- Friday
- July 24th, 2026
ಮಂಡೆಕೋಲು ಗ್ರಾಮದ ಮೇಲ್ಮನೆ ಸುಬ್ಬಣ್ಣ ಗೌಡರು ಆ.16ರಂದು ನಿಧನರಾದರು. ಅವರಿಗೆ ಸುಮಾರು 94 ವರ್ಷ ವಯಸ್ಸಾಗಿತ್ತು.ನಾಟಿವೈದ್ಯರಾಗಿದ್ದ ಇವರು, ದೈವ ಪರಿಚಾರಕರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬ ಸ್ಥರನ್ನು ಅಗಲಿದ್ದಾರೆ.
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿ 2024ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸಲಹೆಗಾರರಾದ ಪ್ರೊ ಕೆ.ವಿ.ದಾಮೋದರ ಗೌಡ ಅವರು ದೀಪ ಬೆಳಗಿಸಿ,ಉದ್ಘಾಟನೆ ನೆರವೇರಿಸಿದರು .ಹಾಗೂ ಅತಿಥಿಯಾಗಿ ಆಗಮಿಸಿದ್ದ ಆಡಳಿತ ಮಂಡಳಿಯ ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಹಿಂಗಾರ ಅರಳಿಸಿದರು. ಅತಿಥಿಗಳು ಚೆನ್ನಮಣೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು., ಆಡಳಿತ ಮಂಡಳಿಯ...
ಗುರುವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೇವರ ಕಾನದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.ಮುಂಜಾನೆ 8:30ಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕುತ್ತಾ ಜಾಥಾ ಕಾರ್ಯಕ್ರಮ ನಡೆಯಿತು.9:30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆಯವರು ಧ್ವಜಾರೋಹಣಗೈದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ...
ಸುಳ್ಯ: ತಾಲೂಕಿನ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಜಾನಕಿ ಕಣೆಮರಡ್ಕ ಹಾಗೂ ಕೋಶಾಧಿಕಾರಿಯಾಗಿ ಹಸೀಸ್ ಶಾಲೆಕ್ಕಾರ್ ಆಯ್ಕೆಯಾಗಿದ್ದಾರೆ. ಗುರುವಾರ ಶಾಲಾ ಸಭಾಂಗಣದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿಅನಂತಕೃಷ್ಣ ಚಾಕೋಟೆ, ಉಪಾಧ್ಯಕ್ಷರಾಗಿ ಸಂಧ್ಯಾ ಮಾವಂಜಿ, ಶ್ರೀಹರಿ ಬೊಳುಗಲ್ಲು, ಮಧುರ...
ಯುವಜನ ಸಂಯುಕ್ತ ಮಂಡಳಿ (ರಿ )ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿ ಇವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ದೇಶ ಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರ ಆರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಈ ಸಾಧಕಿಯನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ಇಂದು ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಸಾರ್ವಜನಿಕರೇ ಖರ್ಚು ಹಾಕಿ ನಿರ್ಮಾಣ ಮಾಡಿದ ತೂಗು ಸೇತುವೆ ಮುಳುಗಡೆ ಯಾಗಿದೆ. ಕಸ ಬಿದಿರು, ಹಾಗೂ ಮರದ ಗೆಲ್ಲುಗಳು ಸಿಲುಕಿ ತೂಗು ಸೇತುವೆಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸುಳ್ಯ:ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಇಂದು ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟ್ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಶಾಸಕಿ ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಪ್ರತಿವರ್ಷ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಈ ಮೂಲಕ ತುಳುನಾಡಿನ ಸಂಸ್ಕೃತಿ ಅರಿವು ಮೂಡಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಸಂಚಾಲಕರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಹೊಸೋಳಿಕೆ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ - ಎ ಸ್ಟಡಿ...
ಸುಳ್ಯದ ಹಳೆಗೇಟಿನ ಸಾಂಸ್ಕೃತಿಕ ಸಂಘದ ಇದರ ವತಿಯಿಂದ ನಡೆಯುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಸಂಜೆ ಹಳೆಗೇಟು ವಸಂತ ಕಟ್ಟೆಯ ಬಳಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಶ್ರೀನಿವಾಸ್ ರಾವ್, ಕಾರ್ಯದರ್ಶಿ ಕೆ.ಶಿವನಾಥ್ ರಾವ್. ಉಪಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಯು. ಚಿತ್ತರಂಜನ್, ಸಚಿನ್ ರಾವ್, ಯತಿನ್ ರಾವ್, ಧನಂಜಯ್...
Loading posts...
All posts loaded
No more posts
