ಅಜ್ಜನಗದ್ದೆ : ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ 2025ರ ಅಂಗವಾಗಿ " ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ   ಅಜ್ಜನಗದ್ದೆ ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಗಳನ್ನು  ಏರ್ಪಡಿಸಲಾಯಿತು. ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ ಪರಿಸರ ಜಾಗೃತಿ ಬೆಳೆಸುವುದು ಮುಖ್ಯ ಉದ್ದೇಶವಾಗಿದೆ.ಕಾರ್ಯಕ್ರಮದ...

ಮಂಡೆಕೋಲು : ಕಾಡುಪ್ರಾಣಿಗಳಿಂದ ನಿರಂತರ ಕೃಷಿ ಹಾನಿಗೆ ರೈತರು ಕಂಗಾಲು – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನ.24 ರಂದು ರೈತರಿಂದ ಬೃಹತ್ ಪ್ರತಿಭಟನೆ

ರೈತರ ಕೃಷಿ ಬೆಳೆಗಳು ಕಾಡಾನೆ ಸೇರಿದಂತೆ ಇತರ ಕಾಡುಪ್ರಾಣಿಗಳ ಉಪಟಳದಿಂದಾಗಿ ನಾಶವಾಗುತ್ತಿವೆ.  ಕಾಡುಪ್ರಾಣಿಗಳ ಉಪಟಳ ತಡೆಯಲು ನೆರೆಯ ಕೇರಳ ರಾಜ್ಯದಲ್ಲಿ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದ್ದರೂ ಕರ್ನಾಟಕದಲ್ಲಿ ಕೃಷಿಕರ ಅಳಲನ್ನು ಕೇಳುವವರೇ ಇಲ್ಲದಂತಾಗಿದೆ. ಆನೆಗಳ ಹಾವಳಿ ತಡೆಯಲು ಹಾಗೂ ತಕ್ಷಣಕ್ಕೆ ರೈತರ ನೆರವಿಗೆ ಧಾವಿಸಲು ಊರ ಕೇಂದ್ರದಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಮೀಸಲಿರಿಸುವುದು, ಸೋಲಾರ್ ಬೇಲಿ ಅಳವಡಿಕೆ,...
Ad Widget

ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ಕೆ.ವಿ ರೇಣುಕಾಪ್ರಸಾದ್ ಆಯ್ಕೆ

ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ತಂಡದ ಅಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದರು ಪ್ರತಿಷ್ಠಿತ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ನಾಲ್ಕನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ.ಇಂದು ನಡೆದ ಚುನಾವಣೆಯಲ್ಲಿ ಎಲ್.ಶ್ರೀನಿವಾಸ್ ನೂತನ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ, ಉಪಾಧ್ಯಕ್ಷರಾಗಿ ಎಂ.ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಸಿ.ಜ., ಸಹ ಕಾರ್ಯದರ್ಶಿಯಾಗಿ ಡಿ.ಕೆ.ರಮೇಶ್‌, ಕೋಶಾಧಿಕಾರಿಯಾಗಿ ಕೆ.ವಿ.ಶ್ರೀಧರ್ ಆಯ್ಕೆಯಾದರು.

ಬೆಳ್ಳಾರೆ : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನೆಟ್ಟಾರು ಶಾಲೆಯಲ್ಲಿ ಕಲಿಕಾ ಚಟುವಟಿಕೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಾರು ಇವರ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ  ಮಕ್ಕಳಲ್ಲಿ...

ಅಕ್ಷರೋತ್ಸವಕ್ಕೆ ಅನನ್ಯ.ಎಚ್ ಸುಬ್ರಹ್ಮಣ್ಯ ಆಯ್ಕೆ

ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಅನನ್ಯ.ಎಚ್ ಸುಬ್ರಹ್ಮಣ್ಯ ರವರ ಕವನವು ಆಯ್ಕೆಗೊಂಡಿದೆ.

ನಡುಗಲ್ಲು : ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ ಹಾಗೂ ನೂತನ ವಿದ್ಯುತ್ ಪರಿವರ್ತಕದ ಉದ್ಘಾಟನೆ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟ್ ದಂಬೆಕೋಡಿ ಇವರು ನ.22 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಡುಗಲ್ಲು ಕಾಯರ್ ಮುಗೇರ್ ಎಂಬಲ್ಲಿ ಅಂಗನವಾಡಿ ಸಮೀಪ ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ...

ಬೆಳ್ಳಾರೆಯಿಂದ ಸುಬ್ರಹ್ಮಣ್ಯಕ್ಕೆ ಪಾದಯಾತ್ರೆ

ಶ್ರೀ ಅಜಪಿಲ ಮಾಲಿಂಗೇಶ್ವರ ದೇವಸ್ಥಾನದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪತಂಜಲಿ ಯೋಗ ಸಮಿತಿ ವತಿಯಿಂದ 9ನೇ  ವರ್ಷದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಸುಮಾರು 50ಕ್ಕೂ ಮಿಕ್ಕಿ  ಭಕ್ತಾಧಿಗಳು ಭಾಗವಹಿಸಿದ್ದರು.

ನಾಗರಾಜ್ ಭಟ್ ಅವರಿಗೆ ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ  ನಡೆದ ವಿಶ್ವಗೀತಾ ಪರ್ಯಾಯ 2024-2026 ಬೃಹತ್ ಗೀತೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ನೀಡುವ ಶ್ರೀಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿಯನ್ನು ಸುಳ್ಯದ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರಿಗೆ ಪರ್ಯಾಯ ಶ್ರೀಪಾದದ್ವಯರು ನೀಡಿ ಅನುಗ್ರಹಿಸಿದರು.

ಕುಕ್ಕೆ ಸುಬ್ರಹ್ಮಣ್ಯ : ಶ್ರೀ ದೇವಳಕ್ಕೆ ವಿದ್ಯಾರ್ಥಿಗಳಿಂದ ಬೃಹತ್ ಹಸಿರು ಕಾಣಿಕೆ ಸಮರ್ಪಣೆ- ಎಸ್‌.ಎಸ್‌‌.ಪಿ.ಯು ಕಾಲೇಜಿನಿಂದ 1290 ಕೆಜಿ ಅಕ್ಕಿ, 1850 ತೆಂಗಿನಕಾಯಿ, 1650 ಕೆಜಿ ತರಕಾರಿ, 261 ಕೆಜಿ ಬೆಲ್ಲ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್‌.ಎಸ್‌.ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಹಸಿರು ಕಾಣಿಕೆಯನ್ನು ಶನಿವಾರ ಶ್ರೀ ದೇವಳಕ್ಕೆ ಅರ್ಪಿಸಿದರು.ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಒದಗಿಸಿದ ಸುವಸ್ತುಗಳನ್ನು ಸಿಂಗರಿಸಿದ ವಾಹನಗಳಲ್ಲಿ ದೇವಳಕ್ಕೆ ಕೊಂಡೊಯ್ಯಲಾಯಿತು.ವಿದ್ಯಾರ್ಥಿಗಳ ಸೇವೆ : 1290 ಕೆಜಿ(12 ಕ್ವಿಂಟಾಲ್ 90 ಕೆಜಿ)...

ವಳಲಂಬೆ : ನ.24 ರಂದು ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ಪೂರ್ವಾಹ್ನ 9:30ಕ್ಕೆ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಬ್ರಹ್ಮಣ್ಯ...
Loading posts...

All posts loaded

No more posts

error: Content is protected !!