ಸುಳ್ಯ : ಬೆಳ್ಳಾರೆಯಲ್ಲಿ 1812 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು, ಜನಜಾಗೃತಿ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ 1812ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ...

ಕಲ್ಲುಗುಂಡಿ ಕೂಲಿಶೆಡ್ ಬಳಿ ಕಾರು ಪಲ್ಟಿ 

ಕಲ್ಲುಗುಂಡಿ ಕೂಲಿಶೆಡ್ ಬಳಿ ಕಾರು ಪಲ್ಟಿಯಾದ  ಘಟನೆ ಸಂಜೆ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುವ ವೇಳೆ ಕಾರು ಕಲ್ಲುಗುಂಡಿ ಕೂಲಿಶೆಡ್ ಬಳಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
Ad Widget

ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಖಂಡನೀಯ : ರಂಜಿತ್ ರೈ ಮೇನಾಲ

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಬಿಜೆಪಿ ಶಾಸಕರಾಗಿರುವ ಡಾ. ಭರತ್ ಶೆಟ್ಟಿಯವರು, ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ಕುರಿತು ನೀಡಿದ ಹೇಳಿಕೆ ಖಂಡನೀಯ ಎಂದು  ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯ ರಂಜಿತ್ ರೈ‌ ಮೇನಾಲ ಹೇಳಿದ್ದಾರೆ.ಸಂಸತ್ತಿನೊಳಗೆ ಹೋಗಿ ರಾಹುಲ್ ಗಾಂಧಿ ಕೆನ್ನೆಗೆ ಬಾರಿಸುತೇನೆ ಎಂಬ ಹೇಳಿಕೆ ನೀಡಿದ್ದಾರೆ. ಜವಾಬ್ದಾರಿ ಇರುವ ಯಾರೇ ಆಗಲಿ ಈ...

ಮಂಡೆಕೋಲು:  ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಮಂಡೆಕೋಲು ಗ್ರಾಮದ‌ ಕನ್ಯಾನದಲ್ಲಿ ವಾಸು ಎಂಬವರ ಪತ್ನಿ ಕುಸುಮಾವತಿ(45) ಮನೆ ಸಮೀಪದಲ್ಲಿದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಮೃತರು, ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೂವಪ್ಪ ಗೌಡ ಕಂಚುಗಾರಗದ್ದೆ ನಿಧನ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಹೂವಪ್ಪ ಗೌಡ ಕಂಚುಗಾರಗದ್ದೆ ಅವರು ಕೆಲವು ಸಮಯಗಳಿಂದ ಅಸೌಖ್ಯತೆಯಿಂದ ಬಳಲುತ್ತಿದ್ದು, ಜುಲೈ 08 ರಂದು ರಾತ್ರಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 59 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಕೊಲ್ಲಮೊಗ್ರು ಕಟ್ಟ ಗೋವಿಂದನಗರದ ಅಂಗನವಾಡಿ ಕಾರ್ಯಕರ್ತೆ ಪುಷ್ಪಾವತಿ, ಮಕ್ಕಳಾದ ಪ್ರಜ್ವಲ್, ವೈಶಾಲಿ ಹಾಗೂ...

ಸಂಪಾಜೆ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ

ಸಂಪಾಜೆ ಲಯನ್ಸ್ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಚಾರ್ಟರ್ ನೈಟ್ ಸಮಾರಂಭವು ಜು.07  ರಂದು ಜ್ಯೂನಿಯರ್ ಕಾಲೇಜ್ ಸಂಪಾಜೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಜಿಲ್ಲೆ 317ಡಿಯ 2ನೇ ಉಪರಾಜ್ಯಪಾಲರಾದ ಲಯನ್ ಹೆಚ್ ಎಮ್ ತಾರಾನಾಥ ರವರು ಪ್ರತಿಜ್ಞಾವಿಧಿಯನ್ನು ನೆರವೇರಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಾಂತೀಯ ಅಧ್ಯಕ್ಷರಾದ ಲಯನ್ ಗಂಗಾಧರ ರೈ, ವಲಯ ಅಧ್ಯಕ್ಷರಾದ ಲಯನ್ ರೂಪಶ್ರೀ ರೈ, ನಿರ್ಗಮಿತ...

ಅಟಲ್ ಜೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿದ “ನರೇಂದ್ರ ವಿಹಾರ”ದ ನಾಮಫಲಕ ಅನಾವರಣ

ಅಂಬಟೆಡ್ಕದಲ್ಲಿ ಅಟಲ್ ಜೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಪಕ್ಷದ ನೂತನ ಕಾರ್ಯಾಲಯದ ಪರಿಸರಕ್ಕೆ "ನರೇಂದ್ರ ವಿಹಾರ” ಎಂಬ ನಾಮಕರಣ ಮಾಡಲಾಗಿದ್ದು ಇದರ ನಾಮಫಲಕ ಅನಾವರಣ ಹಾಗೂ ಬಿಜೆಪಿ ಕಾರ್ಯಕರ್ತರ ಸ್ನೇಹಮಿಲನ ಕಾರ್ಯಕ್ರಮವು ಜು.8 ರಂದು ನಡೆಯಿತು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಮಾತನಾಡಿ “ಹಿರಿಯರ ಶ್ರಮ ಪಕ್ಷದ ಬೆಳವಣಿಗೆಗೆ...

ಮರ್ಕಂಜ : ಕಂಡಡೊಂಜಿ ದಿನ – ಕಂಬಳ ಪ್ರಾತ್ಯಕ್ಷಿತೆ- ವಿವಿಧ ಸ್ಪರ್ಧೆಗಳೊಂದಿಗೆ ಗದ್ದೆಯಲ್ಲಿ ಮಿಂದೆದ್ದ ವಿದ್ಯಾರ್ಥಿಗಳು

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಅಮರ ಸಂಘಟನ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ- ಗುಳಿಗ ಸಾನಿಧ್ಯ ಪರಿವಾರ ಮರ್ಕಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ 5 ನೇ ವರ್ಷದ 'ಕಂಡಡೂಂಜಿ ದಿನ'' ಕಾರ್ಯಕ್ರಮ ವನ್ನು ಮರ್ಕಂಜದ ಪನ್ನೆಬೈಲಿನಲ್ಲಿ ಜುಲೈ 7ರಂದು ರೋಟರಿ ಪಿಯುಸಿಯ ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ...

ಜಿಲ್ಲೆಯಲ್ಲಿ ಧಾರಕಾರ ಮಳೆ ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ .

ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ದಿನಾಂಕ 09-07-2024 ರಂದು ಜಿಲ್ಲೆಯಾದ್ಯಂತ ಅಂಗನವಾಡಿ 1 ರಿಂದ 12 ನೇ ತರಗತಿ ವರೆಗೆ ಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ .

ನಾಳೆ ( ಜು.09) ಸುಳ್ಯ ಹಾಗೂ ಬೆಳ್ಳಾರೆಯ ವಿವಿಧ ಭಾಗಗಳಲ್ಲಿ ಪವರ್ ಕಟ್

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹಾಗೂ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಜು.09 ರಂದು ಮಂಗಳವಾರ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಮತ್ತು ವಿದ್ಯುತ್ ಮಾರ್ಗಕ್ಕೆ ತಾಗಿಕೊಂಡಿರುವ ಅಪಾಯಕಾರಿ ಸ್ವಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಇರುವುದರಿಂದ 11ಕೆ.ವಿ...
Loading posts...

All posts loaded

No more posts

error: Content is protected !!