ಹಳೆಗೇಟು : ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯದ ಹಳೆಗೇಟಿನ ಸಾಂಸ್ಕೃತಿಕ ಸಂಘದ ಇದರ ವತಿಯಿಂದ ನಡೆಯುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಸಂಜೆ ಹಳೆಗೇಟು ವಸಂತ ಕಟ್ಟೆಯ ಬಳಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಶ್ರೀನಿವಾಸ್ ರಾವ್, ಕಾರ್ಯದರ್ಶಿ ಕೆ.ಶಿವನಾಥ್ ರಾವ್. ಉಪಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಯು. ಚಿತ್ತರಂಜನ್, ಸಚಿನ್ ರಾವ್, ಯತಿನ್ ರಾವ್, ಧನಂಜಯ್...

ಕೊಲ್ಲಮೊಗ್ರದಲ್ಲಿ ಭಾರಿ ಮಳೆ – ಸೇತುವೆ ಮುಳುಗಡೆ – ಕಲ್ಮಕಾರು ಸಂಪರ್ಕ ಕಡಿತ.

ಕೊಲ್ಲಮೊಗ್ರ ಭಾಗದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಸೇತುವೆ ಮುಳುಗಡೆಯಾಗಿದ್ದು ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಅಶ್ವಥಮರದ ಸಮೀಪ ತಲುಪಿದ್ದು ಕಲ್ಮಕಾರು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.
Ad Widget

ಸುಳ್ಯ ತಾ.ಪಂ.ನಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ – ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.

ಸುಳ್ಯ: ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ಆ.16ರಂದು ನಡೆಯಿತು. ಸಭೆ ಪ್ರಾರಂಭವಾಗುತ್ತಿದ್ದಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ದಿನಗೂಲಿ ಸಂಖ್ಯೆ ಕಡಿಮೆ ಇರುವ ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶ್ನಿಸಿ ಯಾವ ಕಾರಣಕ್ಕೆ...

ಶ್ರಮದಾನ ನಡೆಸುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಿದ ನಿಡ್ವಾಳದ ವಿಷ್ಣುಸೇವಾ ಶಕ್ತಿ ಸಂಘಟನೆಯ ಸದಸ್ಯರು

ಕರಿಕ್ಕಳ : 78ನೇ ಸ್ವಾತಂತ್ರ್ಯೋತ್ಸವವನ್ನು ಶ್ರಮದಾನ ಮಾಡುವ ಮೂಲಕ ವಿಷ್ಣುಸೇವಾ ಶಕ್ತಿ ನಿಡ್ವಾಳ ಸಂಘಟನೆಯವರು ಆಚರಿಸಿದರು. ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು.

ಎಲಿಮಲೆ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಬೃಹತ್ ಪಂಜಿನ ಮೆರವಣಿಗೆ ಆ. 13 ರಂದು ಎಲಿಮಲೆ ಯಲ್ಲಿ ನಡೆಯಿತು. ಹಿರಿಯ ಸ್ವಯಂ ಸೇವಕರಾದ ಧರ್ಮಪಾಲ ಗಟ್ಟಿಗಾರು ಮೆರವಣಿಗೆಗೆ ಚಾಲನೆ ನೀಡಿದರು. ಪಂಜಿನ ಮೆರವಣಿಗೆ ನಂತರ ಸಭಾ ಕಾರ್ಯಕ್ರಮ...

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪ್ಪಾಡಿಯವರು ಸರ್ವರನ್ನು ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಅಮೃತ ಇವರು 78ನೇ ಧ್ವಜಾರೋಹಣ ಮಾಡುವರೆ "ಎಸ್ ಡಿ ಎಂ ಸಿ" ಅಧ್ಯಕ್ಷರಾದ ಶ್ರೀ ಶಿವರಾಮ ಉತ್ರoಬೆ...

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ

ಅರಂತೋಡು: 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತುಎಸ್ ಎಸ್ ಎಲ್ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು.2023-24 ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ...

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ 78 ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅರಂತೋಡು ಪ್ರಾಥಮಿಕ ಆರೋಗ್ಯಾಧಿಕಾರಿ ಪದ್ಮ ಸುಹಲಾ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಪ್ರಭಾರ ಚಂದ್ರಕಲಾ ,ಆರೋಗ್ಯ ಸಂರಕ್ಷಣಾಧಿಕಾರಿ ಚಂದ್ರಪ್ಪ, ತೊಡಿಕಾನ ಆರೋಗ್ಯ ಸಂರಕ್ಷಣಾಧಿಕಾರಿ ಭಾಗೀರಥಿ ,ಅಜ್ಜಾವರ ಆರೋಗ್ಯ ಸಂರಕ್ಷಣಾಧಿಕಾರಿ ಜಯಶ್ರೀ, ಆಲೆಟ್ಟಿ ಆರೋಗ್ಯ ಸಂರಕ್ಷಣಾಧಿಕಾರಿ ಯಶಸ್ವಿನಿ, ಅರಂತೋಡು...

ಹರಿಹರ ಪಲ್ಲತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದ್ವಜಾರೋಹಣವನ್ನು ನೆರವೇರಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾರಾ ಮಲ್ಲಾರ ಅವರು ಉಪಸ್ಥಿತರಿದ್ದರು.ಮಕ್ಕಳಿಗೆ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶಾಲೆಯ ವತಿಯಿಂದ ಸಿಹಿತಿಂಡಿಯನ್ನು...

ಮಿಥುನ್ ಮಲ್ಲಾರ ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆ

ಏನೆಕಲ್ಲು ಗ್ರಾಮದ ಮಿಥುನ್ ಮಲ್ಲಾರ ರವರು ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಇವರು ಇತ್ತೀಚೆಗೆ ಬಿಹಾರದ ಬೋಧಗಯದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡದಿಂದ ಪ್ರತಿನಿಧಿಸಿದ್ದರು. ಇವರು ಏನೆಕಲ್ಲು ಗ್ರಾಮದ ಮಲ್ಲಾರ ಮನೆ ಸುಂದರ ಗೌಡ ಮತ್ತು ವಸಂತಿ ದಂಪತಿ ಪುತ್ರ.
Loading posts...

All posts loaded

No more posts

error: Content is protected !!