- Thursday
- August 13th, 2026
ನಾಲ್ಕೂರು ಒಕ್ಕೂಟದ ವತಿಯಿಂದ ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿ ಗುಂಡ್ಲುಪೇಟೆ ಗೆ ವರ್ಗಾವಣೆ ಗೊಂಡಿರುವ ಮುರಳೀಧರ ರವರ ಬೀಳ್ಕೊಡುಗೆ ಸಮಾರಂಭ ನಡುಗಲ್ಲು ಶಾಲೆಯಲ್ಲಿ ಏ.18 ರಂದು ನಡೆಯಿತು. ತಾಲೂಕು ಜನಜಾಗೃತಿ ಸದಸ್ಯ ವಿಜಯಕುಮಾರ್ ಚಾರ್ಮಾತ ಮುಖ್ಯ ಅತಿಥಿಗಳಾಗಿ ಶುಭಹಾರೈಸಿದರು. ಒಕ್ಕೂಟದ ಅಧ್ಯಕ್ಷರಾದ ಶಾಂತಪ್ಪ ಉತ್ರಂಬೆ, ಸತೀಶ್ ಬೊಂಬುಳಿ, ಗ್ರಾ.ಪ. ಸದಸ್ಯ ಹರೀಶ್ ಕೊಯಿಲ, ಶಾಲಾ...
ಅರಂತೋಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜನ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ತೆಕ್ಕಿಲ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ತೆಕ್ಕಿಲ್ ಸಮುದಾಯ ಭವನ ಆರಂತೋಡು ನಲ್ಲಿ ನಡೆಯಿತು. ನೂತನ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಂಚಾಯತ್ ಸದಸ್ಯರು ಎದುರಿಸುತ್ತಿರುವ ಸಮಸ್ಯೆ,...
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರವಣದೋಷ ತಪಾಸಣಾ ಶಿಬಿರವು ಏ.22ರಂದು ನಡೆಯಲಿದೆ. ಶಿಬಿರವು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರ ತನಕ ಜರುಗಲಿದ್ದು, 5 ವರ್ಷ ಮೇಲ್ಪಟ್ಟ ಶ್ರವಣದೋಷ ಇರುವವರು ಈ ಶಿಬಿರಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ನಡೆದ ಚಿಣ್ಣರಮೇಳ 2022 ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರವು ಮಕ್ಕಳ ಸಾಂಸ್ಕೃತಿಕ ಸಂಭ್ರಮದೊಂದಿಗೆ ತೆರೆ ಕಂಡಿತು. ಸಮಾರೋಪ ಭಾಷಣ ಮಾಡಿದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ವಿ.ಸೂರ್ಯನಾರಾಯಣ ಇವರು ಮಾತಾನಾಡಿ" ಮಕ್ಕಳ ಶೈಕ್ಷಣಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಇಂತಹ ಬೇಸಿಗೆ ಶಿಬಿರಗಳು ಬಹುಮುಖ್ಯ...
ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್...
ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ "ಸಾಧನೆಯ ಸಂಭ್ರಮ", ಸಾಧಕರೊಂದಿಗೆ ಸಂವಾದ, ಸಾಧಕರಿಗೆ ಸನ್ಮಾನ ಹಾಗೂ "ಮುಖ್ಯಮಂತ್ರಿ" ನಾಟಕ ಪ್ರದರ್ಶನ ಏ.24 ಆದಿತ್ಯವಾರದಂದು ಸಂಜೆ ಗಂಟೆ 5.00ಕ್ಕೆ ಜರುಗಲಿದೆ. ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಶ್ರೀ ಭಾಸ್ಕರ್ ರಾವ್ ಹಾಗೂ ಜನಪ್ರಿಯ ಚಲನಚಿತ್ರ, ಧಾರಾವಾಹಿ ಮತ್ತು ರಂಗಭೂಮಿ ನಟರಾದ ಶ್ರೀ ಮುಖ್ಯಮಂತ್ರಿ...
ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ. 26ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಜರಗಲಿರುವುದು. ಏ.26ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ, ಕಲಶಪೂಜೆ, ಮಧ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ....
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಇದರ ವತಿಯಿಂದ ಏ. 15 ರಂದು ಯೋಜನಾ ಕಚೇರಿಯಲ್ಲಿ 2021/22 ಸಾಲಿನ ತಾಲೂಕು ಮಟ್ಟದ ಪ್ರತಿನಿಧಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲ್ಲೂಕಿನ ಯೋಜನಾಧಿಕಾರಿಗಳಾದ ಚೆನ್ನಕೇಶವ ರವರು ಪ್ರಗತಿ ಪರಿಶೀಲನೆ ಸಭೆ ನಡೆಸಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ 2022-23ನೇ ಸಾಲಿನ ಮುಂದಿನ 3 ವರ್ಷಗಳ ಅವಧಿಗೆ ನೂತನ ಒಕ್ಕೂಟವನ್ನು ಎ.10 ರಂದು ಬಾಲಸುಬ್ರಹ್ಮಣ್ಯ ಎಲ್ಲಪಡ್ಕ ಇವರ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಯಿತು.ಒಕ್ಕೂಟದ ನೂತನ ಅಧ್ಯಕ್ಷರಾಗಿ ಹರ್ಷ ಗೌಡ ಪಾಲ್ತಾಡು, ಉಪಾಧ್ಯಕ್ಷರಾಗಿ ಮೋಹನ್ ದಾಸ್ ಬಟ್ಟೋಡಿ, ಕಾರ್ಯದರ್ಶಿಯಾಗಿ ಗಿರೀಶ್ ಹೆರಕಜೆ, ಜೊತೆ ಕಾರ್ಯದರ್ಶಿಯಾಗಿ ಗೀತಾ ಹರಿಹರ,...
ಪಂಜದ ಸೌದಾಮಿನಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ರ 131ನೇ ಜನ್ಮದಿನಾಚರಣೆ ಪ್ರಯುಕ್ತ ಪಂಜ ಜೈ ಭೀಮ್ ಕಾರ್ಮಿಕ ಸಮಿತಿಯ ಆಯೋಜನೆಯಲ್ಲಿ ಜನ್ಮದಿನಾಚರಣೆ ಮತ್ತು ಕಾರ್ಮಿಕ ಶಿಬಿರವನ್ನು ಏ.14ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಸುರೇಶ್ ಅಡ್ಡತೋಡು ವಹಿಸಿಕೊಂಡಿದ್ದು, ಕಾರ್ಯಕ್ರಮವನ್ನು ಶ್ರೀಪುರುಷೋತ್ತಮ ದಂಬೇಕೋಡಿ, ನ್ಯಾಯವಾದಿ, ನೋಟರಿ ಪಂಜ ಉದ್ಘಾಟಿಸಿ ಕಾನೂನು ಮಾಹಿತಿಯೊಂದಿಗೆ...
Loading posts...
All posts loaded
No more posts
