾಡಿ ಎಸ್ಕೆಪ್ ಆಗಿದ್ದ ಹಿಟಾಚಿ ಸಾಗಿಸುತ್ತಿದ್ದ ಟಿಪ್ಪ‌ರ್ ಸುಳ್ಯ ಕೆಇಬಿ ಬಳಿ ಇದೀವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಘಟನೆ ಗುರುವಾರ ತಡರಾತ್ರಿ ನಡೆದಿತ್ತು. ಅದಾದ ಬಳಿಕ ಶುಕ್ರವಾರ ಬೆಳಗ್ಗಿನಿಂದ ಸಂಜೆ ತನಕ ಸುಳ್ಯ ಆಂಬ್ಯುಲೆನ್ಸ್‌ ಚಾಲಕ-ಮಾಲಕರ ಸಂಘದವರು ಸೇರಿಕೊಂಡು ಸುಳ್ಯದಾಧ್ಯಂತ ಟಿಪ್ಪರ್ ಗಾಗಿ ಹುಡುಕಾಡಿದರೂ...

ಗುಂಡ್ಯದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆ.

ಒಂದು ಗಂಟೆಗು ಅಧಿಕ ಸಮಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರ ಆಕ್ರೋಶ. ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಗ್ರಾಮಗಳ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ಕಡಬ ತಾಲೂಕಿನ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ...
Ad Widget

ಸುಳ್ಯ : ಮ್ಯಾಟ್ರಿಕ್ಸ್ ಎಜುಕೇಶನ್ ಇನ್ಸ್ಟಿಟ್ಯೂಟ್ ನಲ್ಲಿ ಮಕ್ಕಳ ದಿನಾಚರಣೆ

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಮ್ಯಾಟ್ರಿಕ್ಸ್ ಎಜುಕೇಶನ್ ಇನ್ಸ್ಟಿಟ್ಯೂಟ್ ನಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಣೆಯನ್ನು ಸಂಭ್ರಮದಿಂದ ನಡೆಸಲಾಯಿತು.‌ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಲಾಯಿತು.‌ ಮಧ್ಯಾಹ್ನ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿ ತಿಂಡಿ ಮತ್ತು ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಪ್ರಾಚಾರ್ಯರು, ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಹಾಗೂ ಎಲ್ಲ...

ಕುಂಡಾಡು ಪೆರಾಜೆ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕುಂಡಾಡು ಪೆರಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾ ವಿದ್ಯಾರ್ಥಿ ನಾಯಕ ದೀಕ್ಷಿತ್ ಸಿ ವೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಭಾಷಣಕಾರರಾಗಿ ವಿದ್ಯಾರ್ಥಿಗಳಾದ ಮೋಕ್ಷ ಹಾಗೂ ಮೌಲ್ಯ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮನೆ, ಸದಸ್ಯರಾದ ಪೂರ್ಣಿಮಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯತೀಶ್ ಸಿ ಯಸ್,...

ಗುತ್ತಿಗಾರು ಪ್ರಾ.ಕೃ.ಪ.ಸ ಸಂಘದ ಶತಮಾನೋತ್ಸವ ಆಚರಣೆ – ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ – ನ.18 ರಂದು ಕ್ರೀಡಾಕೂಟ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ನ.23 ರಂದು ನಡೆಯಲಿದ್ದು, ಇದರ ಅಂಗವಾಗಿ ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ ಹಾಗೂ ನ.18 ರಂದು ಕ್ರೀಡಾಕೂಟ ನಡೆಯಲಿದೆ. ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ-ಮಂಗಳೂರು ಇವರ ಸಹಭಾಗಿತ್ವದಲ್ಲಿ ನ.17 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸಂಘದ...

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಮಕ್ಕಳ ದಿನಾಚರಣೆ

ಬೆಳ್ಳಾರೆ: ಭಾರತದ ಪ್ರಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರೂರವರ ಜನ್ಮದಿನವಾದ ಮಕ್ಕಳ ದಿನಾಚರಣೆಯನ್ನುಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿಎಲ್ಲಾ ವಿದ್ಯಾರ್ಥಿಗಳಿಗೆ ತರಗತಿವಾರು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಾಲಾ ವಿದ್ಯಾರ್ಥಿಗಳು ಜವಹಾರ್ ಲಾಲ್ ನೆಹರುರವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಯು.ಹೆಚ್. ಅಬೂಬಕ್ಕರ್...

ಪುಟ್ಟಣ್ಣ ಗೌಡ ಕಾಂಚೋಡು ನಿಧನ

ಬಾಳಿಲ ಗ್ರಾಮದ ಕಾಂಚೋಡು ನಿವಾಸಿ ಪುಟ್ಟಣ್ಣ ಗೌಡ ಕಾಂಚೋಡು ಇಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಲಕ್ಷ್ಮೀಶ ಕಾಂಚೋಡು, ರಮೇಶ ಕಾಂಚೋಡು, ಪುತ್ರಿ ಶ್ರೀಮತಿ ಮಮತಾ ಗಣೇಶ್ ಪಾಂಬಾರ್, ಸೊಸೆ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಹಾಗೂ ಸಹೋದರ, ಸಹೋದರಿಯರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು...

ಕೊಲ್ಲಮೊಗ್ರ : ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಬಾಲಸುಬ್ರಹ್ಮಣ್ಯ ಭಟ್ ಅವಿರೋಧ ಆಯ್ಕೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಎನ್.ಜಿ. ಕೊಳಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಯ್ಯ ಕೆ. ಕೊಂದಾಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮಯ್ಯ ಕೆ.ಕೊಂದಾಳ ಹಿಂಪಡೆದ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಭಟ್ ಎನ್.ಜಿ....

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ರಥಗಳಿಗೆ ಗೂಟ ಮುಹೂರ್ತ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮ ನ.27 ರಿಂದ ಆರಂಭವಾಗಲಿದ್ದು ಅದರ ಪೂರ್ವಭಾವಿಯಾಗಿ ರಥ ಕಟ್ಟುವ ಕಾರ್ಯಕ್ರಮ ನಡೆಯಲಿದೆ. ಇಂದು ರಥಗಳ ಗೂಟ ಮುಹೂರ್ತ ಜರಗಿತು. ಈ ಸಂದರ್ಭ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾ‌ರ್, ಇತರೇ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹರಿಹರ ಪಳ್ಳತ್ತಡ್ಕ : ತೆರವಾಗಿದ್ದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಪೃಥ್ವಿಚಂದ್ರ ಮುಂಡಾಜೆ ಅವಿರೋಧ ಆಯ್ಕೆ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ದಿವಾಕರ ಮುಂಡಾಜೆ ರವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿ ನ.12 ರಂದು ಪೃಥ್ವಿಚಂದ್ರ ಮುಂಡಾಜೆ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಕ್ಷಿತ್ ಕಜೆಗದ್ದೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಕ್ಷಿತ್ ಕಜೆಗದ್ದೆ ರವರು ಈ ಹಿಂದಿನ ಮಾತುಕತೆಯಂತೆ ನಾಮಪತ್ರ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದ್ದು,...
Loading posts...

All posts loaded

No more posts

error: Content is protected !!