- Thursday
- August 6th, 2026
5 ಮತ್ತು 8 ನೇ ತರಗತಿಯ ಮೌಲ್ಯಾಂಕನ (ಪರೀಕ್ಷೆ) ಮಾ.27 ರಿಂದ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದ್ದಾರೆ.ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ೫ ಮತ್ತು ೮ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ , ಕಲಿಕಾ ನ್ಯೂನ್ಯತೆ, ಕಲಿಕಾ...
ಆಲೆಟ್ಟಿ ಗ್ರಾಮದ ಪ್ರತಿಷ್ಠಿತ ಕುಡೆಕಲ್ಲು ಮನೆತನದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾಮೂಲು ಪ್ರಕಾರ ನಡೆಯುವ ಶ್ರೀ ವಿಷ್ಣುಮೂರ್ತಿ ಹಾಗೂ ಉಪದೈವಗಳ ಕಳಿಯಾಟ ಮಹೋತ್ಸವವು ಮಾ.24 ರಿಂದ 26 ರತನಕ ಜರುಗಿತು. ಮಾ.24 ರಂದು ಮಧ್ಯಾಹ್ನ ಶ್ರೀ ವೆಂಕಟರಮಣ ದೇವರ ಹರಿಸೇವೆಯಾಗಿ ರಾತ್ರಿ ಕಳಿಯಾಟಕ್ಕೆ ಕೂಡಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.ನಂತರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಿಂದ...
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಎ. ೧೩ರಿಂದ ಎ. ೨೦ರವರೆಗೆ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯು ಮಾ. ೨೬ರಂದು ದೇವಸ್ಥಾನದ ಅಕ್ಷಯ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಉಳುವಾರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ.ದಿವಾಕರ ರೈ, ಕೆ.ಆರ್. ಗಂಗಾಧರ್, ಎ.ಕೆ....
ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ ಯುವಸಂವಾದ ಕಾರ್ಯಕ್ರಮದಲ್ಲಿ ತಮಿಳುನಾಡು ಬಿ.ಜೆ.ಪಿ. ಅಧ್ಯಕ್ಷ ಹಾಗೂ ಐ.ಪಿ.ಎಸ್. ಅಧಿಕಾರಿಯಾಗಿದ್ದ ಅಣ್ಣಾಮಲೈಯವರು ಭಾಗವಹಿಸಿದ್ದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶೇಷ ಉಪನ್ಯಾಸ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ,ಬ್ರಿಜೇಶ್ ಚೌಟ, ನೀಲಾಂಬಿಕೆ ನಟರಾಜನ್ ಉಪಸ್ಥಿತರಿದ್ದರು.
ಸಂಪಾಜೆ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ ಮತ್ತು ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಸಮ್ಮಾನ ಮಾ.28ರಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಮಾ.28ರಂದು ಬೆಳಿಗ್ಗೆ ಗಣಹೋಮ,ರಾತ್ರಿ 7.30ಕ್ಕೆ ಭಂಡಾರ ಆಗಮಿಸಿ ಮೇಲೇರಿಗೆ ಅಗ್ನಿಸ್ಪರ್ಶ,ಕುಲ್ಚಾಟ ಹೊರಡುವುದು. ಮಾ.29ರಂದು ಬೆಳಿಗ್ಗೆ 6ಕ್ಕೆ ಅಗ್ನಿಪ್ರವೇಶ ಬಳಿಕ ಪ್ರಸಾದ ವಿತರಣೆ,ಮಾರಿಕಳ ಪ್ರವೇಶ,ನಂತರ ಸುರಿಗೆಗಳನ್ನು...
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ "ಸ್ವಾವಲಂಬಿ ಬದುಕಿಗಾಗಿ ಸ್ವ-ಉದ್ಯೋಗ" ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನಗಳನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಲೋಕಾರ್ಪಣೆಗೊಳಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್...
ಸುಳ್ಯ ತಾಲೂಕಿನ ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವನಿತಾ ಫ್ಯಾನ್ಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವರಿಸಲ್ಪಟ್ಟು ಅಂಗಡಿಯಲ್ಲಿದ್ದ ಬೆಲೆ ಬಾಳುವ ಫ್ಯಾನ್ಸಿ ಐಟಂಗಳು ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಅಪಾರ ನಷ್ಟ ಸಂಭವಿಸಿದ್ದು, ಬೆಂಕಿಯನ್ನು ಸಾರ್ವಜನಿಕರ ಸಹಾಯದಿಂದ ನಂದಿಸಲಾಯಿತು.
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಪ್ತ ಪುತ್ತೂರಿನ ಜಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೊಸ ಅಭ್ಯರ್ಥಿ ಘೋಷಿಸಲಾಗಿದೆ.ಕಳೆದ ನಾಲ್ಕು ಬಾರಿ ಸುಳ್ಯದಿಂದ ಸ್ಪರ್ಧಿಸಿದ್ದ...
ಕಳಂಜ ಗ್ರಾಮದ ಮಣಿಮಜಲು ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಗುಡ್ಡಕ್ಕೆ ಬೆಂಕಿ ವ್ಯಾಪಿಸುವ ಸಂಭವ ಎದುರಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿ ನಂದಿಸುವ ಮೂಲಕ ಮುಂದಾಗಬಹುದಾಗಿದ್ದ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಂಝಾನ್ ತಿಂಗಳ ಸಾಂತ್ವನದ ಭಾಗವಾಗಿ ಗಾಂಧಿನಗರ ಯುನಿಟ್ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಒಂದಾದ 20 ನಮಾಝ್ ಖಮೀಸ್ ವಿತರಣೆಯನ್ನು ದಿನಾಂಕ 24-03-2023 ನೇ ಶುಕ್ರವಾರ ಅಸರ್ ನಮಾಝಿನ ಬಳಿಕ ಸುನ್ನೀ ಸೆಂಟರ್ ನಲ್ಲಿ ನಡೆಯಿತು,ಯುನಿಟ್ ಉಪಾಧ್ಯಕ್ಷರಾದ ಸಯ್ಯಿದ್ ತ್ವಾಹಿರ್ ತಂಙಳ್ ಸಅದಿ ಸುಳ್ಯ ರವರ ದುವಾದೊಂದಿಗೆ ಆರಂಬಿಸಿ , ಸಯ್ಯಿದ್ ಝೈನುಲ್ ಆಬಿದ್ ತಂಙಳ್...
Loading posts...
All posts loaded
No more posts
