ಪಂಜ : ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ – ಕೇಂದ್ರ ಸಚಿವ ಶ್ರೀಪಾದ ನಾಯಕ್ ಭಾಗಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಮೈದಾನದ ಸುಷ್ಮಾ ಸ್ವರಾಜ್ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ “ಮಾತೃ ಸಂಗಮ” ಕಾರ್ಯಕ್ರಮ ಇಂದು ನಡೆಯಿತು .ಕಾರ್ಯಕ್ರಮವನ್ನು ಕೇಂದ್ರ ಪ್ರವಾಸೋದ್ಯಮ, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಯಲ್ಲಿ ಮಹಿಳೆಯರು ಬಹುಹೊಡ್ಡ...

ಮಾವಿನಕಟ್ಟೆ : ಒತ್ತೆಕೋಲ ಸಂಪನ್ನ – ಭಕ್ತರಿಗೆ ಅಭಯ ನೀಡಿದ ದೈವ

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ವಿಜ್ರಂಭಣೆಯಿಂದ ನೆರವೇರಿದ್ದು, ಸಾವಿರಾರು ಭಕ್ತಾಧಿಗಳು ಆಗಮಿಸಿ ಶ್ರೀ ದೈವದ ಗಂಧಪ್ರಸಾದ ಸ್ವೀಕರಿಸಿದರು.ಮಾ.18ರಂದು ಬೆಳಿಗ್ಗೆ ಗಣಪತಿ ಹವನ, ಶುದ್ಧಿಕಲಶ, ಮೇಲೇರಿ ಕಾರ್ಯಕ್ರಮ, ಅಶ್ವತ್ಥ ಪೂಜೆ, ನಂತರ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು ನಂತರ ಮೇಲೇರಿಗೆ ಅಗ್ನಿ...
Ad Widget

ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರ ಭೇಟಿ –
ಅಮರ ಸುದ್ದಿ ಪತ್ರಿಕೆಯ ವರದಿಗಾರ ಉಲ್ಲಾಸ್ ಕಜ್ಜೋಡಿಗೆ ಸನ್ಮಾನ

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರಾದ ಲ| ಸಂಜೀತ್ ಕುಮಾರ್ ಶೆಟ್ಟಿ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಮಾ.17 ರಂದು ಸುಬ್ರಹ್ಮಣ್ಯದ ಮಹಾಮಾಯ ರೆಸಿಡೆನ್ಸಿ ಯಲ್ಲಿ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್...

ಮೌಲ್ಯಗಳು ಬದುಕಿಗೆ ಆಧಾರ ಸ್ತಂಭಗಳಿದ್ದಂತೆ

ಮೌಲ್ಯಗಳು ವ್ಯಕ್ತಿಯನ್ನು ಆದರ್ಶ ವ್ಯಕ್ತಿಯಾಗಿ ರೂಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದೈನಂದಿನ ಜೀವನಶೈಲಿಯನ್ನು ಮೌಲ್ಯಗಳೆನ್ನಬಹುದು. ಮಾನವೀಯ ಮೌಲ್ಯಗಳು ಬದುಕಿಗೆ ಅವಶ್ಯಕವಾಗಿದ್ದು ಯುವಜನರು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಮೌಲ್ಯಗಳಿಲ್ಲದ ಜೀವನ ವ್ಯರ್ಥ ಅವುಗಳನ್ನು ಅಳವಡಿಸಿಕೊಂಡಾಗ ಜೀವನವು ಸಾರ್ಥಕ ಗೊಳ್ಳುವುದರಲ್ಲಿ ಸಂಶಯವಿಲ್ಲ.ನಾವು ಜೀವನವೆಂಬ ಪಯಣದ ದೋಣಿಯಲ್ಲಿ ಆದರ್ಶ, ಶಿಸ್ತು, ಸಂಸ್ಕಾರ, ಆಚಾರ - ವಿಚಾರ,...

ಕೇಂದ್ರ ಮೀನುಗಾರಿಕೆ, ಪಶುಸಂಗೋಪಾನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರೂಪಾಲ ಅವರಿಗೆ ಸಚಿವ ಅಂಗಾರರವರಿಂದ ಸ್ವಾಗತ

ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ ಮಾರ್ಗದರ್ಶನದಲ್ಲಿ ಮತ್ತು ಮಾನ್ಯ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ ರೂಪಾಲ ರವರ ಪ್ರೇರಣೆಯೊಂದಿಗೆ ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೀನುಗಾರರೊಂದಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮ "ಸಾಗರ ಪರಿಕ್ರಮ - (2023 ಹಂತ -...

ಮಾ.18 ; ನಾಲ್ಕೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಮಾ.18 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಗ್ರಾಮ ವಾಸ್ತವ್ಯ ನಡೆಸಲಿದ್ದು, ಈ ಸಂದರ್ಭದಲ್ಲಿ ಅವರು ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್...

ಕ್ಷೇತ್ರ ಶಿಕ್ಷಣಾಧಿಕಾರಿ‌ ಬಿ.ಇ. ರಮೇಶ್ ಆಗಮನ, ಅಧಿಕಾರ ಸ್ವೀಕಾರ

ಸುಳ್ಯ‌ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಬಿ.ಇ. ರಮೇಶ್ ರವರು ಆಗಮಿಸಿದ್ದು, ಅಧಿಕಾರ ಸ್ವೀಕರಿಸಿದರು. ಪ್ರಭಾರ ಬಿ.ಇ.ಒ. ಶ್ರೀಮತಿ ವೀಣಾ ಎಂ.ಟಿ. ಯವರು ಅಧಿಕಾರ ಹಸ್ತಾಂತರ ಮಾಡಿದರು. ಬಿ.ಇ.ಒ. ಕಚೇರಿ ಸಿಬ್ಬಂದಿಗಳು ನೂತನ ಶಿಕ್ಷಣಾಧಿಕಾರಿಗಳನ್ನು ಸ್ವಾಗತಿಸಿದರು.

ಬಂಗ್ಲೆಗುಡ್ಡೆ ಶಾಲೆಯ ಹೊಸ ಕೊಠಡಿ ನಿರ್ಮಾಣಕ್ಕೆ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಅನುದಾನ ವಿತರಣೆ

ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 1,50,000 ಅನುದಾನ ಮಂಜೂರಾಗಿದ್ದು, ಮಾ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ ಯವರು ಮಂಜೂರಾತಿ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ.ಎ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ...

ಸುಬ್ರಹ್ಮಣ್ಯ: ಗಾಂಗೇಯ ಟ್ರೋಫಿ ಕ್ರಿಕೇಟ್ ಪಂದ್ಯಾಟ

ಕ್ರಿಕೇಟ್ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಾಶಸ್ತ್ಯ ಹೊಂದಿದೆ. ಇದರೊಂದಿಗೆ ಗ್ರಾಮೀಣರು ಆಡುವ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟಗಳನ್ನೂ ಪ್ರೋತ್ಸಾಹಿಸಿ ಬೆಳೆಸುವುದು ಕೂಡಾ ಉತ್ತಮವಾದುದು. ಕ್ರಿಕೇಟ್ ಪಂದ್ಯಾಟಗಳು ಗ್ರಾಮೀಣ ಕ್ರೀಡಾಳುಗಳ ಪ್ರತಿಭಾ ಅನಾವರಣಕ್ಕೆ ವೇದಿಕೆಯಾಗಿದೆ. ಸುಮಾರು ೪ ದಶಕಗಳ ಇತಿಹಾಸ ಹೊಂದಿದ ಗಾಂಗೇಯ ಕ್ರಿಕೇಟ್ ತಂಡ ನಡೆಸಿದ ಈ ಪಂದ್ಯಾಟವು ಯುವಕರ ಕ್ರಿಕೇಟ್ ಆಸಕ್ತಿಯನ್ನು ಉತ್ತೇಜಿಸಲು...

ಗುತ್ತಿಗಾರು: ಪ್ರೌಢಶಾಲಾ ಕಂಪ್ಯೂಟರ್ ಬ್ಯಾಟರಿ ಕಳವು; ದೂರು ದಾಖಲು

ಗುತ್ತಿಗಾರು ‌ಸ.ಪ್ರೌಢಶಾಲಾ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ. ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ಎನ್ನಲಾಗಿದ್ದು, ಮಾ.12ರಂದು ಕಳವುಗೈಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕಲಂ‌ 380, 454, 457 ಐಪಿಸಿಯಂತೆ ದೂರು...
Loading posts...

All posts loaded

No more posts

error: Content is protected !!