- Thursday
- August 6th, 2026
ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ "ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆ"ಯ ಫಲಿತಾಂಶ ಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿ.ಯು.ಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ "ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025" ಕಾರ್ಯಕ್ರಮದ ಅಂಗವಾಗಿ ಡಿ.05 ರಂದು ಕುಕ್ಕುಜಡ್ಕ ಆಟೋ ಚಾಲಕರಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ವೃದ್ಧಿಗೊಳಿಸುವ ಕರಪತ್ರ ವಿತರಿಸಲಾಯಿತು.ಸಮಾಜದಲ್ಲಿ ಆರೋಗ್ಯಕರ ಮತ್ತು ಸ್ವಚ್ಛವಾದ ವಾತಾವರಣ ನಿರ್ಮಾಣಕ್ಕೆ ಪ್ರೇರಣೆ ನೀಡುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ...
ಸುಳ್ಯ ತಾಲೂಕು ಪಂಜ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರದ ಬಗ್ಗೆ ತಾಲೂಕು ಪಂಚಾಯತ್ ನಿಂದ ನೇಮಕಗೊಂಡಿರುವ ತನಿಖಾ ತಂಡದ ನೇತೃತ್ವ ವಹಿಸಿರುವ ದೇವರಾಜ್ ಮುತ್ಲಾಜೆಯವರ ಮೂಲಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ದ.ಸಂ.ಸ ವತಿಯಿಂದ ಲಿಖಿತ ರೂಪದ ಮನವಿಯನ್ನು ನೀಡಲಾಯಿತು.ಇದರ ಪ್ರತಿಯನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರಿಗೂ ಇವರ ಮೂಲಕ ಕೊಡಲಾಗಿದೆ. ದಲಿತ ನೌಕರರಾದ...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಶಾಸ್ತಾವು ಯುವಕ ಮಂಡಲ ರೆಂಜಾಳ ಇದರ ಆಶ್ರಯದಲ್ಲಿ ಮರ್ಕಂಜ ಗ್ರಾಮದ ಮಿತ್ತಡ್ಕ ಕಾಲೊನಿ ಸಮೀಪದ ಬಸ್ ಪ್ರಯಾಣಿಕರ ತಂಗುದಾಣವನ್ನು ದುರಸ್ತಿಪಡಿಸಿ, ಪೈಂಟ್ ಬಳಿದು ಪ್ರಯಾಣಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಡಿ.9 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ.ಎಸ್ ಚಂದ್ರಲಿಂಗಂ ರವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್ ರವರ ಶಿಪಾರಸ್ಸಿನ ಮೇರೆಗೆ...
ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ತಾಲೂಕು ದಂಡಾಧಿಕಾರಿಯಿಂದ ಮಂಜೂರಾತಿಯಾದ ಆಯುಧ ಪರವಾನಿಗೆಯನ್ನು ಹೊಂದಿ ಡಿ. 31 ರಂದು ನವೀಕರಣ ಮುಕ್ತಾಯಗೊಳ್ಳುವ ಪರವಾನಿಗೆದಾರರು ಡಿ. 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಬೇಕು. ದಿನಾಂಕ 01.01.2026 ರಿಂದ ಸ್ವೀಕೃತಿಯಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ 2025 ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್...
ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ.ಪಿ.ಎಸ್ ಬೆಳ್ಳಾರೆ ಇವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳಾದ ಆದ್ಯಾ ಬಾಬ್ಲುಬೆಟ್ಟು ಭಾಗವಹಿಸಿ ಗಝಲ್ ಮತ್ತು ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡರು....
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆಯು ಡಿ.08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಯವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಶಿಬಿರವನ್ನು ಸಂಸ್ಕೃತ ಭಾರತಿ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿ...
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ ಹಾಗೂ ತತ್ವಮಸಿ ಗುಂಪು ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಶಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ...
ಸುಬ್ರಹ್ಮಣ್ಯ ಡಿಸೆಂಬರ್ 9 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಕುಕ್ಕೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಜಮಾವನೆಗೊಂಡಿದ್ದರು. ಬೆಳಗ್ಗೆ 6:00 ಯಿಂದ ಆರಂಭವಾದ ಆಶ್ಲೇಷ ಬಲಿ ಸೇವೆಯು ನಿರಂತರವಾಗಿ ಮೂರು ಹಂತಗಳಲ್ಲಿ( ಬ್ಯಾಚ್) 11 ಗಂಟೆ ತನಕ ಭಕ್ತರು ಸೇವೆಗಾಗಿ ಸರತಿ ಸಾಲಿನಲ್ಲಿ ಇದ್ದದು ಕಂಡು ಬಂತು. ಇತ್ತ...
Loading posts...
All posts loaded
No more posts
