- Wednesday
- May 6th, 2026
ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಇಂದು (ಆ.19) ಸುಳ್ಯದಲ್ಲಿ ನಡೆಯಲಿದೆ. ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು ಆ.19...
ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು "ಈ...
ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ನೂತನ ಶ್ರೀ ಕೃಷ್ಣ ನೂತನ ಭಜನಾ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.18 ರಂದು ನಡೆಯಿತು. ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನೂತನ ಮಂದಿರ ನಿರ್ಮಾಣ ಆಗಲಿದೆ. ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಆ.15 ರಿಂದ 18 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಆ.18 ರಂದು ಬೆಳಿಗ್ಗೆ 10:20ರ ತುಲಾ...
ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ಮಹಾಸಭೆ ಆ.17 ರಂದು ಯುವಕ ಮಂಡಲದ ಆವರಣದಲ್ಲಿ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ ಇವರನ್ನು ಆಯ್ಕೆ ಮಾಡಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿಯಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಮೇಶ್.ಎಮ್ ನೆರವೇರಿಸಿದರು.ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಎಂ ವಹಿಸಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಹೇಶ್ ಕುಮಾರ್ ಕರಿಕಳ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿತನುಡಿಗಳನ್ನು ಆಡಿದರು....
ನ್ಯಾಯಾಲಯದಲ್ಲಿ "ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಆರಂಭಗೊಂಡಿದ್ದು ಅಕ್ಟೋಬರ್ 7ರವರೆಗೆ ಅಭಿಯಾನ ನಡೆಯಲಿದೆ.ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಕಾಚು ಕುಚುಂಬ ದೈವದ ನೂತನ ದೈವಸ್ಥಾನದ ದಾರಾಂದ ಮುಹೂರ್ತ ಆ.18 ರಂದು ನಡೆಯಿತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರ್, ದೇಗುಲದ ಗೌರವ ಸಲಹೆಗಾರರಾದ ಹಾಗೂ ಹಲಸಿನ ಮರದ ಬಾಗಿಲು ದಾರಂದ ವನ್ನು ಕೊಡುಗೆಯಾಗಿ ನೀಡಿರುವ ಮಹೇಶ್ ಕುಮಾರ್ ಕರಿಕ್ಕಳ, ಗೌರವ ಸಲಹೆಗಾರರಾದ ಉಮೇಶ್...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 8ನೇ ವರ್ಷದ 2024-25ರ ಸಾಲಿನ ವಾರ್ಷಿಕ ಮಹಾಸಭೆಯು ಆ. 17ರಂದು ಸಂಘದ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಅವರು ಮಾತನಾಡಿ ಸಂಘವು ಈ ಸಲ ರೂ. 61.77 ಲಕ್ಷ ಲಾಭ ಗಳಿಸಿದ್ದು, ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ...
ದೇವ ಗೆಳೆಯರ ಬಳಗ(ರಿ.) ದೇವ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ(ರಿ.) ದೇವ ಇವುಗಳ ಸಂಯುಕ್ತಾಶ್ರಯದಲ್ಲಿ ಆ.16 ರಂದು 35ನೇ ವರ್ಷದ ವಿಜೃಂಭಣೆಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಸದಾಶಿವಯ್ಯ ದೇವ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಕಾರ್ಯದರ್ಶಿ ಜಯಂತ ದೇವ ವಹಿಸಿದ್ದರು.ವೇದಿಕೆಯಲ್ಲಿ...
Loading posts...
All posts loaded
No more posts
