- Saturday
- July 25th, 2026
ಅಜ್ಜಾವರ : ಸುಳ್ಯ ಮಂಡೆಕೋಲು ಅಡೂರು ಅಂತರ್ ರಾಜ್ಯ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಸೆಯುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಯಮಾಲ ಎ.ಕೆ. ರವರು ಪ್ರತ್ಯೇಕವಾಗಿ ಇಬ್ಬರಿಗೆ ದಂಡ ವಿಧಿಸಿದ ಘಟನೆ ವರದಿಯಾಗಿದೆ. ಸುಳ್ಯ ಅಡೂರು ಸಂಪರ್ಕಿತ ರಸ್ತೆಯು ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು ಇಲ್ಲಿ ವಾಹನದಲ್ಲಿ ಆಗಮಿಸಿ...
ಕಳೆದ 33 ವರ್ಷಗಳಿಂದ ಶಿಕ್ಷಣ ಸೇವೆ ನೀಡುತ್ತಿರುವ ಪೆರುವಾಜೆಯ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜು.13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ವಾಸುದೇವ ಪೆರುವಾಜೆ ಹಾಗೂ ಕಾರ್ಯದರ್ಶಿ ರಜನೀಶ್ ಸವಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತ್ಯಾಜ್ಯವನ್ನು ವಿಂಗಡಿಸದೆ ರಾತ್ರಿ ವೇಳೆಯಲ್ಲಿ ಪಟ್ಟಣ ಪಂಚಾಯತ್ ಆವರಣದಲ್ಲಿ ಕಸವನ್ನು ಎಸೆದ ಬೀದಿ ವ್ಯಾಪಾರಿಯೋರ್ವರಿಗೆ ಸುಳ್ಯ ಪಟ್ಟಣ ಪಂಚಾಯತ್ ರೂ.500 ದಂಡನೆ ವಿಧಿಸಿದ ಘಟನೆ ನಡೆದಿದೆ.
ಸುಬ್ರಮಣ್ಯ ಮೆಸ್ಕಾಂ ನ ವಿದ್ಯುತ್ ವಿತರಣ ಕೇಂದ್ರದಲ್ಲಿ ಮಾರ್ಚ್ ನಲ್ಲಿ 8 ಬ್ಯಾಟರಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್ ಎಂಬತನನ್ನು ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು. ಇನ್ನೊಬ್ಬ ಆರೋಪಿಯಾದ ಮುತ್ತುಮಣಿ ಎಂಬಾತನನ್ನು ಮಂಗಳೂರಿನಲ್ಲಿ ಅರೆಸ್ಟ್ ಮಾಡಿ ಆತನಿಂದ ಕೃತ್ಯಕ್ಕೆ ಬಳಕೆಯಾದ KA19AC 7392 ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು...
ಪ್ರತಿಭಟನೆಗೆ ಮುಂದಾದ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಎನ್.ಎಸ್ ಕರೆಗೆ ಸ್ಪಂದಿಸಿ ನಾಗರಹಾವಿನ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ ಆಡಳಿತಾಧಿಕಾರಿ ಎ.ಸಿ ಜುಬಿನ್ ಮಹಾಪಾತ್ರ https://youtu.be/xOnZR7T_110?si=uOkAAIL8Fzm-M9OT ಕುಕ್ಕೆ ಸುಬ್ರಹ್ಮಣ್ಯದ ಸಾರ್ವಜನಿಕ ಸ್ಥಳದಲ್ಲಿ ಸತ್ತ ನಾಗರಹಾವಿನ ಸಂಸ್ಕಾರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದವರು ನೆಪವೊಡ್ಡಿ ಹಿಂದೇಟು ಹಾಕಿದಾಗ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಪ್ರತಿಭಟನೆಗೆ ಮುಂದಾಗಿ ನಂತರ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ...
ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ, ಇಲ್ಲಿ ಸುಳ್ಯದ ಕೆ.ವಿ.ಜಿ ಕಾನೂನು ಕಾಲೇಜಿನ ಎನ್. ಎಸ್. ಎಸ್ ಘಟಕದ ವತಿಯಿಂದ ಒಂದು ದಿನದ ವಿಶೇಷ ಶಿಬಿರ ಜು.4ರಂದು ನಡೆಯಿತು.ಶಾಲೆಯ ವಠಾರದಲ್ಲಿ ಎನ್. ಎಸ್. ಎಸ್ ಸ್ವಯಂ ಸೇವಕರು ಶುಚಿ ಗೊಳಿಸಿ ತರಕಾರಿ ಕೈ ತೋಟವನ್ನು ನಿರ್ಮಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ ಬಿ,...
ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2024 -25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಜುಲೈ 13ರಂದು ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವುದಾಗಿ ನೂತನ ಅಧ್ಯಕ್ಷ ಚಂದ್ರಶೇಖರ್ ನಾಯರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ. ನೂತನ ಅಧ್ಯಕ್ಷ ಪದಾಧಿಕಾರಿಗಳ ಪದಪ್ರಧಾನ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81ರ ಪೂರ್ವ ಗವರ್ನರ್ ರಂಗನಾಥ್ ಭಟ್...
ಸುಬ್ರಹ್ಮಣ್ಯ ಜುಲೈ 11: ಸುಳ್ಯ ಕಡಬ ಪುತ್ತೂರು ಬೆಳ್ತಂಗಡಿ ಪ್ರದೇಶಗಳನ್ನು ಒಳಗೊಂಡ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ 2018ನೇ ವರ್ಷದ ಸಾಲ ಮನ್ನಾ ಯೋಜನೆಯು ಕಾರ್ಯಗತಗೊಳ್ಳದ ಹಾಗೂ ಸಾಲ ಮನ್ನಾ ವಂಚಿತ ರೈತರೆಲ್ಲರೂ ಸೇರಿ ಜುಲೈ 25ರಂದು ಪುತ್ತೂರು ಸಹಾಯಕ ಸಹಕಾರಿ ನಿಬಂಧಕರ ಕಚೇರಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಮಲೆನಾಡು ಹಿತ ರಕ್ಷಣಾ ವೇದಿಕೆ...
ಪೆರಾಜೆ:- ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ತುಂಬಿಸಿ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಘಟನೆಯ ಬಳಿಕ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರೊಬ್ಬರ ಪತ್ನಿಗೆ ವಾಟ್ಸಾಪ್ ಮೂಲಕ ಅವ್ಯಾಚ್ಯ...
ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಬುಧವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಬೆರೆತು, ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.ಪ್ರಥಮ ಬಾರಿಗೆ ಭೇಟಿ ನೀಡಿದ ಸಂಸದರನ್ನು ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ನೊಂದಿಗೆ ಸ್ವಾಗತಿಸಿದರು. ಭೇಟಿಯ ನೆನಪಿಗಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡರು ಸಂಸದರ ಮೂಲಕ ಹಲಸಿನ ಗಿಡವನ್ನು ನೆಡಲಾಯಿತು.ಬಳಿಕ...
Loading posts...
All posts loaded
No more posts
