Ad Widget

ಅಂಕತ್ತಡ್ಕ ಪ್ರಾಥಮಿಕ ಶಾಲಾ ಶಿಕ್ಷಕಿ ಹರ್ಷಲತ ಎಂ.ಜೆ ಏನೆಕಲ್ಲು ಹೈಸ್ಕೂಲ್ ಗೆ ಪದೋನ್ನತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಕತಡ್ಕ ಪುತ್ತೂರು ತಾಲೂಕು ಇಲ್ಲಿ ಕಳೆದೊಂದು ವರ್ಷದಿಂದ ಸಹ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಶ್ರೀಮತಿ ಹರ್ಷಲತ ಎಂ ಜೆ ಇವರು ಸರಕಾರಿ ಪ್ರೌಢಶಾಲೆ ಏನೆಕಲ್ಲು ಇಲ್ಲಿಗೆ ಇಂಗ್ಲಿಷ್ ಭಾಷಾ ಸಹಾಯಕ ಶಿಕ್ಷಕರಾಗಿ ಪದೋನ್ನತಿ ಹೊಂದಿರುತ್ತಾರೆ. ಇವರು ಮೂಲತಃ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕಣಜಾಲು ಜತ್ತಪ್ಪ ಗೌಡ ಮತ್ತು ಮೀನಾಕ್ಷಿ...

ಬೆಳ್ಳಾರೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ಳಾರೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಶೇಷಮ್ಮ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಕೇಶವ ನಾಯಕ್ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರೆ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಪುಷ್ಪಾನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ...
Ad Widget

ಸುಳ್ಯ ಶಿಕ್ಷಕರ ದಿನಾಚರಣೆ- ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ

ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿಶಿಕ್ಷಕರ ದಿನಾಚರಣೆಯು ಸುಳ್ಯದ ರಥಬೀದಿಯಲ್ಲಿರುವ ರೋಟರಿ ಶಾಲೆಯಲ್ಲಿ ಸೆ.5 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹಾದೇವ್, ರೋಟರಿ ಶಾಲೆಯ ಸಂಚಾಲಕ ಜಿತೇಂದ್ರ ನಿಡ್ಯಮಲೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ,...

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆ ಪೂರ್ವಭಾವಿ ಸಭೆ

ಸುಳ್ಯ : ಬ್ಲಾಕ್ ಕಾಂಗ್ರೆಸ್ ಸುಳ್ಯ ಇದರ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಇಂದು ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯರು ಪ್ರಣಬ್ ಮುಖರ್ಜಿಯವರ ಬಗ್ಗೆ ಮಾತನಾಡಿ,ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ...

ಅನಾರೋಗ್ಯದಿಂದ ಬಸ್ಸು ನಿಲ್ದಾಣದಲ್ಲಿ ಕುಸಿದುಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಯುವಕರು

ಗಾಂಧಿನಗರ ಬಸ್ಸುನಿಲ್ದಾಣದ ಬಳಿ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಿನ್ನೆ ಸಂಜೆ ಐದು ಗಂಟೆಯ ವೇಳೆ ಅನಾರೋಗ್ಯದಿಂದ ಕುಸಿದುಬಿದ್ದ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಬೇರೆ ವ್ಯಕ್ತಿಯ ಮೂಲಕ ಮಾಹಿತಿ ತಿಳಿದ ನಗರ ಪಂಚಾಯತ್ ಸದಸ್ಯ ರಿಯಾಝ್ ಕಟ್ಟೆ ಕಾರ್ಸ್ ಹಾಗೂ ಸಮಾಜಸೇವಕ ರಫೀಕ್ ಪಡು ಕೂಡಲೇ ಸ್ಥಳಕ್ಕೆ ಧಾವಿಸಿ ತಮ್ಮದೇ ಕಾರಿನಲ್ಲಿ ಅವರನ್ನು ಸುಳ್ಯ ಸರ್ಕಾರಿ...

ಸೆ.8 ರಂದು ಅರಂತೋಡಿನಲ್ಲಿ ಅಯುಷ್ಮಾನ್ ಕಾರ್ಡ್ ಅಭಿಯಾನ

ಅರಂತೋಡು ಬುಕ್ ಎಂಡ್ ಬುಕ್ಸ್ ಅನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.8 ರಂದು ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿ ರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.ಬರುವವರು ಮಾಸ್ಕ್ ಧರಿಸಬೇಕು.ಸಾಮಾಜಿಕ ಅಂತರ ಕಾಯ್ದುಕೊಳ್ಳನಬೇಕು.ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್ .ತಿಳಿಸಿದ್ದಾರೆ.

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಶಿಕ್ಷಕರ ದಿನಾಚರಣೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸಲಾದ ಸರಳ ಕಾರ್ಯಕ್ರಮದಲ್ಲಿ , ಸಂಸ್ಥೆಯ ಪ್ರಾಂಶುಪಾಲರಾದ ಹಸೀನಾ ಬಾನು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸವಣೂರಿನಲ್ಲಿ ಸೆ.6 ಮತ್ತು 7 ರಂದು ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

ಮಹಾಶಕ್ತಿ ಕೇಂದ್ರ ಬೆಳಂದೂರು , ಶಕ್ತಿ ಕೇಂದ್ರ ಸವಣೂರು, ಹಿಂದೂ ಜಾಗರಣ ವೇದಿಕೆ ಸವಣೂರು ಇದರ ಆಶ್ರಯದಲ್ಲಿ ಸವಣೂರು ಯುವಕ ಮಂಡಲದ ಸಹಯೋಗ ದೊಂದಿಗೆ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.6 ಮತ್ತು 7 ರಂದು ಯುವ ಸಭಾಭವನ ಸವಣೂರಿನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ...

ಕೋಟೆಮುಂಡುಗಾರು ಶಿಕ್ಷಕರ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆಮುಂಡುಗಾರು ಇಲ್ಲಿ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹಿನಿ.ಎ.ಕೆ , ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಗಂಗಾಧರ ತೋಟದಮೂಲೆ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪೆರುವಾಜೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಸರಳವಾಗಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಉದಯ ಗಣೇಶ. ಎ ವಹಿಸಿದ್ದು, ಶಿಕ್ಷಕರ ದಿನಾಚರಣೆಯ ಶುಭಹಾರೈಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀ ದಿವಾಕರ ಗೌಡ ಹಾಗೂ ಶ್ರೀಮತಿ ಯಶೋಧ ಉಪಸ್ಥಿತರಿದ್ದರು. ಶಾಲೆಯ ಸಹಶಿಕ್ಷಕಿ ಶ್ರೀಮತಿ ರತ್ನಾವತಿ.ಬಿ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಬಗ್ಗೆ...
Loading posts...

All posts loaded

No more posts

error: Content is protected !!