ಕೃಷಿಕರಿಗೆ ಗುಡ್ ನ್ಯೂಸ್ , ಬೆಳೆ ವಿಮೆ ಪಾವತಿಸಿದ ರೈತರಿಗೆ ಪಾವತಿ ಪ್ರಕ್ರಿಯೆ ಆರಂಭ.

ಸುಳ್ಯ : ಅತೀವವಾದ ಮಳೆಯಿಂದ ಕೊಳೆರೋಗ ಹಾಗೂ ಹಳದಿರೋಗ ಸಹಿತ ರೈತರು ಕಂಗಾಲಾಗಿದ್ದು ಈ ಸಂದರ್ಭದಲ್ಲಿ ರೈತರಿಗೆ ಅನುಕೂಲಕರವಾಗುವಂತೆ ಕೇಂದ್ರ ಸರಕಾರ ವಿಮೆ ಯೋಜನೆಯನ್ನು ಜಾರಿಗೆ ತಂದು ಚುನಾವಣೆ ಬಂದ ಹಿನ್ನೆಲೆಯಲ್ಲಿ ಒಂದಿಷ್ಟು ಗೊಂದಲಗಳು ಹಾಗೂ ರೈತರ ಆಕ್ರೋಶದ ಬಳಿಕ ಅಡಿಕೆ ಮತ್ತು ಇತರೆ ಬೆಳೆಗಳಿಗೆ ವಿಮೆಯನ್ನು ಜಾರಿಗೊಳಿಸಿತ್ತು. ಇದೀಗ ರೈತರ ಖಾತೆಗಳಿಗೆ ಪ್ರೀಮಿಯಂ ಕಟ್ಟಿದ...

ಜೇಸಿಐ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕೆ.ಪಿ. ಎಸ್ ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

9 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಜೇಸಿಐ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೆಳ್ಳಾರೆ ಜೇಸಿಐ ಘಟಕದ ವತಿಯಿಂದ ಕೆಪಿಎಸ್ ನಲ್ಲಿ ನಡೆದ ಪೋಷಕರ ಸಭೆಯಲ್ಲಿ ಅಭಿನಂದಿಸಲಾಯಿತು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ಸದಸ್ಯ...
Ad Widget

ಶಾಟ್ ಪುಟ್ ಸ್ಪರ್ಧೆಯಲ್ಲಿ ಅರಂತೋಡು ಶಾಲೆಯ ಮಂತನ್ ರಾಜ್ಯಮಟ್ಟಕ್ಕೆ ಆಯ್ಕೆ

ಅರಂತೋಡು ಸ.ಉ. ಹಿ. ಪ್ರಾ. ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮಂಥನ್ ಅವರು ಶಾಟ್ ಪುಟ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದ ಶಾಟ್ ಪುಟ್ ಸ್ಪರ್ಧೆಯಲ್ಲಿ ಮಂಥನ್ ಅವರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈತ ಸುಳ್ಯದ ಗಣೇಶ್ ಮತ್ತು ಅಶ್ವಿನಿ ದಂಪತಿಗಳ ಪುತ್ರ. ದೈಹಿಕ...

ಪುತ್ತೂರಿನ ರಾಧಾ’ಸ್ ಫ್ಯಾಮಿಲಿ ಶೋ ರೂಂ ನ ಬಿಗ್‌ಬಾಸ್ ರಾಧಾ’ಸ್ ಉತ್ಸವದ 4 ನೇ ವಾರದ ಡ್ರಾ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...

ಹಾಲೆಮಜಲು : ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಉದ್ಘಾಟನೆ – ಇಂದು ಕೂಡ ಅವಕಾಶವಿದೆ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ, ವಿಜಯ ಗ್ರಾಮ ಸಮಿತಿ ನಾಲ್ಕೂರು, ಆತ್ಮ ರೈತ ಮಿತ್ರ ಸ್ವಸಹಾಯ ಸಂಘ ನಾಲ್ಕೂರು ಇವುಗಳ ಆಶಯದಲ್ಲಿ ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಎಂದು ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡ ಸುಬ್ರಮಣ್ಯ ಶಾಖೆಯ ವ್ಯವಸ್ಥಾಪಕರಾದ ವಿಶ್ವರ್ಥ್ ಕುಮಾರ್ ಕೆಎಸ್...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ದಿನಾಂಕ 04/11/2024 ರಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ಜೆ ರೈ ಅತಿಥಿಯಾಗಿದ್ದರು. ಕನ್ನಡ...

ಕೊಲ್ಲಮೊಗ್ರು : ಅಂಗನವಾಡಿ ಕಾರ್ಯಕರ್ತೆ ನಳಿನಿಯವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 41 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ಅ.30 ರಂದು ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಹೊನ್ನಪ್ಪ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ನ.04 ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳು, ಪೋಷಕರು, ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ – ಕೇನಾಜೆ

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ನುಡಿದರು. ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘಗಳು‌ ಜಂಟಿಯಾಗಿ ನಡೆಸಿದ ಕನ್ನಡ ರಾಜ್ಯೋತ್ಸವ...

ಅರಂತೋಡು : 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ನವೆಂಬರ್ 23 ರಂದು ನಡೆಯಲಿರುವ 27ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನವೆಂಬರ್ 03 ರಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ್, ಸ್ವಾಗತ ಸಮಿತಿಯ ಅಧ್ಯಕ್ಷರುಗಳಾದ ಕೇಶವ ಅಡ್ತಲೆ,...

ಡಾ. ಕೆ ವಿ ಚಿದಾನಂದ ರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರಿಗೆ ಗೌರವ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೆ. ಗೋಕುಲ್ ದಾಸ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಡಾ. ಲೀಲಾಧರ್ ಡಿ.ವಿ. ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!