- Tuesday
- November 5th, 2024
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆಮುಂಡುಗಾರು ಇಲ್ಲಿ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹಿನಿ.ಎ.ಕೆ , ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಗಂಗಾಧರ ತೋಟದಮೂಲೆ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಸರಳವಾಗಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಉದಯ ಗಣೇಶ. ಎ ವಹಿಸಿದ್ದು, ಶಿಕ್ಷಕರ ದಿನಾಚರಣೆಯ ಶುಭಹಾರೈಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀ ದಿವಾಕರ ಗೌಡ ಹಾಗೂ ಶ್ರೀಮತಿ ಯಶೋಧ ಉಪಸ್ಥಿತರಿದ್ದರು. ಶಾಲೆಯ ಸಹಶಿಕ್ಷಕಿ ಶ್ರೀಮತಿ ರತ್ನಾವತಿ.ಬಿ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಬಗ್ಗೆ...
ಸೆ.11 ಮತ್ತು 12 ರಂದು ಆಯುಷ್ಮಾನ್ ಕಾರ್ಡ್ ಅಭಿಯಾನವು ಕನಕಮಜಲು ಪ್ರಾ. ಕೃ.ಪ.ಸ.ಸಂ. (ನಿ) ಇದರ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಣ್ಣೆಮಜಲು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಲಿನಿ ಎಂ , ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀ ಚಂದ್ರನಾಥ ಪಟುಳಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
2020-21 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಯಡಿ ಜೇನುಪೆಟ್ಟಿಗೆ ಹಾಗೂ ಜೇನು ಕುಟುಂಬ ಖರೀದಿಗೆ ರೂ 1600 / - ( ಶೇಕಡ 40 % ) ಸಹಾಯಧನ ಲಭ್ಯವಿದ್ದು , ಆಸಕ್ತರು ಅಧಿಕೃತ ಸಂಸ್ಥೆಯಿಂದ ಖರೀದಿಸಿ , ನಿಗದಿತ ಅರ್ಜಿ ಯೊಂದಿಗೆ ಖರೀದಿ ಮೂಲ ಬಿಲ್ , RTC , ಜಾತಿ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಟ್ಟಿಪಳ್ಳ ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಗಾಯತ್ರಿ.ಕೆ ಯವರು ಪದೋನ್ನತಿ ಹೊಂದಿದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿಗೆ ಹಿಂದಿ ಶಿಕ್ಷಕಿಯಾಗಿ ನಿಯೋಜನೆಗೊಂಡಿರುತ್ತಾರೆ. ಇವರು ಸ.ಹಿ.ಪ್ರಾಥಮಿಕ ಶಾಲೆ ದೇವರಕಾನದಲ್ಲಿ 6 ವರ್ಷ ಹಾಗೂ ಸ.ಹಿ.ಪ್ರಾ.ಶಾಲೆ ಜಟ್ಟಿಪಳ್ಳದಲ್ಲಿ 7 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು ಇದೀಗ ಪ್ರೌಢಶಾಲಾ ಶಿಕ್ಷಕಿಯಾಗಿ ಭಡ್ತಿ ಹೊಂದಿದ್ದಾರೆ.ಇವರು...
ಶ್ರೀ ಶಾರದಾ ಸಮೂಹ ವಿದ್ಯಾ ಸಂಸ್ಥೆ ಯಲ್ಲಿ ಇಂದು ಶಿಕ್ಷಕ ರ ದಿನಾಚರಣೆ ಯನ್ನು ಸರಳವಾಗಿ ಆಚರಿಸಲಾಯಿತು.ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿ ಪಿ ದೀಪ ಬೆಳಗಿಸಿದರು.ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ.ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತ್ಸ್ನಾ ಇವರು.ಕೆ .ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸರಳ...
ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ ಇಲ್ಲಿ ಪ್ರಭಾರಿ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ರೇವತಿ ಪಿ ಇವರು ಸುಳ್ಯ ತಾಲೂಕಿನ ಸರಕಾರಿ ಪ್ರೌಢಶಾಲೆ ಅಜ್ಜಾವರಕ್ಕೆ ದೈಹಿಕ ಶಿಕ್ಷಕಿಯಾಗಿ ಭಡ್ತಿ ಹೊಂದಿದ್ದಾರೆ. ಶ್ರೀಮತಿ ರೇವತಿ ಪಿ ದೈಹಿಕ ಶಿಕ್ಷಕಿ ಇವರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ ಇಲ್ಲಿಗೆ 1998 ರ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಇಲ್ಲಿನ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರೇಖಾ ಶೇಟ್ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಪಟ್ಟಣ ಗ್ರಾಮದ ದಂಪತಿಗಳಾದ ಶಾಂತಾ ಎಸ್ ಶೇಟ್ ಮತ್ತು ಸರ್ವೋತ್ತಮ ಪಿ.ಶೇಟ್ ದಂಪತಿಗಳ ದ್ವಿತೀಯ ಪುತ್ರಿಯಾಗಿ ಜನಿಸಿದ ರೇಖಾರವರು ತಮ್ಮ...
" ಗುರು ಬ್ರಹ್ಮ ಗುರುರ್ವಿಷ್ಣು ಗುರು ದೇವೋ ಮಹೇಶ್ವರ:*ಗುರು ಸಾಕ್ಷಾತ್ ಪರ:ಬ್ರಹ್ಮ ತಸ್ಮೈಶ್ರೀ ಗುರುವೇ ನಮಃ" ಹಿಂದಿನ ಕಾಲದಲ್ಲಿ ಇಂತಹ ಶ್ಲೋಕಗಳನ್ನು ಹಾಡಿ ಹೊಗಳುತ್ತಾ ಗುರುಗಳಿಗೆ ಮಹತ್ವ ಪೂರ್ಣ ಸ್ಥಾನ ಕೊಟ್ಟಿದ್ದರು.ಹಿಂದಿನ ಕಾಲದಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಆದರ್ಶ ವ್ಯಕ್ತಿಗಳಾಗಿದ್ದರು. ಆ ಸಮಯದಲ್ಲಿ ಗುರು-ಶಿಷ್ಯರ ಸಂಬಂಧ ಹಾಲು ಜೇನಿನಂತೆ ಇತ್ತು. ಆದರೆ ಇತ್ತೀಚೆಗೆ ಇಂತಹ ಗುರು ಶಿಷ್ಯರ...
Loading posts...
All posts loaded
No more posts