ಸುಳ್ಯ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈ ನಿಧನ.

ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿಯಾಗಿ ಕೆಲಸ ನಿರ್ವಹಿಸಿ ವರ್ಗಾವಣೆ ಗೊಂಡು ಬಳಿಕ ಇದೀಗ ಬಿಜಾಪುರದಲ್ಲಿ ಜಿಲ್ಲಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈ ಯವರು ಇಂದು ಮುಂಜಾನೆ ಹೃದಯಾಘಾತದಿಂದ ನಿದನರಾದರು ಇವರು ಮೂಲತಃ ಸವಣೂರಿನವರು ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಂಪಾಜೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಅಧ್ಯಕ್ಷರಾಗಿ ಸೋಮಶೇಖರ ಕೊಯಿಂಗಾಜೆ ಉಪಾಧ್ಯಕ್ಷರಾಗಿ ಶ್ರೀಮತಿ ಯಮುನ ಬಿ.ಎಸ್. ಅವಿರೋಧ ಆಯ್ಕೆ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಯಮುನ ಬಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.2ರಂದು ನಡೆದ ನೂತನ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಯಮುನ ಬಿ.ಎಸ್. ಅವರು ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ...
Ad Widget

ಹರಿಹರ ಪಳ್ಳತ್ತಡ್ಕ : ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘ ಹಾಗೂ ದಾನಿಗಳ ಸಹಕಾರದೊಂದಿಗೆ ನೂತನವಾಗಿ ಖರೀದಿಸಿದ ಅಂಬ್ಯುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ಜ.02 ರಂದು ಹರಿಹರ ಪಳ್ಳತ್ತಡ್ಕದಲ್ಲಿ ನಡೆಯಿತು.ಬೆಳಿಗ್ಗೆ ಅಂಬ್ಯುಲೆನ್ಸ್ ವಾಹನವನ್ನು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ನೆರವೇರಿಸಿ ನಂತರ ಎಲ್ಲಪಡ್ಕದ ಶ್ರೀ ಗುಳಿಗರಾಜನ ಕಟ್ಟೆಯ ಬಳಿ...

ಮುಂಡಕಜೆ ಜಂಕ್ಷನ್ ನಲ್ಲಿ ಪಿಕಪ್ ವಾಹನ ಪಲ್ಟಿ

ಅಮರಪಡೂರು ಗ್ರಾಮದ ಕಣಿಪ್ಪಿಲ ಎಂಬಲ್ಲಿ ಇಂದು ಬೆಳಿಗ್ಗೆ ಪಿಕಪ್ ಪಲ್ಟಿಯಾದ ಘಟನೆ ವರದಿಯಾಗಿದೆ. ಚೊಕ್ಕಾಡಿಯಿಂದ ಸುಳ್ಯಕ್ಕೆ ಕೆಲಸಕ್ಕೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿಯಾಗಿದ್ದು, ಅದರಲ್ಲಿ 6 ಜನ ಇದ್ದರು. ಪಲ್ಟಿಯಾದ ರಭಸಕ್ಕೆ ಎಲ್ಲರಿಗೂ ಗಾಯಗಳಾಗಿದ್ದು, ಅವರ ಸುಳ್ಯ ಆಸ್ಪತ್ರೆ ಗೆ ಚಿಕಿತ್ಸೆಗೆ ಕರೆತರಲಾಯಿತು. ಈ ಪಿಕಪ್ ನಲ್ಲಿ ಯತೀನ್ ಪುಳಿಮರಡ್ಕ ಚಾಲಕರಾಗಿದ್ದರು ಎಂದು ಹೇಳಲಾಗುತ್ತಿದೆ.

ಕಣೆಮರಡ್ಕ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಹಾಗೂ ಶನೈಶ್ಚರ ಪೂಜೆ ಮುಂದೂಡಿಕೆ

ಮಂಡೆಕೋಲು ಗ್ರಾಮದ ಕಣೆಮರಡ್ಕ ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದೆಂದು ಶಬರಿಗಿರಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯದ ನೂತನ ಬ್ರಹ್ಮರಥ ವಿಧ್ಯಕ್ತ ಭೂ ಸ್ಪರ್ಶ , ಸಭಾ ಕಾರ್ಯಕ್ರಮ ವಿಧ್ಯುಕ್ತ ಚಾಲನೆ

ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯಕ್ಕೆ ನೂತನ ಬ್ರಹ್ಮರಥ ಭೂ ಸ್ಪರ್ಶ ಕಾರ್ಯಕ್ರಮವು ಜ.೨ ರಂದು ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆಯಿತು. ಬಳಿಕ ಸಭಾ ಕಾರ್ಯಕ್ರಮವು ವಿಧ್ಯುಕ್ತ ಚಾಲನೆ ನೀಡಲಾಯಿತು ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ಈ ಸಭಾ ವೇದಿಕೆಯಲ್ಲಿ ಪರಮಪೂಜ್ಯ ಶ್ರೀಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನ...

ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿ ಹೊಸ ವರ್ಷಾಚರಣೆ – ಬಂಧನ, ಬಿಡುಗಡೆ

ಅರಂತೋಡು: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಹೊಸ ವರ್ಷ ಆಚರಣೆಗೆ ಸಿದ್ಧತೆ ಮಾಡುತ್ತಿದ್ದ ಆರೋಪದಲ್ಲಿ 30 ಮಂದಿ ಯುವಕರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಡಿ.31 ರಂದು ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ...

ತೊಡಿಕಾನ : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ಹಸ್ತಾಂತರ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಸಂಪಾಜೆ ವಲಯ ತೊಡಿಕಾನ ಕಾರ್ಯಕ್ಷೇತ್ರದ ಆದಿಶಕ್ತಿ ಸಂಘದ ಸದಸ್ಯ ರಾದ ವಸಂತಿ ರವರ ಅತ್ತೆ ರಾಮಕ್ಕ‍ರವರಿಗೆ ವಾಟರ್ ಬೆಡ್ ನೀಡಲಾಯಿತು. ರಾಮಕ್ಕರವರು  ಅನಾರೋಗ್ಯದಿಂದಿದ್ದು ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ನ್ನು ವಲಯ ಜನಜಾಗ್ರತಿ ಅಧ್ಯಕ್ಷರಾದ ಸೋಮಶೇಖರ ಪೈಕ ರವರು ವಿತರಿಸಿದರು.  ವಲಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

ಪೆರುವಾಜೆ : ಮುಕ್ಕೂರು ಶ್ರೀ ಉಳ್ಳಾಲ್ತಿ  ಭಕ್ತವೃಂದದ ಸದಸ್ಯರಿಂದ ಕರಸೇವೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ಹಾಗೂ ಶ್ರೀ ಕ್ಷೇತ್ರ ಪೆರುವಾಜೆ ಭಕ್ತವೃಂದದಿಂದ ಜ‌.1 ರಂದು ರಾತ್ರಿ ಕರಸೇವೆ ನಡೆಯಿತು. ಶ್ರೀ ಕ್ಷೇತ್ರದಲ್ಲಿ  ದಿನಾಂಕ 16-01-2025 ರಿಂದ 21-01-2025 ರವರೆಗೆ ವಾರ್ಷಿಕ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಡೆಯಲಿದೆ.

ಸುಳ್ಯ: ಬ್ರಹ್ಮರಗಯ 47ನೇ ವರ್ಷದ ಅಯ್ಯಪ್ಪ ದೀಪೋತ್ಸವ

ಶ್ರೀ ಕ್ಷೇತ್ರ ಬ್ರಹ್ಮರಗಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಯವರ ನೇತೃತ್ವದಲ್ಲಿ 47ನೇ ವರ್ಷದ ಅಯ್ಯಪ್ಪ ದೀಪೋತ್ಸವ ಮತ್ತು ರಂಗಪೂಜೆ ಮಹೋತ್ಸವ ಜ 01ರಂದು ವಿಜೃಂಭಣೆಯಿಂದ ನಡೆಯಿತು.ಹಳೆಗೇಟು ನಿಂದ ಕೇರಳದ ಚೆಂಡೆ ವಾದನದೊಂದಿಗೆ, ಶ್ರೀ ದುರ್ಗಾಶಕ್ತಿ ಸೇವಾ ಬಳಗ ಹೊಸಗದ್ದೆ, ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿ, ಶ್ರೀ ಗಜಾನನ ಭಜನಾ ಮಂದಿರ...
Loading posts...

All posts loaded

No more posts

error: Content is protected !!