- Monday
- November 25th, 2024
ಪ್ರಾಥಮಿಕ ಮತ್ತು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕಾರ್ಯಾಗಾರ. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಇದರ ವತಿಯಿಂದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕಾರ್ಯಾಗಾರ ಸುಳ್ಯದ ಕನ್ನಡ ಭವನದಲ್ಲಿಇಂದು ನಡೆಯಿತು.ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ...
ಬೆಳ್ಳಾರೆ :ಅಯ್ಯನಕಟ್ಟೆಯಿಂದ ಚೊಕ್ಕಾಡಿ ಯನ್ನು ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಇರುವ ಮೋರಿಯ ಮೇಲ್ಭಾಗದಲ್ಲಿ ಮಣ್ಣು ಕುಸಿದು ಡಾಮರು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದೆ. ವಾಹನ ಸವಾರರ ಅರಿವಿಗೆ ಬಾರದೆ ವಾಹನಗಳ ಚಕ್ರವು ರಸ್ತೆಯಲ್ಲಿನ ಹೊಂಡದ ಒಳಗೆ ಸಿಲುಕಿ ಅಪಾಯ ಸಂಭವಿಸುವ ಸಾಧ್ಯತೆ ಇದ್ದು ಆಡಳಿತ ಯಂತ್ರವು ತಕ್ಷಣವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಸರಿಪಡಿಸಿ ಮುಂದಾಗುವ ಅಪಾಯವನ್ನ ತಡೆಗಟ್ಟಬೇಕಾಗಿದ್ದು...
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75...
ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ 7ನೇ ವರ್ಷದ ಅಮರ ಮ್ಯಾರಥಾನ್ ಮತ್ತು ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಂಬರ್ 10 ರಂದು ಅಮರಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಈ ವರ್ಷದ ಅಮರ ರತ್ನ ಪ್ರಶಸ್ತಿಯನ್ನು ಚಂದ್ರಶೇಖರ ಕಡೋಡಿಯವರು ನೀಡಿದ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಅಮರ ಸಂಘಟನಾ...
ಕೆಲ ವರ್ಷಗಳ ಹಿಂದೆ ಚಿಕ್ಕದಾಗಿ ಗುಂಡಿಗಳಿಂದ ತುಂಬಿದ್ದ ದೊಡ್ಡತೋಟ ಉಬರಡ್ಕ ಸುಳ್ಯ ರಸ್ತೆ ಅಗಲೀಕರಣಗೊಂಡು ಅಭಿವೃದ್ಧಿಗೊಂಡಿದೆ. ರಸ್ತೆಯೆನೋ ಅಭಿವೃದ್ಧಿಯಾಯಿತು ಆದರೇ ಅಪಘಾತ ಸಂಖ್ಯೆ ಹೆಚ್ಚುತ್ತಾ ಹೋಗುತ್ತಿದ್ದು, ನ.08 ರಂದು ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿಯೋರ್ವಳನ್ನು ಬಲಿ ತೆಗೆದುಕೊಂಡಿದೆ. ಈ ಅಪಘಾತಕ್ಕೆ ಮೊದಲ ಕಾರಣ ರಸ್ತೆ ಬದಿ ಕ್ಲಿಯರೆನ್ಸ್ ಇಲ್ಲದಿರುವುದು ಗೋಚರಿಸುತ್ತದೆ. ಈ ರಸ್ತೆಯುದ್ದಕ್ಕೂ ಕಾಡುಗಿಡಗಳು ಬೆಳೆದು ರಸ್ತೆಯವರೆಗೂ...
ಕಾರು ನಿಲ್ಲಿಸಿದೇ ಚಾಲಕ ಪರಾರಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು, ಸ್ಕೂಟಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಕೂರು ಗ್ರಾಮದ ವಿನೋಬನಗರದಲ್ಲಿ ನ.9ರಂದು ಬೆಳಿಗ್ಗೆ ಸಂಭವಿಸಿದ್ದು, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ರಿಜಿಸ್ಟ್ರೇಶನಿನ ಬೀಝಾ ಕಾರೊಂದು ವಿನೋಬನಗರ ಶಾಲೆಯ ಬಳಿ ಮುಖ್ಯರಸ್ತೆಯಲ್ಲಿ ಅಡ್ಕಾರಿನ ಜಿ.ಎಂ. ಹಸನ್ ಅವರು...
ನ.09 ಶನಿವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ...
ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್,...
ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಇಳಿದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ನ.8ರಂದು ರಾತ್ರಿ ಸಂಭವಿಸಿದೆ. ಮಳೆ ಕಾರಣ ಲಾರಿ ಆನೆಗುಂಡಿಯ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಸಂಚರಿಸಿ, ರಸ್ತೆ ಬದಿಯ ವಿದ್ಯುತ್...
ಉಬರಡ್ಕದ ಸೂಂತೋಂಡು ಬಳಿಯಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ರಚನಾ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಶಿಕ್ಷಕರು ಹಾಗೂ ಊರಿನವರು ಆಸ್ಪತ್ರೆ ಬಳಿ ನೆರೆದಿದ್ದು ಎಲ್ಲರಲ್ಲೂ ಶೋಕ ಮನೆ ಮಾಡಿದೆ. ಮೃತಪಟ್ಟ ವಿದ್ಯಾರ್ಥಿನಿ ಹೈಸ್ಕೂಲ್,, ಪಿಯುಸಿಯಲ್ಲಿ ಪ್ರತಿಭಾನ್ವಿತೆಯಾಗಿದ್ದು ಊರಿನಲ್ಲು ಜನರ ಜೊತೆ ಬೆರೆತು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಳು. ಯಕ್ಷಗಾನ ಕಲೆಯಲ್ಲೂ ತನ್ನ ಪ್ರತಿಭೆ ಪ್ರದರ್ಶಿಸಿದ್ದ ರಚನಾ ಇತ್ತೀಚೆಗೆ ನಡೆದ...
Loading posts...
All posts loaded
No more posts