ಕುಕ್ಕೆ ಸುಬ್ರಮಣ್ಯದಲ್ಲಿ ಇಂದು ಜನ ಸಾಗರ : ಆಶ್ಲೇಷ ನಕ್ಷತ್ರ ಮತ್ತು ವಾರಂತ್ಯದ ಹಿನ್ನೆಲೆಯಲ್ಲಿ ಫುಲ್ ರಶ್

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಕ್ತಜನರ ಸಾಗರವೇ ಹರಿದುಬಂದಿದ್ದು ದೇವಸ್ಥಾನ ಫುಲ್ ರಶ್ ಉಂಟಾಗಿದೆ. ಆಶ್ಲೇಷ ನಕ್ಷತ್ರ, ಷಷ್ಠಿ ಹಾಗೂ ದೇವರ ಹೊರಗಿನ ಉತ್ಸವ ಇಂದಿಗೆ ಕೊನೆಗೊಳ್ಳಲಿದ್ದು ಜತೆಗೆ ವಾರಂತ್ಯವಾಗಿರುವುದರಿಂದ ಮಮೂಲಿಗಿಂತ ಹೆಚ್ಚಿನ ಭಕ್ತಾಧಿಗಳು ಸೇವೆ ಸಲ್ಲಿಸಲು ಆಗಮಿಸಿದ್ದಾರೆ.

ಕುಲ್ಕುಂದ :- ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜೂ.04 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಹಾಗೂ ವಿಶೇಷ ಹೋಮ ಹವನ ನಡೆಯಿತು. ರಾತ್ರಿ ರಂಗಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Ad Widget

ಎಲಿಮಲೆ : ಕಾಡುಜಬಳೆ ರಸ್ತೆಯಲ್ಲಿ ನಿರ್ಮಾಣಗೊಂಡ ಕಿರು ಸೇತುವೆ ಉದ್ಘಾಟನೆ

ದೇವಚಳ್ಳ ಗ್ರಾಮದ ಮಣಿಯೂರು ಮೂಲೆತೋಟ ಕಾಡುಜಬಳೆ ರಸ್ತೆಯಲ್ಲಿ ನಿರ್ಮಾಣಗೊಂಡ ಕಿರು ಸೇತುವೆಯ ಉದ್ಘಾಟನೆ ಕಾರ್ಯಕ್ರಮ ಇಂದು ಜರುಗಿತು. ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ದೀಪ ಬೆಳಗಿಸಿದರು. ಸುಶೀಲ ಕಾಡುಜಬಳೆ ರಿಬ್ಬನ್ ತುಂಡರಿಸಿ, ವಿಶ್ವನಾಥ ಕಾಡುಜಬಳೆ ತೆಂಗಿನಕಾಯಿ ಒಡೆಯುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸೂರ್ಯನಾರಾಯಣ ಭಟ್ ಮೂಲೆತೋಟ, ಮನಮೋಹನ್ ಅಂಬೆಕಲ್ಲು,...

ಅಜ್ಜಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಗ್ರಾಮ ಪಂಚಾಯತ್ ಅಜ್ಜಾವರ ಹಾಗೂ ರೋಟರಿ ಕ್ಲಬ್ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಭಾರತ ಸರಕಾರದ ಮಾನ್ಯತೆ ಪಡೆದ HLL Life Care Ltd. ಮಂಗಳೂರು ಇದರ...

ಐನೆಕಿದು : ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆ

ಐನೆಕಿದುವಿನಲ್ಲಿ ಜೂ.03 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ತ್ರಿಮೂರ್ತಿ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್...

ಶಶಿಕಲಾ ಇರಂತಮಜಲು ನಿಧನ

ಅಜ್ಜಾವರ ಗ್ರಾಮದ ಇರಂತಮಜಲು ಗೋಪಾಲ ರವರ ಪತ್ನಿ ಶಶಿಕಲಾ (42) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂನ್ 3 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಮೃತರು ಪುತ್ರರಾದ ವಿಶಾಕ್, ಸ್ವಸ್ತಿಕ್, ಪುತ್ರಿಯರಾದ ಶ್ವೇತಾ,ರಂಜಿತಾ, ತಂದೆ ಕೃಷ್ಣ ಬೆಳ್ಚಪ್ಪಾಡ ಅಂಬಾಡಿಮೂಲೆ ಅಡ್ಕಾರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೊಲ್ಲಮೊಗ್ರು ಹರಿಹರ ಸೊಸೈಟಿ ಅಧ್ಯಕ್ಷರಾಗಿ ಹರ್ಷಕುಮಾರ ದೇವಜನ ಆಯ್ಕೆ

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಾಜಿ ನಿರ್ದೇಶಕ, ಮಾಜಿ ಅಧ್ಯಕ್ಷ, ಹರ್ಷಕುಮಾರ ದೇವಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿನೂಪ್ ಮಲ್ಲಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಳಿಕ ತೆರವಾದ ಸ್ಥಾನಕ್ಕೆ ಜೂ.4ರಂದು ಅಧ್ಯಕ್ಷರ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಣಿಕಂಠ ಕೊಳಗೆ, ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ವಿನೂಪ್ ಮಲ್ಲಾರ, ನಿರ್ದೇಶಕರುಗಳಾದ...

ಕೆ.ವಿ.ಜಿ ಪಾಲಿಟೆಕ್ನಿಕ್ ಉಪಪ್ರಾಂಶುಪಾಲರಾಗಿ ಶ್ರೀಧರ ಎಂ.ಕೆ. ನೇಮಕ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಆಶ್ರಯದಲ್ಲಿ ನಡೆಯುತ್ತಿರುವ ಕೆ.ವಿ.ಜಿ ಸರಕಾರಿ ಅನುದಾನಿತ ಪಾಲಿಟೆಕ್ನಿಕ್ ಸುಳ್ಯ ಇದರ ಉಪಪ್ರಾಂಶುಪಾಲರಾಗಿ ಆಟೋಮೋಬೈಲ್ ಇಂಜಿನಿಯರಿಂಗ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕ ಶ್ರೀಧರ ಎಂ.ಕೆ ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ನೇಮಕಗೊಳಿಸಿದ್ದಾರೆ. ಮಂಡ್ಯದ ಪಿ.ಎಸ್...

ವಿಶ್ವ ಬೈಸಿಕಲ್ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ದಿನಾಂಕ 03-06-2022ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ವಿಶೇಷತೆ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಜಾಥಾಕ್ಕೆ ಚಾಲನೆಯನ್ನು ನೀಡಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ...

ಸುಬ್ರಹ್ಮಣ್ಯ :- ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮಂಜುನಾಥ್ ರಾವ್ ಅವರಿಗೆ ಶ್ರದ್ದಾಂಜಲಿ ಸಭೆ

ಇತ್ತೀಚೆಗೆ ಅಗಲಿದ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ್ ರಾವ್ ಅವರಿಗೆ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಜೂ.01 ಶ್ರದ್ದಾಂಜಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರಾದ ದಿನೇಶ್.ಬಿ.ಎನ್, ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ನಿರ್ದೇಶಕರುಗಳಾದ ವೆಂಕಟೇಶ್.ಹೆಚ್.ಎಲ್, ಮಾಧವ.ಡಿ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!