- Tuesday
- July 7th, 2026
ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಮರ್ಕಂಜ ಯುವಕ ಮಂಡಲ(ರಿ.) ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಆಗಸ್ಟ್ 03 ಆದಿತ್ಯವಾರದಂದು ಮರ್ಕಂಜ ಯುವಕ ಮಂಡಲ ಸಭಾಭವನದಲ್ಲಿ “ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ” ನಡೆಯಲಿದೆ ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಧಾರ್ ನೋಂದಣಿ ಹಾಗೂ ತಿದ್ದುಪಡಿಗೆ ಬೇಕಾದ ದಾಖಲಾತಿಗಳು :...
ಕಳಂಜ ಗ್ರಾಮದ ಭವಿತಾ ಬೇರಿಕೆ ಥ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜುಲೈ 06 ರಂದು ಮಂಡ್ಯದಲ್ಲಿ ನಡೆದ ರಾಷ್ಟ್ರೀಯ ಥ್ರೋಬಾಲ್ ಅರ್ಹತಾ ಪಂದ್ಯಾಕೂಟಗಳಲ್ಲಿ ಭಾಗವಹಿಸಿ ಆಯ್ಕೆಯಾಗಿ, ಆಗಸ್ಟ್ 16 ರಿಂದ 18 ರವರೆಗೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆಯಲಿರುವ 48ನೇ ಹಿರಿಯ ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸ್ಟೇಟ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ತಂಡವನ್ನು ಪ್ರತಿನಿಧಿಸಲಿದ್ದಾರೆ....
ಕೆ.ಸಿ.ಇ.ಟಿ ಅಭ್ಯರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ ಮತ್ತು ಸಾಫ್ಟ್‌ವೇರ್ ದೋಷದ ಹಿನ್ನೆಲೆಯಲ್ಲಿ ಎಂ.ಬಿ.ವಿ.ಪಿ ಸುಳ್ಯ ಘಟಕದಿಂದ ತಾಲೂಕು ಕಚೇರಿ ಎದುರು ರಾಜ್ಯಮಟ್ಟದ ಪ್ರತಿಭಟನೆ ನಡೆಯಿತು.ಎ.ಬಿ.ವಿ.ಪಿ ತಾಲೂಕು ಸಂಚಾಲಕರಾದ ನಂದನ್ ಪವಿತ್ರಮಜಲು ಮಾತನಾಡಿ “ವಿದ್ಯಾರ್ಥಿಗಳು ಈಗ ಅನುಭವಿಸುತ್ತಿರುವ ತೀವ್ರ ಒತ್ತಡ ಹಾಗೂ ಅನ್ಯಾಯದ ಕುರಿತು” ಆಕ್ರೋಶ ವ್ಯಕ್ತಪಡಿಸಿದರು.ಸಕ್ರಿಯ ಕಾರ್ಯಕರ್ತರು ಮುಳಿಯ ಸಾತ್ವಿಕ್ ಅವರು...
ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು ಇಲ್ಲಿನ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಸುಳ್ಯ ಇದರ ವತಿಯಿಂದ ಪರಿಸರ ಜಾಗೃತಿಯ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಇದರಲ್ಲಿ ತರಗತಿವಾರು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನಗಳನ್ನು ವಿತರಿಸಿದರು. ಹಣ್ಣಿನ ಗಿಡಗಳನ್ನು ಶಾಲಾ ಮಂತ್ರಿಮಂಡಲದ ನಾಯಕರಿಗೆ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ವಲಯ ಒಕ್ಕೂಟದ ಅಧ್ಯಕ್ಷರು ಹಾಗೂ ಕೊಲ್ಲಮೊಗ್ರು A ಒಕ್ಕೂಟದ...
ಮಡಿಕೇರಿ ಆಕಾಶವಾಣಿ ಎಂದಾಗ ಸುಬ್ರಾಯ ಸಂಪಾಜೆ ಅವರ ಧ್ವನಿ ನೆನಪಾಗುತ್ತದೆ. ಸುಮಾರು ಮೂವತ್ತು ವರ್ಷ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಕೆಲಸ ನಿರ್ವಹಿಸಿ ಕಳೆದ ಮೇ 31ರಂದು ನಿವೃತ್ತಿ ಜೀವನ ನಡೆಸುತ್ತಿದ್ದು. ಜು. 22 ರಂದು ಸುಳ್ಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನಗೊಳ್ಳಲಿದ್ದಾರೆ. ಅವರು ದಕ್ಷಿಣ ಕನ್ನಡದ ಸುಳ್ಯ ತಾಲೂಕು ಸಂಪಾಜೆ ಗ್ರಾಮದವರು....
ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ ಸೊಸೈಟಿ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ಕೃಷಿಕರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು...
ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 22ರಂದು ಪತ್ರಿಕಾ ದಿನಾಚರಣೆಯು ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿಗಳಾದ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಲಿದ್ದು, ಆಕಾಶವಾಣಿ ಮಡಿಕೇರಿ ಕೇಂದ್ರದ ನಿವೃತ್ತ ಉದ್ಘೋಷಕರಾದ...
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪೆರಾಜೆಯಲ್ಲಿ ಜು.21 ಸೋಮವಾರದಂದು ಬೆಳಿಗ್ಗೆ 10:30ಕ್ಕೆ ಆಂಗ್ಲ ಮಾಧ್ಯಮ ಉದ್ಘಾಟನಾ(ದ್ವಿ-ಭಾಷಾ) ಕಾರ್ಯಕ್ರಮ ನೆರವೇರಿತು.ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ನೆಡ್ಚಿಲ್ ಅವರು ವಹಿಸಿಕೊಂಡರು.ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ ಅವರು ನೆರವೇರಿಸಿದರು. ಉದ್ಘಾಟನೆಯ ನಂತರ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಅಜ್ಜಾವರ ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿರುವ ಶ್ರೀ ಚಂದ್ರಶೇಖರ...
ತಮಿಳು ಕಾರ್ಮಿಕ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಚಂದ್ರಲಿಂಗಂ ಬೇಂಗಮಲೆ ಇಂದು ತೀವ್ರ ಅಸೌಖ್ಯದಿಂದ ಮೈಸೂರಿನಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಕೆಲವು ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಲಿಂಗಮ್ ರವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇದೀಗ ನಿಧನ ರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ. ಚಂದ್ರಲಿಂಗಮ್ ರವರು...
Loading posts...
All posts loaded
No more posts
