- Tuesday
- August 18th, 2026
ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಧ್ವಜಾರೋಹಣ ನೆರವೇರಿಸಿ ಪ್ರಮಾಣವಚನ ಬೋಧಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಹರ್ಷನ್.ಕೆ.ಟಿ ಹಾಗೂ ಗ್ರಾ.ಪಂ. ಸದಸ್ಯ ಕರುಣಾಕರ ಆಳ್ವ 75ನೇ ಸ್ವಾತಂತ್ರ್ಯೋತ್ಸವಕ್ಕೆ ಸರ್ವರಿಗೂ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕೊಡಿಯಾಲ...
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತಾದ ಸಂದೇಶವನ್ನು ನೀಡಿದರು .ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಶುಭ ಹಾರೈಸಿದರು. ವಿದ್ಯಾರ್ಥಿನಿ ಯರಾದ ಖುಷಿ .ಪಿ.ಎಸ್ ,ಮೇಘ ನಾ .ಎಂ .ಕೆ .ಶ್ರಾವ್ಯ .ಧ್ವಜಗೀತೆ ಹಾಡಿದರು....
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶಶಿಧರ್ ಭಟ್ ನೆಟ್ಟಾರು ನೆರವೇರಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭುವನೇಶ್ವರ್ ಪಿ. ಶುಭ ಹಾರೈಸಿದರು. ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿ ಸ್ವಾಗತಿಸಿದರು. ಶಿಕ್ಷಕ ಶಿವಪ್ರಸಾದ್...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಶ್ರೀ ಲೋಕೇಶ್ವರ.ಡಿ.ಆರ್ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೆಲ್ಸನ್, ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ದ್ವಿತೀಯ ದರ್ಜೆ ಸಹಾಯಕರಾದ ಸೋಮಶೇಖರ್.ಯಂ, ಕಾಲೇಜು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್.ಎ.ವೈ ಎಸ್.ಡಿ.ಯಂ.ಸಿ. ಸದಸ್ಯರಾದ...
ಬೆಳ್ಳಾರೆ ಗ್ರಾಮದ ತಡಗಜೆ ವಾರ್ಡಿನ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವು ತಡಗಜೆ ಅಂಗನವಾಡಿಯಲ್ಲಿ ವಾರ್ಡಿನ ಎಲ್ಲಾ ಪ್ರಮುಖರ ಸಮ್ಮುಖದಲ್ಲಿ ಮೊಟ್ಟ ಮೊದಲನೇ ಬಾರಿಗೆ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು. ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಜಯಶ್ರೀ ನೆರವೇರಿಸಿದರು. ಬಳಿಕ ತಡಗಜೆಯಿಂದ ಬೆಳ್ಳಾರೆ ತನಕ ಸ್ವಾತಂತ್ರ್ಯೋತ್ಸವ ನಡಿಗೆ ನಡೆಯಿತು.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ಧನ.ಎ ಇವರು ಧ್ವಜಾರೋಹಣಗೈದು ಶುಭಹಾರೈಸಿದರು. ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ ಅಚ್ರಪ್ಪಾಡಿ ಇವರು ಸ್ವಾತಂತ್ರ್ಯಪೂರ್ವ ಮತ್ತು ಸ್ವತಂತ್ರದ ನಂತರದಲ್ಲಿ ಆದ ಬದಲಾವಣೆಗಳನ್ನು ತಿಳಿಸುತ್ತಾ ನಾವು ಕಾಲಕ್ಕೆ ತಕ್ಕ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ ಎಂದು...
ಕೊಲ್ಲಮೊಗ್ರು: ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು . ಕೊಲ್ಲಮೊಗ್ರು ಗ್ರಾಮ ಪಂಚಾಯತುನ ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣ ಮಾಡಿದರು.ಬಳಿಕ ಶಾಲಾ ವಿದ್ಯಾರ್ಥಿಗಳು ಬ್ಯಾಂಡ್ ಹಾಗೂ ವಾದ್ಯಗಳನ್ನು ನುಡಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಎನ್. ಜಿ ವಕೀಲರು ಸುಳ್ಯ, ಪಿಡಿಒ ರವಿಚಂದ್ರ ಎ,...
ಕೊಲ್ಲಮೊಗ್ರು ಗ್ರಾ.ಪಂ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು . ಗ್ರಾ.ಪಂ ಅಧ್ಯಕ್ಷರಾದ ಉದಯ ಕೊಪ್ಪಡ್ಕ ಧ್ವಜಾರೋಹಣ ಮಾಡಿದರು.ಬಳಿಕ ನಿವೃತ್ತ ಯೋಧರಾದ ಪದ್ಮನಾಭ ಗೌಡ ಗೋಳ್ಯಾಡಿ, ಸತೀಶ್ ಜಾಲುಮನೆ, ಅವರುಗಳನ್ನು ಗೌರವಿಸಲಾಯಿತು. ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಬ್ಯಾಂಡ್ ವಾದ್ಯಗಳನ್ನು ನುಡಿಸಿದರು. ಪಿಡಿಒ ರವಿಚಂದ್ರ ಎ, ಕಾರ್ಯದರ್ಶಿ ಮೋಹನ್ ಕಡ್ತಲ್ ಕಜೆ , ಗ್ರಾ.ಪಂ ಉಪಾಧ್ಯಕ್ಷರಾದ...
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಧ್ವಜಾರೋಹಣ ನೆರವೇರಿಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ತಾಲೂಕು ಕ್ಷಯ ಚಿಕಿತ್ಸಾ ಘಟಕದ ಹಿರಿಯ...
ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಆವರಣದ ತನಕ ಸ್ವಾತಂತ್ರ್ಯೋತ್ಸವ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಮತ್ತು ಸದಸ್ಯರು, ಕೋಟೆಮುಂಡುಗಾರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ಮತ್ತು ಸಹ...
Loading posts...
All posts loaded
No more posts
