ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪೌಷ್ಟಿಕ ಆಹಾರ ತಯಾರಿ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಗೆಬಗೆಯ ಸುಮಾರು 70 ಬಗೆಯ ಪೌಷ್ಟಿಕ ಆಹಾರಯುಕ್ತ ಖಾದ್ಯಗಳನ್ನು ತಯಾರಿಸಿ ಸಂತಸಪಟ್ಟರು. ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ನಿರ್ಣಾಯಕರಾಗಿ ಭಾಗವಹಿಸಿ ಸಹಕರಿಸಿದರು. ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ ಮಕ್ಕಳ ಚಟುವಟಿಕೆಗೆ ಪ್ರಶಂಸೆ ವ್ಯಕ್ತಪಡಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ...

ಕಾಂಚೋಡು ಜಾತ್ರೋತ್ಸವ- ವೈಭವದ ಹಸಿರು ಕಾಣಿಕೆ ಮೆರವಣಿಗೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಅಣ್ಣಪ್ಪಾದಿ ದೈವಗಳ ನೇಮೋತ್ಸವಗಳು ಇಂದಿನಿಂದ ಆರಂಭಗೊಂಡು ಫೆ. 14ರವರೆಗೆ ನಡೆಯಲಿದ್ದು ಫೆ.11ರಂದು(ಇಂದು) ಊರ ಭಕ್ತಾದಿಗಳಿಂದ ಮತ್ತು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ವೈಭವದ ಮೆರವಣಿಗೆಯ ಮೂಲಕ ನಡೆಯಿತು. ದೇವಸ್ಥಾನದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು ತೆಂಗಿನಕಾಯಿ ಒಡೆಯುವ ಮೂಲಕ ಹಸಿರು...
Ad Widget

ಕಾಂಚೋಡು ಜಾತ್ರೋತ್ಸವಕ್ಕೆ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ವತಿಯಿಂದ ಹಸಿರು ಕಾಣಿಕೆ ಸಮರ್ಪಣೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಪರವಾಗಿ ಹಸಿರು ಕಾಣಿಕೆ ಸಮರ್ಪಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಕಾರ್ಯದರ್ಶಿ...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಯುವಕರಿಂದ ಅಲಂಕಾರ ಸೇವೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವರ ಮತ್ತು ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ, ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಮತ್ತು ಕಲ್ಲೇರಿತ್ತಾಯ ಹಾಗೂ ಇತರ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಸಿದ್ಧತೆಯಾಗಿ ಫೆ.10ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಆವರಣದಲ್ಲಿ ಊರಿನ ಯುವಕರಿಂದ ಅಲಂಕಾರ ಸೇವೆ ನಡೆಯಿತು.

ಕಂದ್ರಪ್ಪಾಡಿ ಜಾತ್ರೆಗೆ ಮುಹೂರ್ತ

ಇತಿಹಾದ ಪ್ರಸಿದ್ಧ ಕಂದ್ರಪ್ಪಾಡಿ ರಾಜ್ಯದೈವ ಹಾಗೂ ಪುರುಷ ದೈವ ದೈವಸ್ಥಾನದಲ್ಲಿ ಜಾತ್ರಮಹೋತ್ಸವಕ್ಕೆ ಫೆ. 10 ರಂದು ಮುಹೂರ್ತ ನಡೆಯಿತು. ಕಂಚುಕಲ್ಲಿಗೆ ತೆಂಗಿನಕಾಯಿ ಒಡೆಯುವ ಮೂಲಕ ಜಾತ್ರೆಗೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಫೆ. 10 ರಿಂದ ಜಾತ್ರೆ ನಡೆದು ಧ್ವಜಾರೋಹಣ ನಡೆಯುವವರೆಗೆ ದೈವಸ್ಥಾನದ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಯಾವುದೇ ಶುಭಕಾರ್ಯ ನಡೆಸುವಂತಿಲ್ಲ ಎಂಬ ಧಾರ್ಮಿಕ ಕಟ್ಟುಪಾಡು ಇಲ್ಲಿ ನಡೆದುಕೊಂಡು...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಶ್ರಮಸೇವೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವರ ಮತ್ತು ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ, ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಮತ್ತು ಕಲ್ಲೇರಿತ್ತಾಯ ಹಾಗೂ ಇತರ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಫೆ.10) ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಊರ ಮಹಿಳೆಯರಿಂದ ಶ್ರಮಸೇವೆ ನಡೆಯಿತು.

ಕವನ : ಬದುಕಿನ ಹಾದಿ

ಸಾವಿನವರೆಗೂ ಸಾಗುವ ದಾರಿ, ಕೊನೆಯಾಗುವುದು ತೀರವ ಸೇರಿ…ತಿಳಿದರೂ ತಿಳಿಯದೇ ಹೋದರೂ ಕೂಡ ತಿಳಿಯಲೆಬೇಕು ಬದುಕಿನ ಹಾದಿ, ಗುರಿ ಸೇರುವ ದಾರಿ…ನೀನು ಯಾರು ಎಂಬ ನಿಜವು ತಿಳಿಯದು ಯಾರಿಗೂ ನಿನ್ನನ್ನು ಹೊರತು, ನಿನ್ನ ಮನಸ್ಸನು ಹೊರತು…ಇತರರ ಬದುಕಿನ ಜೊತೆಗೆ ನೀನು ನಿನ್ನಯ ಬದುಕನು ಹೋಲಿಸಬೇಡ,ನಿನ್ನಯ ಬದುಕಿನ ದಾರಿಯೇ ಬೇರೆ, ಇತರರ ಬದುಕಿನ ದಾರಿಯೇ ಬೇರೆ…ಇಲ್ಲಿ ಯಾರೂ ಶಾಶ್ವತವಲ್ಲ,...

ಐವರ್ನಾಡು : ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.09 ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.

ಗುತ್ತಿಗಾರು : ದೇವಿ ಸಿಟಿ ಕಾಂಪ್ಲೆಕ್ಸ್ ನಲ್ಲಿ ಕಾವ್ಯ ಮೆಡಿಕಲ್ ಶುಭಾರಂಭ

ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್ ನಲ್ಲಿ ಕಾವ್ಯ ಮೆಡಿಕಲ್ ಫೆ. 7 ರಂದು ಶುಭಾರಂಭಗೊಂಡಿತು. ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದ ಆಡಳಿತ ಮೊಕ್ತೇಸರ ವೆಂಕಟ್ ವಳಲಂಬೆ, ತಾ.ಪಂ. ಮಾಜಿ ಅಧ್ಯಕ್ಷ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಫೆ.08 ರಂದು ಮಾನ್ಯ ಮುಜರಾಯಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ನಡೆಸಲಾಗುತ್ತಿರುವ ವನಸಂವರ್ಧನಾ ಕಾರ್ಯಕ್ರಮದ ಅಂಗವಾಗಿ ನಾಗಸಂಪಿಗೆ ಗಿಡವನ್ನು ನೆಟ್ಟರು.ನಂತರ ಮಾನ್ಯ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಹಾಗೂ ಜಿಲ್ಲಾಧಿಕಾರಿಗಳಾದ...
Loading posts...

All posts loaded

No more posts

error: Content is protected !!