ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅ.30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಖುದ್ದು...

ನ.05 : ನಿಡ್ವಾಳ ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ – ಕೋಡಿಮಠದ ಶ್ರೀಗಳ ಉಪಸ್ಥಿತಿ – ಮುಂದಿನ ಎಪ್ರಿಲ್ ನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶಕ್ಕೆ ತೀರ್ಮಾನ

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವೆಂಬರ್  05 ಬುಧವಾರದಂದು ಬೆಳಗ್ಗೆ 8:30ರಿಂದ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ ನಡೆಯಲಿದೆ.ಋಷಿ ಪರಂಪರೆಯ ಸನಾತನ ಹಿಂದೂ ಧರ್ಮದ ಉಳಿವಿಗಾಗಿ, ಲೋಕಕಲ್ಯಾಣಾರ್ಥವಾಗಿ ಹಾಗೂ 2026ನೇ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ಈ ಮಹಾಯಾಗ ನಡೆಯಲಿದೆ. ಪರಮಪೂಜ್ಯ...
Ad Widget

ಸುಳ್ಯ : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ನಿವೇದಿತಾ ಜಯಂತಿ ಹಾಗೂ ದೇಶಭಕ್ತಿಗೀತೆ ಗಾಯನ ಸ್ಪರ್ಧೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್(ರಿ.) ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಈ ದಿನ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರಾದ ಪುಷ್ಟಮೇದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದಮಯಂತಿ ಅಡ್ಕಬಳೆ, ಶ್ರೀಮತಿ ಲಕ್ಷ್ಮಿ ಬಿ.ಎಸ್ ಮಾವಂಜಿ, ಶ್ರೀಮತಿ ಶ್ಯಾಮಲ ಬೊಳ್ಳಾಜೆ, ಶ್ರೀಮತಿ ತೀರ್ಥಕುಮಾರಿ ನೆಲ್ಲೂರು...

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 20ನೇ ದಿನದ “ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ”

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಮಹತ್ವಾಕಾಂಕ್ಷಿ ಯೋಚನೆ ಹಾಗೂ ಯೋಜನೆಗಳಲ್ಲಿ ಒಂದಾದ "ಪಂಚಸಪ್ತತಿ - 2025" 75 ದಿವಸಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರು ಬರೋಬ್ಬರಿ 20ನೇ ದಿವಸ ಪೂ.ಗಂ.7:00ರಿಂದ‌ 9:00ರವರೆಗೆ ಗುತ್ತಿಗಾರು ಪಿ.ಎಂ.ಶ್ರೀ.ಸ.ಹಿ.ಪ್ರಾ.ಶಾಲೆಯ ಆವರಣವದ ಗಿಡಗಂಟಿಗಳನ್ನು ಕಳೆಕೊಚ್ಚುವ ಯಂತ್ರದ ಮೂಲಕ ಸ್ವಚ್ಚಗೊಳಿಸಲಾಯಿತು.‌ ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಹಾಗೂ...

ನಾಳೆ(ಅ.30) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಅ.30 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರು, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಾಧ್ಯಾಹ್ನ 5:00...

ಪದವಿಪೂರ್ವ ಕಾಲೇಜು ಗುತ್ತಿಗಾರಿನ ಧನ್ಯಶ್ರೀ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಗಳೂರು, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ, ಮಿತ್ತಡ್ಕ ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಮೂರು ಕಿಲೋಮೀಟರ್ ವೇಗ ನಡಿಗೆ ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ವಿದ್ಯಾರ್ಥಿ ಧನ್ಯಶ್ರೀ ಇವರು ಪ್ರಥಮ ಸ್ಥಾನ ಪಡೆದು ಅಕ್ಟೊಬರ್...

ಸುಳ್ಯ : “ಜೀವ ಪ್ರಾವಿಣ್ಯ” ತರಬೇತಿ ಕಾರ್ಯಾಗಾರ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಸವಿತಾ ಸಮಾಜ ಸುಳ್ಯ ತಾಲೂಕು, ಬಾರ್ಬರ್ ಅಸೋಸಿಯೇಷನ್ ಸುಳ್ಯ ತಾಲೂಕು ಇವರುಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಕಾರದೊಂದಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನದಲ್ಲಿ ಅ.28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದಾದರೂ ವ್ಯಕ್ತಿಗಳಿಗೆ ಹೃದಯಾಘಾತ ಸಂಭವಿಸಿದಲ್ಲಿ ತಕ್ಷಣಕ್ಕೆ ಅವರ ಜೀವ ಉಳಿಸುವ...

“ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಕೇಸ್‌” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಕ್ರೋಶ

ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...

ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆ ; ಅಧ್ಯಕ್ಷರಾಗಿ : ಸಿದ್ದೀಕ್ ಅಲೆಕ್ಕಾಡಿ ಪುನರಾಯ್ಕೆ ; ಪ್ರ.ಕಾರ್ಯದರ್ಶಿಯಾಗಿ : ನಾಸಿರ್ ಸಹದಿ ಆಯ್ಕೆ

ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಎಸ್.ಎಂ.ಎ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಇಬ್ರಾಹಿಂ ಬೀಡುರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಬಹು| ಅಬ್ಬಾಸ್ ಹಾರೂನಿ ರವರು ಸಮಾರಂಭವನ್ನು ಉದ್ಘಾಟಿಸಿದರು. ಇಬ್ರಾಹಿಂ ಸಖಾಫಿ...

ಸಾಹಿತ್ಯಾಸಕ್ತರಿಗಾಗಿ ಮತ್ತೆ ಬಂದಿದೆ ಕನ್ನಡ ಪುಸ್ತಕ ಹಬ್ಬ, ರಾಷ್ಟ್ರೋತ್ಥಾನದ ಸಾಹಿತ್ಯ-ಸಂಸ್ಕೃತಿ ಉತ್ಸವ – ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 37 ದಿನಗಳ ಕನ್ನಡ ಪುಸ್ತಕ ಹಬ್ಬ, ನವೆಂಬರ್‌ 1 ರಿಂದ ಡಿಸೆಂಬರ್‌ 7ರವರೆಗೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 5ನೇ ವರ್ಷದ ಕನ್ನಡ ಪುಸ್ತಕ ಹಬ್ಬದ ಕುರಿತು ಇಂದು (ಅಕ್ಟೋಬರ್ 27) ರಾಷ್ಟ್ರೋತ್ಥಾನ ಪರಿಷತ್‌ನ ಕೇಶವ ಶಿಲ್ಪದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಒಟ್ಟು 37 ದಿನಗಳ ಕಾಲ ನಡೆಯುವ ಕನ್ನಡ ಪುಸ್ತಕ ಹಬ್ಬದ ಕುರಿತು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥರಾದ ಕೆ.ಎಸ್. ನಾರಾಯಣ್ ವಿವರಣೆ ನೀಡಿದರು.ʼಕನ್ನಡ ಪುಸ್ತಕ ಹಬ್ಬ'ದ...
Loading posts...

All posts loaded

No more posts

error: Content is protected !!