- Wednesday
- August 5th, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಸುಳ್ಯ ಹಾಗೂ ಪೈಲಾರು ಒಕ್ಕೂದ ಆಶ್ರಯದಲ್ಲಿ ಸೆ.6 ಆದಿತ್ಯವಾರ ದಂದು ಮಿತ್ರ ವೃಂದ ಪೈಲಾರ್ ಕಟ್ಟಡದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನಡೆಯಲಿದೆ. ಆಯುಷ್ಮಾನ್ ಕಾರ್ಡ್ ಮಾಡಲು ಬರುವವರು ಒರಿಜಿನಲ್ ಆಧಾರ್ ಕಾರ್ಡ್ & ರೇಷನ್ ಕಾರ್ಡ್ ತರಬೇಕಾಗಿ ಸಂಘಟಕರು ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಇಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಹರೀಶ್ ಕುಮಾರ್ ವೈ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಮಂಜುನಾಥನಗರ ಇಲ್ಲಿನ ಆಂಗ್ಲಭಾಷಾ ಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಕಳೆದ 17 ವರ್ಷಗಳಿಂದ ಸ.ಹಿ.ಪ್ರಾಥಮಿಕ ಶಾಲೆ ಮೇನಾಲದಲ್ಲಿ ಕರ್ತವ್ಯ ನಿರ್ವಹಿಸಿ ಎಸ್.ಡಿ.ಎಂ.ಸಿ, ಹಿರಿಯ ವಿದ್ಯಾರ್ಥಿ...
ಎಸ್ ಎಸ್ ಎಫ್ .ಸುನ್ನಿ ಸ್ಟೂಡೆಂಟ್ ಫೆಡರೇಶನ್ ಇದರ ಕುಶಾಲನಗರ ಸೆಕ್ಟರ್ ನೂತನ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮ ಸೆಪ್ಟಂಬರ್ 5 ರಂದು ನಡೆಯಿತು. ಈ ಸಂದರ್ಭದಲ್ಲಿ ಸೈಯದ್ ಕುಟುಂಬದ ಮಹಾನರು, ಉಮಾರ ನೇತಾರರು ಎಸ್ ವೈ ಎಸ್. ಮತ್ತು ಎಸ್ಎಸ್ಎಫ್ ಇದರ ರಾಜ್ಯ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಆಪಾದನೆಯ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡ ಕುರಿತು ಕಲ್ಲುಗುಂಡಿಯಿಂದ ವರದಿಯಾಗಿದೆ. ಕಲ್ಲುಗುಂಡಿ ಸಮೀಪದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಅಡಿ ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿಯ ನಿವಾಸಿಗಳಾದ ಭರತ್ ಹಾಗೂ ರಾಕೇಶ್ ಎಂದು ತಿಳಿದುಬಂದಿದೆ.
ನಗರ ಪಂಚಾಯತ್ ಕಾರು ಚಾಲಕರಾಗಿದ್ದು , ಕೋವಿಡ್ ಸೋಂಕಿತರಾಗಿ ಮೃತಪಟ್ಟ ಖಾಲಿದ್ ರವರನ್ನು ಕೊರೊನಾ ವಾರಿಯರ್ಸ್ ಆಗಿ ಪರಿಗಣಿಸಿ ಅವರ ಕುಟುಂಬಕ್ಕೆ ಸರಕಾರದಿಂದ ಸಹಾಯ ಕೊಡಿಸಲು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತು ನಗರ ಪಂಚಾಯತ್ ಆಡಳಿತಾಧಿಕಾರಿ ಸುಳ್ಯ ತಹಶಿಲ್ದಾರ್ ಅನಂತಶಂಕರ್ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಸೆ .5 ರಂದು ಮನವಿ ಸಲ್ಲಿಸಿದರು. ಕಳೆದ ನಾಲ್ಕೈದು...
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭಕ್ತಕೋಡಿ ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಪುಷ್ಪಾವತಿ ಪಿ ಪದೋನ್ನತಿ ಹೊಂದಿದ್ದು, ಇದೀಗ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆ.ಪಿ.ಎಸ್) ಬೆಳ್ಳಾರೆ ಇಲ್ಲಿನ ಪ್ರೌಢಶಾಲಾ ವಿಭಾಗಕ್ಕೆ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಭಡ್ತಿಗೊಂಡಿರುತ್ತಾರೆ. ಇವರು 1998 ರಿಂದ ಸ.ಹಿ.ಪ್ರಾಥಮಿಕ ಶಾಲೆ ಭಕ್ತಕೋಡಿಯಲ್ಲಿ ಸೇವೆಯನ್ನು ಆರಂಭಿಸಿ 22 ವರ್ಷಗಳ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಸತೀಶ್ ಚಂದ್ರ ಪಿ ಇವರು ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಹೂ ಹಾಕಿ ಗೌರವಪೂರ್ವಕ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶೀಲಾವತಿ ಹಾಗೂ ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಕತಡ್ಕ ಪುತ್ತೂರು ತಾಲೂಕು ಇಲ್ಲಿ ಕಳೆದೊಂದು ವರ್ಷದಿಂದ ಸಹ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಶ್ರೀಮತಿ ಹರ್ಷಲತ ಎಂ ಜೆ ಇವರು ಸರಕಾರಿ ಪ್ರೌಢಶಾಲೆ ಏನೆಕಲ್ಲು ಇಲ್ಲಿಗೆ ಇಂಗ್ಲಿಷ್ ಭಾಷಾ ಸಹಾಯಕ ಶಿಕ್ಷಕರಾಗಿ ಪದೋನ್ನತಿ ಹೊಂದಿರುತ್ತಾರೆ. ಇವರು ಮೂಲತಃ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕಣಜಾಲು ಜತ್ತಪ್ಪ ಗೌಡ ಮತ್ತು ಮೀನಾಕ್ಷಿ...
ಬೆಳ್ಳಾರೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಶೇಷಮ್ಮ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಕೇಶವ ನಾಯಕ್ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರೆ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಪುಷ್ಪಾನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ...
ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿಶಿಕ್ಷಕರ ದಿನಾಚರಣೆಯು ಸುಳ್ಯದ ರಥಬೀದಿಯಲ್ಲಿರುವ ರೋಟರಿ ಶಾಲೆಯಲ್ಲಿ ಸೆ.5 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹಾದೇವ್, ರೋಟರಿ ಶಾಲೆಯ ಸಂಚಾಲಕ ಜಿತೇಂದ್ರ ನಿಡ್ಯಮಲೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ,...
Loading posts...
All posts loaded
No more posts
